Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೈಲು ಅಧಿಕಾರಿಗಳೇ ಪರೋಲ್ ಅರ್ಜಿ...

ಜೈಲು ಅಧಿಕಾರಿಗಳೇ ಪರೋಲ್ ಅರ್ಜಿ ನಿರ್ಧರಿಸಿದರೆ ನ್ಯಾಯಾಲಯದ ಮೇಲಿನ ಹೊರೆ ಇಳಿಯಲಿದೆ : ಹೈಕೋರ್ಟ್ ಮೌಖಿಕ ಅಭಿಪ್ರಾಯ

ವಾರ್ತಾಭಾರತಿವಾರ್ತಾಭಾರತಿ15 Dec 2025 9:19 PM IST
share
ಜೈಲು ಅಧಿಕಾರಿಗಳೇ ಪರೋಲ್ ಅರ್ಜಿ ನಿರ್ಧರಿಸಿದರೆ ನ್ಯಾಯಾಲಯದ ಮೇಲಿನ ಹೊರೆ ಇಳಿಯಲಿದೆ : ಹೈಕೋರ್ಟ್ ಮೌಖಿಕ ಅಭಿಪ್ರಾಯ

ಬೆಂಗಳೂರು : ಸಜಾಬಂದಿಗಳು ಪರೋಲ್‌ ಕೋರಿ ಸಲ್ಲಿಸುವ ಮನವಿಗಳ ಸಂಬಂಧ ಜೈಲು ಅಧಿಕಾರಿಗಳೇ ಸೂಕ್ತ ಆದೇಶ ಹೊರಡಿಸಿದರೆ, ನ್ಯಾಯಾಲಯದ ಮೇಲಿನ ಹೊರೆ ಕಡಿಮೆಯಾಗಲಿದೆ ಎಂದು ಹೈಕೋರ್ಟ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ಪರೋಲ್‌ ಮಂಜೂರಾತಿಗೆ ಕೋರಿದ ಸುಮಾರು 60 ಅರ್ಜಿಗಳು ಸೋಮವಾರ ಒಂದೇ ದಿನ ವಿಚಾರಣೆಗೆ ನಿಗದಿಯಾಗಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಸೋಮವಾರ ಮಧ್ಯಾಹ್ನದ ಕಲಾಪದ ವೇಳೆ ನ್ಯಾಯಮೂರ್ತಿಗಳು ಪರೋಲ್‌ ಮಂಜೂರಾತಿ ಕೋರಿದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡರು. ಒಂದೂವರೆ ಗಂಟೆ ಸಮಯದಲ್ಲಿ 25ಕ್ಕೂ ಅಧಿಕ ಪರೋಲ್‌ ಅರ್ಜಿಗಳ ವಿಚಾರಣೆ ನಡೆಸಿ ವಿಲೇವಾರಿ ಮಾಡಿದರು. ಸಂಜೆ 4.50 ಸಮಯವಾದರೂ ಪೆರೋಲ್‌ ಅರ್ಜಿಗಳ ವಿಚಾರಣೆ ಅಂತ್ಯವಾಗಿರಲಿಲ್ಲ.

ಈ ಹಂತದಲ್ಲಿ ಇನ್ನೆಷ್ಟು ಅರ್ಜಿಗಳಿವೆ, ಇನ್ನೂ ಮುಗಿದಿಲ್ಲವೇ ಎಂದು ಸರಕಾರಿ ವಕೀಲರನ್ನು ಕೇಳಿದ ನ್ಯಾಯಮೂರ್ತಿಗಳು, ವಿಚಾರಣಾ ಪಟ್ಟಿಯಲ್ಲಿನ ಪರೋಲ್‌ ಅರ್ಜಿಗಳ ಸಂಖ್ಯೆ ಗಮನಿಸಿದರು. ಆಗ 60 ಅರ್ಜಿಗಳು ವಿಚಾರಣೆ ನಿಗದಿಯಾಗಿರುವುದನ್ನು ಕಂಡ ನ್ಯಾಯಮೂರ್ತಿಗಳು ಸರಕಾರಿ ವಕೀಲರನ್ನು ಕುರಿತು, ಇಷ್ಟೆಲ್ಲ ಅರ್ಜಿಗಳನ್ನು ವಿಚಾರಣೆ ನಡೆಸಬೇಕಾದರೆ ಇಡೀ ದಿನದ ಸಮಯಬೇಕಾಗುತ್ತದೆ. ಜೈಲು ಅಧಿಕಾರಿಗಳೇ, ಪರೊಲ್‌ ಕೋರಿದ ಅರ್ಜಿಗಳನ್ನು ಪರಿಗಣಿಸಿ ಕಾನೂನು ಪ್ರಕಾರ ಆದೇಶಿಸಬೇಕು. ಇದರಿಂದ, ನ್ಯಾಯಾಲಯಕ್ಕೆ ಬರುವ ಅರ್ಜಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಇಲ್ಲವಾದರೆ ನ್ಯಾಯಾಲಯದ ಮೇಲೆ ಹೆಚ್ಚು ಹೊರೆಯಾಗುತ್ತದೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ಸರಕಾರಿ ವಕೀಲರಿಗೆ ನಿರ್ದೇಶಿಸಿದರು.

11 ವರ್ಷ ನಾಪತ್ತೆಯಾಗಿದ್ದ ಕೈದಿಗೆ ಪರೋಲ್ ನಿರಾಕರಣೆ:

ಸಜಾಬಂದಿಯೊಬ್ಬನಿಗೆ ಪರೋಲ್ ಕೋರಿ ಆತನ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ಹಾಜರಾಗಿ, 90 ದಿನಗಳ ಪರೋಲ್‌ ಮಂಜೂರಾತಿಗೆ ಕೋರಿದರು. ಆಗ ನ್ಯಾಯಮೂರ್ತಿಗಳು, ಜೈಲು ಅಧಿಕಾರಿಗಳು ಏಕೆ ಪರೋಲ್‌ ನಿರಾಕರಿಸಿದ್ದಾರೆ ಎಂದು ಪ್ರಶ್ನಿಸಿದರು.

ವಕೀಲರು ಉತ್ತರಿಸಿ, ಈ ಹಿಂದೆ 30 ದಿನಗಳ ಕಾಲ ಪರೋಲ್‌ ಮೇಲೆ ಬಿಡುಗಡೆಯಾಗಿದ್ದ ಕೈದಿ 11 ವರ್ಷ ತಲೆಮರೆಸಿಕೊಂಡಿದ್ದರು. ಕಳೆದ ವರ್ಷವಷ್ಟೇ ಪೊಲೀಸರು ಆತನನ್ನು ಪತ್ತೆ ಹಚ್ಚಿ ಜೈಲಿಗೆ ಕಳುಹಿಸಿದ್ದಾರೆ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, 30 ದಿನ ಪರೋಲ್‌ ನೀಡಿದ್ದಕ್ಕೆ 11 ವರ್ಷ ತಲೆಮರೆಸಿಕೊಂಡಿದ್ದಾನೆ. ಇದೀಗ ಮತ್ತೆ ಪರೋಲ್‌ ನೀಡಿದರೆ ಮತ್ತೆ 11 ವರ್ಷ ನಾಪತ್ತೆಯಾಗುತ್ತಾನೆ. ಅದಕ್ಕೆ ಅವಕಾಶ ಕೊಡಲಾಗುವುದಿಲ್ಲ. ಈ ಕೈದಿ ಪರೋಲ್‌ಗೆ ಅರ್ಹನಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X