Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಗಳೂರಿನಲ್ಲಿ ಬಾಲಕಿ ಅತ್ಯಾಚಾರ, ಕೊಲೆ...

ಮಂಗಳೂರಿನಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಮೂವರು ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ7 Feb 2026 9:45 PM IST
share
ಮಂಗಳೂರಿನಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಮೂವರು ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ಬೆಂಗಳೂರು : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈದ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಕಾಯಂಗೊಳಿಸಿರುವ ಹೈಕೋರ್ಟ್, ಇಂಥ ಪ್ರಕರಣಗಳಲ್ಲಿ ಅಪರಾಧಿಗಳ ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ತೀಕ್ಷ್ಣವಾಗಿ ನುಡಿದಿದೆ.

ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಜಯಬನ್ ಆದಿವಾಸಿ, ಮುಖೇಶ್ ಸಿಂಗ್ ಹಾಗೂ ಜಾರ್ಖಂಡ್‌ನ ಮನೀಶ್ ತಿರ್ಕಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಹಾಗೂ ಶಿಕ್ಷೆ ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್. ಪಿ.ಸಂದೇಶ್ ಹಾಗೂ ನ್ಯಾಯಮೂರ್ತಿ ವೆಂಕಟೇಶ್ ಟಿ‌. ನಾಯ್ಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದಲ್ಲಿ ಅಂತಹ ದುಷ್ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗುತ್ತದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗಲಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಅಪರಾಧಿಗಳು 7 ವರ್ಷ 7 ತಿಂಗಳ ಬಾಲಕಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆ ತೀರಿಸಿಕೊಂಡಿದ್ದಾರೆ. ಒಬ್ಬರ ನಂತರ ಮತ್ತೊಬ್ಬರು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು ಬಳಿಕ ಮೃತದೇಹವನ್ನು ಚರಂಡಿಗೆ ಎಸೆದಿರುವುದು ವಿಚಾರಣೆಯಲ್ಲಿ ದೃಢಪಟ್ಟಿದೆ. ಈ ಆಘಾತಕಾರಿ ಘಟನೆ ಕೇವಲ ನ್ಯಾಯಾಂಗ ಮಾತ್ರವಲ್ಲ, ಇಡೀ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದೆ ಎಂದಿರುವ ನ್ಯಾಯಪೀಠ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ದೃಢೀಕರಿಸಿದೆ.

ಪ್ರಕರಣವೇನು?

ಮಂಗಳೂರಿನ ವಾಮಂಜೂರು ಬಳಿಯ ಟೈಲ್ಸ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದ ಅಪರಾಧಿಗಳು, ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಪುತ್ರಿಯನ್ನು 2021ರ ನವೆಂಬರ್ 21ರಂದು, ಚಿಕ್ಕಿ ಕೊಡಿಸುವುದಾಗಿ ನಂಬಿಸಿ ತಮ್ಮ ಕೊಠಡಿಗೆ ಕರೆದೊಯ್ದಿದ್ದರು. ಒಬ್ಬ ಅರೋಪಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದರೆ, ಇನ್ನಿಬ್ಬರು ಅತ್ಯಾಚಾರ ಎಸಗಿದ್ದರು. ಬಳಿಕ ಆಕೆಯ ಕುತ್ತಿಗೆ ಹಿಸುಕಿ ಕೊಂದು, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಚರಂಡಿಗೆ ಎಸೆದಿದ್ದರು. ಮೃತದೇಹ ಪತ್ತೆಯಾದ ಬಳಿಕ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಗಳಿಗೆ ಗಲ್ಲು ಶಿಕ್ಷೆ ಜತೆಗೆ ತಲಾ 40 ಸಾವಿರ ರೂ. ದಂಡ ವಿಧಿಸಿತ್ತು.

Tags

High CourtMangaloredeath sentence
share
ವಾರ್ತಾಭಾರತಿ
ವಾರ್ತಾಭಾರತಿ
Next Story
X