Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳದ 74 ಅಸಹಜ ಸಾವುಗಳ ತನಿಖೆಗೆ...

ಧರ್ಮಸ್ಥಳದ 74 ಅಸಹಜ ಸಾವುಗಳ ತನಿಖೆಗೆ ಕೋರಿದ ಪಿಐಎಲ್; ಸರಕಾರದಿಂದ ವರದಿ ಕೇಳಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ18 March 2026 7:56 PM IST
share
ಧರ್ಮಸ್ಥಳದ 74 ಅಸಹಜ ಸಾವುಗಳ ತನಿಖೆಗೆ ಕೋರಿದ ಪಿಐಎಲ್; ಸರಕಾರದಿಂದ ವರದಿ ಕೇಳಿದ ಹೈಕೋರ್ಟ್

ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಅಸಹಜ ಸಾವುಗಳ ಸಂಬಂಧ ಪ್ರತ್ಯೇಕ ಎಫ್‌ಐ‌ಆರ್ ದಾಖಲಿಸಿ ತನಿಖೆ ನಡೆಸಲು ಎಸ್‌ಐಟಿ‌ಗೆ ‌ನಿರ್ದೇಶಿಸುವಂತೆ ಕೋರಿ ಸೌಜನ್ಯಾ ತಾಯಿ ಕುಸುಮವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ಸಂಭವಿಸಿದೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಯುಡಿಆರ್‌ ದಾಖಲಿಸಲಾಗಿದೆ. ಸದ್ಯ ರಚಿಸಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂಥದ್ದು ಏನೂ ಇಲ್ಲ. ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ, ಅದನ್ನು ತನಿಖೆಗೆ ಒಳಪಡಿಸಲಾಗುವುದು. ಇದೊಂದು ಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದೆ ಎಂದರು.

ಮುಂದುವರಿದು, ಅರ್ಜಿದಾರೆಯ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು. ಇದರ ಸಂಬಂಧಿತ ಎಲ್ಲ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು ಎಂದರಲ್ಲದೆ, 2002ರ ಮೇ 6ರಂದು ಸಿಕ್ಕಿದ್ದ ಬಾಲಕಿಯ ಶವಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ, ವೈದ್ಯರ ಅಭಿಪ್ರಾಯ ಎಲ್ಲವೂ ಇದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಪಂಚನಾಮೆ, ಮರಣೋತ್ತರ ಪರೀಕ್ಷೆ ನಡೆಸಿಲ್ಲ:

ಅರ್ಜಿದಾರರ ಪರ ವಕೀಲ ಎಸ್‌. ಬಾಲನ್‌ ವಾದ ಮಂಡಿಸಿ, ಅಸಹಜವಾಗಿ ಮೃತಪಟ್ಟವರ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಪ್ರಕ್ರಿಯೆ ಪಾಲಿಸದೆ ಮೃತದೇಹಗಳ ಸಂಸ್ಕಾರ ಮಾಡಲಾಗಿದೆ. 74 ಅಸಹಜ ಸಾವು ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪೊಲೀಸರು ಮೃತದೇಹಗಳ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಪಂಚಾಯಿತಿಗೆ ಶಿಫಾರಸು ಮಾಡಿದ್ದಾರೆ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬುದರ ಮಾಹಿತಿ ಇಲ್ಲ. ಈ ಸಂಬಂಧ ಎಲ್ಲ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು, ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ತನಿಖೆ ನಡೆಸಲಾಗಿಲ್ಲ. ಮೃತದೇಹಗಳನ್ನು ಸಂಸ್ಕಾರ ಮಾಡಲಾಗಿದೆ. ಆದರೆ, ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆದಿಲ್ಲ. 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು ಎಂಬುದು ನಮ್ಮ ಕೋರಿಕೆಯಾಗಿದೆ ಎಂದು ತಿಳಿಸಿದರು.

ಅಪರಿಚಿತ ಬಾಲಕಿಯ ಶವವೊಂದು 2002ರ ಮೇ 6ರಂದು ಧರ್ಮಸ್ಥಳ ಸಮೀಪದ ಬೈಲೂರು ಸೇತುವೆ ಬಳಿ ಸಿಕ್ಕಿತ್ತು. ಇದು ಅಸಹಜವಾಗಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಮಹಜರು ಪ್ರಕ್ರಿಯೆ ನಡೆಸಬೇಕು. ಆದರೆ, ಮಹಜರು ಪ್ರಕ್ರಿಯೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆಯಾಗಿಲ್ಲ. ಎಲ್ಲಿ ಶವ ಸಂಸ್ಕಾರ ಮಾಡಲಾಗಿದೆ ಎಂಬ ಮಾಹಿತಿ ಇಲ್ಲ. ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಕೆಲವರು ನಾಪತ್ತೆಯಾಗಿದ್ದಾರೆ ಎಂದರು.

ಆಗ ನ್ಯಾಯಪೀಠ, ತನಿಖಾ ವರದಿ ಎಲ್ಲಿದೆ? ಹಲವು ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆಯೇ ನಡೆಯುವುದಿಲ್ಲ. ಸಾವಿಗೆ ಕಾರಣ ಏನು ಎಂಬ ಮಾಹಿತಿ ಇರಬೇಕಲ್ಲವೇ? ಎಂದು ಕೇಳಿತು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌, ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ತನಿಖೆಯ ವಿವರ, ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ವಿಸ್ತೃತವಾದ ಆಕ್ಷೇಪಣೆಯಲ್ಲಿ ಸಲ್ಲಿಸಲಾಗುವುದು. ಸರ್ಕಾರದ ಸುತ್ತೋಲೆಯ ಪ್ರಕಾರ 2010ರವರೆಗಿನ ದಾಖಲೆಗಳನ್ನು ನಾಶಪಡಿಸಲಾಗಿದೆ. 20 ವರ್ಷಗಳ ಬಳಿಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪಿಐಎಲ್‌ ಸಲ್ಲಿಸಲಾಗಿದೆ. 2002ರ ದಾಖಲೆಗಳು ಇಲ್ಲ. 2023ರ ನವೆಂಬರ್‌ 23ರಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಹಳೆಯ ದಾಖಲೆಗಳನ್ನು ನಾಶಪಡಿಸಲಾಗಿದೆ. ಅರ್ಜಿದಾರರು ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡಿ ಏನೆಲ್ಲ ಮಾಡಬಹುದು ಅದನ್ನು ಮಾಡಲಾಗಿದೆ ಎಂದರು.

ಆಗ ನ್ಯಾಯಪೀಠ, ಈ ಹಂತದಲ್ಲಿ ಯಾವುದೇ ದಾಖಲೆ ಇಲ್ಲದೇ ಸರಕಾರ ಹೇಗೆ ತನಿಖೆ ಮಾಡುತ್ತದೆ? ಕೆಲವು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಸರಕಾರ ಹೇಳುತ್ತಿದೆ. ಅದನ್ನು ಹೇಗೆ ಹಾಜರುಪಡಿಸಲಾಗುತ್ತದೆ? ಎಂದು ಕೇಳಿತು.

ಈ ವೇಳೆ ಬಾಲನ್ ಅವರು, ಎಲ್ಲ ದಾಖಲೆಗಳನ್ನೂ ಸರಕಾರ ನಾಶಪಡಿಸಿದೆ. ಯುಡಿಆರ್‌ ದಾಖಲಿಸಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಪ್ರಕ್ರಿಯೆ ಪಾಲಿಸಲಾಗಿಲ್ಲ. ಎಸ್‌ಐಟಿ ರಚಿಸಲಾಗಿದೆ. ನಾವು ಪ್ರಸ್ತಾಪಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರಕಾರ ಏನು ತನಿಖೆ ಮಾಡಿದೆ ಎಂಬುದನ್ನು ತಿಳಿಸಲಿ. ಲಾಡ್ಜ್‌ನಲ್ಲಿ ಇದ್ದ ಬಾಲಕಿ ನಾಪತ್ತೆಯಾಗಿದ್ದಳು. ಆನಂತರ, ಮೃತದೇಹ ಪತ್ತೆಯಾಗಿದೆ. ಇದೆಲ್ಲಕ್ಕೂ ಸಂಬಂಧಿಸಿದ ದಾಖಲೆ ಸಲ್ಲಿಸಬೇಕು ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, 74 ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿತು.

Tags

High CourtDharmasthala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X