ಮೂವರು ನ್ಯಾಯಾಂಗ ಅಧಿಕಾರಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆ; ಕೇಂದ್ರಕ್ಕೆ ಸುಪ್ರೀಂ ಕೊಲಿಜಿಯಂ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ನ್ಯಾಯಾಂಗ ಅಧಿಕಾರಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದಲ್ಲಿ ಮಂಗಳವಾರ ನಡೆದ ಕೊಲಿಜಿಯಂ ಸಭೆಯಲ್ಲಿ ನ್ಯಾಯಾಂಗ ಅಧಿಕಾರಿಗಳಾದ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆದಂಬಾಡಿ ಗಣೇಶ್ ಶಾಂತಿ ಹಾಗೂ ಮಹದೇವಪ್ಪ ಬೃಂಗೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಕರ್ನಾಟಕ ಹೈಕೋರ್ಟ್‌ನ ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿದ್ದು, ಸದ್ಯ 45 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 17 ಹುದ್ದೆ ಖಾಲಿ ಇದ್ದು, ಒಂದು ವೇಳೆ ಕೊಲಿಜಿಯಂ ಶಿಫಾರಸಿನಂತೆ ಕೇಂದ್ರ ಸರ್ಕಾರ ಈ ಮೂವರನ್ನೂ ನೇಮಕ ಮಾಡಿದರೆ ಇನ್ನೂ 14 ಹುದ್ದೆಗಳು ಖಾಲಿ ಇರಲಿವೆ.
Next Story




