Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯೋಗೀಶ್ ಗೌಡ ಕೊಲೆ ಪ್ರಕರಣ; ವಿನಯ್‌...

ಯೋಗೀಶ್ ಗೌಡ ಕೊಲೆ ಪ್ರಕರಣ; ವಿನಯ್‌ ಕುಲಕರ್ಣಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕಾಲಾವಕಾಶ ನೀಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ7 May 2026 8:51 PM IST
share
ಯೋಗೀಶ್ ಗೌಡ ಕೊಲೆ ಪ್ರಕರಣ; ವಿನಯ್‌ ಕುಲಕರ್ಣಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಮೇಲ್ಮನವಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಮತ್ತಷ್ಟು ಕಾಲಾವಕಾಶ ನೀಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯದ ತೀರ್ಪು ರದ್ದುಕೋರಿ ಅಪರಾಧಿಗಳಾದ ವಿನಯ್‌ ಕುಲಕರ್ಣಿ (ಎ15) ಹಾಗೂ ಚಂದ್ರಶೇಖರ್ ಇಂಡಿ ಅಲಿಯಾಸ್‌ ಚಂದು ಮಾಮ (ಎ16) ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ಸಿಬಿಐ ಪರ ವಕೀಲರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕಾಗಿದ್ದು, ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿತು.

ಚನ್ನಕೇಶವ ಟಿಂಗರೀಕರ ಅರ್ಜಿ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ:

ಇನ್ನು ಇದೇ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರೀಕರ (ಎ19) ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರಿಗೆ ಐಪಿಸಿ ​ಸೆಕ್ಷನ್ 218 (ಶಿಕ್ಷೆಯಿಂದ ವ್ಯಕ್ತಿಯನ್ನು ಉಳಿಸುವ ಉದ್ದೇಶದಿಂದ ಸಾರ್ವಜನಿಕ ನೌಕರನು ತಪ್ಪು ದಾಖಲೆ ಅಥವಾ ಬರವಣಿಗೆ ಸಿದ್ಧಪಡಿಸುವುದು) ಜತೆಗೆ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ) ಹಾಗೂ ​ಸೆಕ್ಷನ್ 149 (ಅಕ್ರಮ ಕೂಟ) ಅಡಿಯ ಅಪರಾಧಗಳಿಗೆ ಶಿಕ್ಷೆ ವಿಧಿಸಲಾಗಿದೆ. ಇವು ಜಾಮೀನು ನೀಡಬಹುದಾದ ಅಪರಾಧಗಳಾಗಿವೆ. ​ಜಾಮೀನು ಅರ್ಹ ಅಪರಾಧಗಳಲ್ಲಿ ಶಿಕ್ಷೆ ಅಮಾನತು ಕೋರಿ ಮೇಲ್ಮನವಿ ಸಲ್ಲಿಸಿದ ನಂತರವೂ ಕಸ್ಟಡಿಯಲ್ಲಿ ಇರಿಸಲು ಸಾಧ್ಯವಿಲ್ಲ. ಆದ್ದರಿಂದ, ಅವರಿಗೆ ಜಾಮೀನು ನೀಡಬೇಕು ಎಂದು ಕೋರಿದರು.

ವಾದ ಆಲಿಸಿದ ನ್ಯಾಯಪೀಠ, ಟಿಂಗರೀಕರ ಅವರ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಬಹುದು ಎಂದು ತಿಳಿಸಿ, ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X