Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ...

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ತನಿಖಾಧಿಕಾರಿ ಟಿಂಗರೀಕರ ಅವರಿಂದಲೇ ನಕಲಿ ಸಾಕ್ಷ್ಯ ಸೃಷ್ಟಿ; ಸಿಬಿಐ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ26 May 2026 9:17 PM IST
share
ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ತನಿಖಾಧಿಕಾರಿ ಟಿಂಗರೀಕರ ಅವರಿಂದಲೇ ನಕಲಿ ಸಾಕ್ಷ್ಯ ಸೃಷ್ಟಿ; ಸಿಬಿಐ ಪ್ರತಿಪಾದನೆ

ಬೆಂಗಳೂರು: ಯೊಗೀಶ್‌ ಗೌಡ ಕೊಲೆ ನಡೆದಾಗ ಮೊದಲಿಗೆ ತನಿಖೆ ನಡೆಸಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಗರೀಕರ ಅವರು ನೈಜ ಆರೋಪಿಗಳನ್ನು ಪರಾರಿಯಾಗಲು ಬಿಟ್ಟು, ನಕಲಿ ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ.‌ ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಮುಚ್ಚಿಟ್ಟು, ನಕಲಿ ಶಸ್ತ್ರಾಸ್ತ್ರಗಳಿಗೆ ಮರಣೋತ್ತರ ಪರೀಕ್ಷೆ ನಡೆಸಿದಾಗ ದೊರೆತ ರಕ್ತ ಸವರುವ ಮೂಲಕ ಸ್ವತಃ ಸಾಕ್ಷಿ‌ ಸೃಷ್ಟಿಸಿದ್ದಾರೆ‌ ಎಂದು ಹೈಕೋರ್ಟ್‌ ಮುಂದೆ ಸಿಬಿಐ ಬಲವಾಗಿ ಪ್ರತಿಪಾದಿಸಿತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ 7 ವರ್ಷ ಜೈಲು ಶಿಕ್ಷೆ ರದ್ದು ಕೋರಿ ಮೇಲ್ಮನವಿ ಸಲ್ಲಿಸಿರುವ ಪ್ರಕರಣದ 19ನೇ ಆರೋಪಿ ಚನ್ನಕೇಶವ ಟಿಂಗರೀಕರ, ಶಿಕ್ಷೆ ಅಮಾನತುನಲ್ಲಿಟ್ಟು‌‌‌‌ ಜಾಮೀನು ಮಂಜೂರು ಮಾಡಬೇಕು‌‌ ಎಂದು ಮೇಲ್ಮನವಿಯಲ್ಲಿ ಮಧ್ಯಂತರ‌‌ ಮನವಿ ಮಾಡಿದ್ದಾರೆ.

ಮೇಲ್ಮನವಿ ಸಂಬಂಧ ಸಿಬಿಐ ಪರ ವಾದ ಮಂಡಿಸಿದ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ)‌ ಎಸ್‌.ವಿ.‌ ರಾಜು‌ ಅವರು, ಯೋಗೀಶ ಗೌಡ ಪ್ರಕರಣದಲ್ಲಿ ಟಿಂಗರೀಕರ ಅವರು ತನಿಖಾಧಿಕಾರಿಯಾಗಿದ್ದರು.‌ ಸಿಸಿ ಕ್ಯಾಮರಾ ದೃಶ್ಯಗಳನ್ನು ಸಂಗ್ರಹಿಸಿದ್ದರೂ 7ರಿಂದ 14ನೇ ಆರೋಪಿಗಳನ್ನು ಮೊದಲು ಆರೋಪಿಗಳನ್ನಾಗಿಸಿಲ್ಲ. ಕಾಂಗ್ರೆಸ್‌ ಮುಖಂಡ ವಿನಯ ಕುಲಕರ್ಣಿ ಅವರ ಹೆಸರನ್ನು ತೆಗೆಯದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಸಾಕ್ಷ್ಯ ನಾಶ ಅಪರಾಧಕ್ಕೆ ಐಪಿಸಿ ಸೆಕ್ಷನ್‌ 201 ಮತ್ತು 218ರ ಅಡಿ ಟಿಂಗರೀಕರ ಅವರಿಗೆ ಗರಿಷ್ಠ 7 ವರ್ಷ ಶಿಕ್ಷೆ ವಿಧಿಸಲಾಗಿದೆ. ‌ಈ ಪ್ರಕರಣಕ್ಕೆ ಕಾನೂನಿನಲ್ಲಿ ಇನ್ನೂ ಹೆಚ್ಚಿನ ಪ್ರಮಾಣ ಶಿಕ್ಷೆ ವಿಧಿಸಲು ಅವಕಾಶವಿದ್ದರೆ ವಿಚಾರಣಾ ನ್ಯಾಯಾಲಯ ವಿಧಿಸುತ್ತಿತ್ತು. ಮೇಲ್ಮನವಿದಾರರು ಜೈಲಿನಲ್ಲಿ 70ಕ್ಕೂ ಅಧಿಕ ದಿನವಷ್ಟೇ ಕಳೆದಿದ್ದಾರೆ. ಈ ಹಂತದಲ್ಲಿ ಶಿಕ್ಷೆ ಅಮಾನತು ಮಾಡಿ ಜಾಮೀನು ಮಂಜೂರು ಮಾಡಬಾರದು. 2 ವರ್ಷದ ನಂತರ ಅರ್ಜಿ ಸಲ್ಲಿಸಲು ಆದೇಶಿಸಬೇಕು. ಮೇಲ್ನೋಟಕ್ಕೆ ಜಾಮೀನು ನೀಡುವ ಹಾಗೂ ಶಿಕ್ಷೆ ಅಮಾನತು ಮಾಡುವ ಪ್ರಕರಣ ಇದೆ ಎಂಬುದನ್ನು ಮೇಲ್ಮನವಿದಾರರು ನ್ಯಾಯಾಲಯಕ್ಕೆ ತೋರಿಸಬೇಕು ಎಂದು ವಾದಿಸಿದರು.

ಟಿಂಗರೀಕರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ಇತರರ ಜತೆ ಸೇರಿ ಪಿತೂರಿ ನಡೆಸಿದ ಹಾಗೂ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪ ಟೆಂಗರೀಕರ ವಿರುದ್ಧವಿದೆ. ಅದಕ್ಕೆ 7 ವರ್ಷ ಶಿಕ್ಷೆ ವಿಧಿಸಲಾಗಿದೆ. 2026ರ ಏಪ್ರಿಲ್ 15ರಿಂದ ಟಿಂಗರೀಕರ ಜೈಲಿನಲ್ಲಿರುವುದರಿಂದ ಸ್ವಯಂಚಾಲಿಕತವಾಗಿ ಅವರನ್ನು ಅಮಾನತಿನಲ್ಲಿ ಇಡಲಾಗಿದೆ. ಪ್ರಕಣರದಲ್ಲಿ ಬಸವರಾಜ ಮುತ್ತಗಿ ಮತ್ತು 17ನೇ ಆರೋಪಿಯಾಗಿದ್ದ ಶಿವಾನಂದ ಶ್ರೀಶೈಲ ಬಿರಾದಾರ್‌ ಅವರು ಅಪ್ರೂವರ್‌ ಆಗಿದ್ದು, ಅವರ ಸಾಕ್ಷಿಯನ್ನು ಆಧರಿಸಿ ಟೆಂಗರೀಕರ ಅವರಿಗೆ ಶಿಕ್ಷೆ ವಿಧಿಸಲಾಗಿದೆ.‌ ಆದ್ದರಿಂದ, ಶಿಕ್ಷೆ ಅಮಾನತುಪಡಿಸಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಈ ಮಧ್ಯೆ ಶಿಕ್ಷೆ ಅಮಾನತಿಗೆ ವಿರೋಧಿಸಿ ಮಧ್ಯಂತರ ಅರ್ಜಿ ಸಲ್ಲಿಸಿರುವ ಸಂತ್ರಸ್ತರ ಪರ ವಕೀಲರು, ತಾವು ಎಎಸ್‌ಜಿ ಅವರ ವಾದವನ್ನು ಅಳವಡಿಸಿಕೊಳ್ಳುವುದಾಗಿ ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು‌ ಶುಕ್ರವಾರಕ್ಕೆ (ಮೇ 29) ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X