Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಮ್‌ ಸ್ವಾಪ್‌ ವಂಚನೆಯಾದರೆ ಟೆಲಿಕಾಂ...

ಸಿಮ್‌ ಸ್ವಾಪ್‌ ವಂಚನೆಯಾದರೆ ಟೆಲಿಕಾಂ ಕಂಪನಿಗಳೇ ಹೊಣೆ; ಹೈಕೋರ್ಟ್‌ ತೀರ್ಪು

ವಾರ್ತಾಭಾರತಿವಾರ್ತಾಭಾರತಿ6 Jun 2026 10:21 PM IST
share
ಸಿಮ್‌ ಸ್ವಾಪ್‌ ವಂಚನೆಯಾದರೆ ಟೆಲಿಕಾಂ ಕಂಪನಿಗಳೇ ಹೊಣೆ; ಹೈಕೋರ್ಟ್‌ ತೀರ್ಪು

ಬೆಂಗಳೂರು : ನಿರ್ಲಕ್ಷ್ಯದಿಂದ ನಕಲಿ ಸಿಮ್‌ಗಳನ್ನು ನೀಡುವ ಮೂಲಕ ಸಿಮ್ ಸ್ವಾಪ್ ವಂಚನೆಗೆ ಅನುವು ಮಾಡಿಕೊಡುವ ಟೆಲಿಕಾಂ ಸೇವಾ ಸಂಸ್ಥೆಗಳೇ ವಂಚನೆಯಿಂದಾಗುವ ಹಣದ ನಷ್ಟಕ್ಕೆ ಸಂಪೂರ್ಣ ಜವಾಬ್ದಾರಿಯಾಗಲಿವೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಜತೆಗೆ, ಶಿವಮೊಗ್ಗದ ಸಹಕಾರ ಬ್ಯಾಂಕ್ ಒಂದರ ಸಿಮ್‌ ಕಾರ್ಡ್ ಸ್ವಾಪ್‌‌ಗೆ ಅವಕಾಶ ನೀಡಿ ಆರ್ಥಿಕ ನಷ್ಟಕ್ಕೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಬ್ಯಾಂಕ್‌ಗೆ 55 ಲಕ್ಷ ರೂ. ಪರಿಹಾರ ಪಾವತಿಸುವಂತೆ ಭಾರತ ಸಂಚಾರ ನಿಗಮ ಲಿಮಿಟೆಡ್‌‌‌ಗೆ (ಬಿಎಸ್‌ಎನ್ಎ‌ಲ್) ನಿರ್ದೇಶಿಸಿದೆ.

ಡಿಜಿಟಲ್ ಹಣಕಾಸು ವಹಿವಾಟಿನ ಇಂದಿನ ಯುಗದಲ್ಲಿ, ನಕಲಿ ಸಿಮ್ ಅನ್ನು ಬದಲಾಯಿಸುವ ಅಥವಾ ನೀಡುವ ಮೊದಲು ಚಂದಾದಾರರ ಗುರುತನ್ನು ಪರಿಶೀಲಿಸುವುದು ಕೇವಲ ಖಾಲಿ ಔಪಚಾರಿಕತೆಯಲ್ಲ ಎಂದಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಏಕಸದಸ್ಯ ನ್ಯಾಯಪೀಠ, ಇದು (ಸಿಮ್ ನೀಡುವುದಕ್ಕೂ ಮುನ್ನ ಪರಿಶೀಲನೆ) ಒಂದು ನಿರ್ಣಾಯಕ ಭದ್ರತಾ ಕ್ರಮವಾಗಿದ್ದು, ಲಕ್ಷಾಂತರ ಬ್ಯಾಂಕ್ ಖಾತೆದಾರರ ಆರ್ಥಿಕ ಸುರಕ್ಷತೆಯು ಇದನ್ನು ಅವಲಂಬಿಸಿರುತ್ತದೆ ಎಂದು ಹೇಳಿದೆ.

ಆದ್ದರಿಂದ, ನಕಲಿ ಸಿಮ್‌ಗಳನ್ನು ನೀಡುವಾಗ ನಿರ್ಲಕ್ಷ್ಯದಿಂದ ನಡೆದುಕೊಂಡಿರುವುದು ಕಂಡು ಬಂದರೆ ಸೈಬರ್ ವಂಚನೆಯಿಂದಾಗಿ ಗ್ರಾಹಕರು ಅನುಭವಿಸಿದ ನಷ್ಟವನ್ನು ದೂರಸಂಪರ್ಕ ಕಂಪನಿಗಳನ್ನು ಸಂಪೂರ್ಣ ಹೊರಬೇಕಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬಿಎಸ್‌ಎನ್‌ಎಲ್ ಕರ್ತವ್ಯಲೋಪ:

ಶ್ರೀ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್‌ ನಿಯಮಿತವು ಬಿಎಸ್‌ಎನ್‌ಎಲ್‌ ನಂಬರ್‌ ಹೊಂದಿದ್ದು, ಸಿಮ್‌ ಸ್ವ್ಯಾಪ್‌ ವಂಚನೆಯಿಂದ 2019ರಲ್ಲಿ 87 ಲಕ್ಷ ರೂ.ಗಳನ್ನು ತನ್ನ ಬ್ಯಾಂಕ್‌ನಿಂದ ಕಳೆದುಕೊಂಡಿತ್ತು. ಬ್ಯಾಂಕ್‌ಗೆ ಸೇರಿದ ನಂಬರ್‌ ಅನ್ನು ಬಿಎಸ್‌ಎನ್‌ಎಲ್‌ ನಿರ್ಲಕ್ಷ್ಯದಿಂದ ವಂಚಕನಿಗೆ ನೀಡಿತ್ತು. ಇದರಿಂದ, ಬ್ಯಾಂಕ್‌ ಹಣವನ್ನು ವರ್ಗಾಯಿಸುವಾಗ ಬರುವ ಒಟಿಪಿಯು ನಕಲಿ ಸಿಮ್‌ ಹೊಂದಿರುವವರೆಗೆ ಹೋಗಿದ್ದು, ವಂಚನೆಯಾಗಿದೆ ಎಂದು ವಾದಿಸಿದೆ. ಈ ನೆಲೆಯಲ್ಲಿ ಬಿಎಸ್‌ಎನ್‌ಎಲ್‌ ನಿರ್ಲಕ್ಷ್ಯತನಿಂದ ಕರ್ತವ್ಯಲೋಪ ಎಸಗಿದ್ದು, ಅದರ ಉದ್ಯೋಗಿಯು ಸರಿಯಾಗಿ ಪರಿಶೀಲನೆ ನಡೆಸದೆ ನಕಲಿ ಸಿಮ್‌ ಕಾರ್ಡ್‌ ನೀಡಿದ್ದಾರೆ. ಬಿಎಸ್‌ಎನ್‌ಎಲ್‌ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿದ್ದರೆ, ನಕಲಿ ಸಿಮ್‌ ನೀಡಲಾಗುತ್ತಿರಲಿಲ್ಲ ಮತ್ತು ಆನಂತರ ಸೈಬರ್‌ ವಂಚನೆ ನಡೆಯುತ್ತಿರಲಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ನಕಲಿ ಸಿಮ್ ಚಂದಾದಾರರಲ್ಲದವರನ್ನು ತಲುಪಿದೆ ಎಂಬ ಅಂಶವೇ ಪರಿಶೀಲನೆಯನ್ನು ನಡೆಸಲಾಗಿಲ್ಲ ಅಥವಾ ನಿಷ್ಪ್ರಯೋಜಕವಾಗುವಷ್ಟು ಕಾಟಾಚಾರಕ್ಕೆ ಪರಿಶೀಲನೆ ನಡೆಸಲಾಗಿದೆ ಎಂಬುದಕ್ಕೆ ಪುರಾವೆಯಾಗಿದೆ. ಬಿಎಸ್‌ಎನ್‌ಎಲ್‌ನಂತಹ ದೂರಸಂಪರ್ಕ ಸೇವಾ ಪೂರೈಕೆದಾರರು ನಿರ್ಣಾಯಕ ಮೂಲಸೌಕರ್ಯ ಪೂರೈಕೆದಾರರಾಗಿದ್ದು, ಲಕ್ಷಾಂತರ ನಾಗರಿಕರು ಮತ್ತು ಸಂಸ್ಥೆಗಳು ತಮ್ಮ ಆರ್ಥಿಕ ಭದ್ರತೆಗಾಗಿ ಅವಲಂಬಿಸಿರುವ ಮೊಬೈಲ್ ಸಂಪರ್ಕವನ್ನು ನಂಬುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ಟೆಲಿಕಾಂ ಸೇವಾ ಪೂರೈಕೆದಾರರು ನಕಲಿ ಸಿಮ್ ಅನ್ನು ಅಜಾಗರೂಕತೆಯಿಂದ ನೀಡಿದಾಗ, ಅದು ಕೇವಲ ಒಬ್ಬ ಚಂದಾದಾರರಿಗೆ ಹಾನಿ ಉಂಟು ಮಾಡುವುದಿಲ್ಲ, ಅದು ಡಿಜಿಟಲ್ ಹಣಕಾಸು ವ್ಯವಸ್ಥೆಯಲ್ಲಿ ವ್ಯವಸ್ಥಿತ ದುರ್ಬಲತೆಯನ್ನು ಅನಾವರಣಗೊಳಿಸುತ್ತದೆ.‌ ಆದ್ದರಿಂದ, ಡಿಜಿಟಲ್ ಆರ್ಥಿಕತೆಯಲ್ಲಿ ಬಿಎಸ್ಎನ್ಎಲ್ ನಂತಹ ದೂರಸಂಪರ್ಕ ಸೇವಾ ಪೂರೈಕೆದಾರರ ಜವಾಬ್ದಾರಿ ಕೇವಲ ಖಾಸಗಿ ಮತ್ತು ಒಪ್ಪಂದದ ಮೇಲಲ್ಲ. ಅದು ವ್ಯವಸ್ಥಿತ ಮತ್ತು ಸಾರ್ವಜನಿಕವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಪರಿಹಾರ ಪಾವತಿಗೆ ಆದೇಶ:

ಭಾರತದಲ್ಲಿ ಸಿಮ್‌ ಸ್ವಾಪ್‌ ವಂಚನೆ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ನ್ಯಾಯಪೀಠ, ಇಂಥ ಸೈಬರ್‌ ವಂಚನೆ ತಡೆಯಲು ಕಠಿಣವಾದ ನಿಯಂತ್ರಣ ಕ್ರಮಕಗಳನ್ನು ಅನುಸರಿಬೇಕು ಎಂದು ನಿರ್ದೇಶಿಸಿದೆಯಲ್ಲದೆ, ಬ್ಯಾಂಕ್‌ಗೆ ಆಗಿರವ ನಷ್ಟವನ್ನು ವಸೂಲಿ ಮಾಡಲಾಗದಿದ್ದರೆ 50.5 ಲಕ್ಷ ರೂ.ಗಳನ್ನು ಬ್ಯಾಂಕ್‌ಗೆ ಬಿಎಎಸ್‌ಎನ್‌ಎಲ್‌ ನೀಡಬೇಕು. ಸೈಬರ್‌ ವಂಚನೆಯಿಂದಾಗಿರುವ ಸಮಸ್ಯೆಯ ಪರಿಹಾರದ ಭಾಗವಾಗಿ ಹೆಚ್ಚುವರಿಯಾಗಿ 5 ಲಕ್ಷ ರೂ.‌ಗಳನ್ನೂ ಪಾವತಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X