Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮದುವೆಯ ಭರವಸೆ ನೀಡಿ ವಂಚನೆ ಆರೋಪ;...

ಮದುವೆಯ ಭರವಸೆ ನೀಡಿ ವಂಚನೆ ಆರೋಪ; ಆರೋಪಿಯ ತಮ್ಮನನ್ನು ಬಂಧಿಸಿದ್ದ ಇನ್‌ಸ್ಪೆಕ್ಟರ್ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Jun 2026 10:37 PM IST
share
ಮದುವೆಯ ಭರವಸೆ ನೀಡಿ ವಂಚನೆ ಆರೋಪ; ಆರೋಪಿಯ ತಮ್ಮನನ್ನು ಬಂಧಿಸಿದ್ದ ಇನ್‌ಸ್ಪೆಕ್ಟರ್ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಹೈಕೋರ್ಟ್

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರೊಬೇಷನರಿ ಸಬ್‌ಇನ್‌ಸ್ಪೆಕ್ಟರ್ ಬದಲಿಗೆ ಅವರ ತಮ್ಮನನ್ನು ಬಂಧಿಸಿದ್ದ ಪೊಲೀಸರ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿರುವ ಹೈಕೋರ್ಟ್, ಯೂನಿಫಾರಂ ಇದೆ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾಡಬಹುದೇ? ಕಾನೂನು ಉಲ್ಲಂಘಿಸುವ ಪೊಲೀಸರನ್ನು ಅಮಾನತುಪಡಿಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದೆ.

ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ದಾವಣಗೆರೆಯ ಎನ್‌. ದರ್ಶನ್‌ ಆತನ ತಂದೆ-ತಾಯಿ ಹಾಗೂ ಸಹೋದರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಕಳೆದ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ ಚಿತ್ರದುರ್ಗ ಮಹಿಳಾ ಠಾಣೆ ತನಿಖಾಧಿಕಾರಿ ಖುದ್ದು ವಿಚಾರಣೆಗೆ ಹಾಜರಿದ್ದರು.

ಈ ವೇಳೆ ತನಿಖಾಧಿಕಾರಿಯನ್ನು ಕುರಿತು ನ್ಯಾಯಪೀಠ, ಮೊದಲ ಆರೋಪಿ ತಲೆಮರೆಸಿಕೊಂಡಿದ್ದಾರೆಂಬ ಕಾರಣಕ್ಕೆ ಆತನ ತಮ್ಮನನ್ನು ಬಂಧಿಸಿದ್ದೀರಿ. ಪ್ರಕರಣದಲ್ಲಿ ಮದುವೆಯ ಭರವಸೆ ನೀಡಿ ವಂಚನೆ ಎಸಗಿದ ಆರೋಪವಿದೆ. ಭರವಸೆ ನೀಡಿರುವುದು ತಮ್ಮನೇ? ಯಾವ ತಪ್ಪಿಲ್ಲದಿದ್ದರೂ ತಮ್ಮನನ್ನು ಬಂಧಿಸಿದ್ದೇಕೆ? ಎಂದು ಪ್ರಶ್ನಿಸಿತು.

ವಿನಾಕಾರಣ ಬಂಧಿಸುವುದು ಪೊಲೀಸರಿಗೆ ಆಟವಾಗಿಬಿಟ್ಟಿದೆ. ಒಬ್ಬ ವ್ಯಕ್ತಿಯನ್ನು ಬಂಧಿಸುವುದರಿಂದ ಆತನ ಜೀವನದ ಮೇಲಾಗುವ ಪರಿಣಾಮದ ಅರಿವು ಪೊಲೀಸರಿಗಿದೆಯೇ. ಒಮ್ಮೆ ಬಂಧನಕ್ಕೀಡಾದರೆ ಜೀವನ ಪೂರ್ತಿ ಹಣೆಪಟ್ಟಿಯಾಗಿ ಉಳಿದುಬಿಡುತ್ತದೆ. ನಿಜವಾಗಿಯೂ ಬಂಧನ ಅವಶ್ಯವಿರುವ ಪ್ರಕರಣದಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸುವುದಿಲ್ಲ, ಬೇಡವಾದ ಪ್ರಕರಣಗಳಲ್ಲಿ ಬಂಧಿಸಿ ಅನಗತ್ಯ ಕಿರುಕುಳ ನೀಡುತ್ತಾರೆ. ಇದೇ ಅವರಿಗೆ ಚಾಳಿಯಾಗಿದೆ ಎಂದು ತೀಕ್ಷ್ಣವಾಗಿ ನುಡಿಯಿತು.

ಪೊಲೀಸ್ ಸಮವಸ್ತ್ರ ಇದೆ ಎಂದು ಏನು ಬೇಕಾದರೂ ಮಾಡುತ್ತೀರಾ? ಬಂಧಿಸುವ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಅರ್ಜಿದಾರರನ್ನು ಬಂಧಿಸಿದ ಅಧಿಕಾರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗುವುದು. ಮ್ಯಾಜಿಸ್ಪ್ರೇಟ್‌ ಕೂಡಾ ಇಂತಹ ಬಂಧನಕ್ಕೆ ಅವಕಾಶ ನೀಡಬಾರದು. ಭವಿಷ್ಯದಲ್ಲಿ ಈ ರೀತಿ ಕಾನೂನು ಉಲ್ಲಂಘಿಸಿ ಸಾರ್ವಜನಿಕರನ್ನು ಬಂಧಿಸುವ ಯಾವುದೇ ಪೊಲೀಸರನ್ನು ಅಮಾನತುಪಡಿಸಲಾಗುವುದು ಎಂದು ನ್ಯಾಯಪೀಠ ಎಚ್ಚರಿಕೆ ನೀಡಿತು.

ಅಂತಿಮವಾಗಿ, ಅರ್ಜಿದಾರರನ್ನು ಅನಗತ್ಯವಾಗಿ ಬಂಧಿಸಿದ್ದ ಇನ್‌ಸ್ಪೆಕ್ಟರ್‌ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ನ್ಯಾಯಪೀಠ ಅರ್ಜಿ ವಿಚಾರಣೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X