Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಇಆರ್‌ಸಿ ಅನುಮೋದನೆ ಇಲ್ಲದೆ...

ಕೆಇಆರ್‌ಸಿ ಅನುಮೋದನೆ ಇಲ್ಲದೆ ಮೇಲ್ವಿಚಾರಣಾ ಶುಲ್ಕ ಪರಿಷ್ಕರಿಸುವ ಅಧಿಕಾರ ಕೆಪಿಟಿಸಿಎಲ್‌ಗೆ ಇಲ್ಲ : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 Jun 2026 9:25 PM IST
share
ಕೆಇಆರ್‌ಸಿ ಅನುಮೋದನೆ ಇಲ್ಲದೆ ಮೇಲ್ವಿಚಾರಣಾ ಶುಲ್ಕ ಪರಿಷ್ಕರಿಸುವ ಅಧಿಕಾರ ಕೆಪಿಟಿಸಿಎಲ್‌ಗೆ ಇಲ್ಲ : ಹೈಕೋರ್ಟ್

ಬೆಂಗಳೂರು : ವಿದ್ಯುತ್‌ ಕಾಮಗಾರಿಗಳನ್ನು ಸ್ವಯಂ ಪ್ರೇರಿತವಾಗಿ ನಿರ್ವಹಿಸಲು ಆಯ್ಕೆ ಮಾಡಿಕೊಳ್ಳುವ ಗ್ರಾಹಕರು ಪಾವತಿಸಬೇಕಾದ ಮೇಲ್ವಿಚಾರಣಾ ಶುಲ್ಕವನ್ನು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಅನುಮೋದನೆ ಇಲ್ಲದೆ ಪರಿಷ್ಕರಿಸುವ ಅಧಿಕಾರವನ್ನು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌) ಹೊಂದಿಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ಮಹಾರಾಷ್ಟ್ರ ಮೂಲದ ಅನುಷ್ಕಾ ರಿಯಾಲ್ಟಿ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸ್ವಯಂ-ನಿರ್ವಹಿಸಿದ ವಿದ್ಯುತ್‌ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಲ್ವಿಚಾರಣಾ ಶುಲ್ಕಗಳನ್ನು ಪರಿಷ್ಕರಿಸಲು ಕೆಪಿಟಿಸಿಎಲ್‌ಗೆ ಶಾಸನಬದ್ಧ ಅಧಿಕಾರವಿಲ್ಲ. ಶುಲ್ಕಗಳ ಮೇಲ್ವಿಚಾರಣೆಯಂಥ ಪರಿಷ್ಕರಣೆಗಳನ್ನು ಕೆಇಆರ್‌ಸಿ ಅನುಮೋದಿಸಬೇಕು ಎಂದು ಆದೇಶಿಸಿದೆ.

ಜತೆಗೆ, ಅರ್ಜಿದಾರರ ವಿರುದ್ಧ ಕೆಪಿಟಿಸಿಎಲ್‌ ಹೊರಡಿಸಿದ್ದ 1.2 ಕೋಟಿ ರೂ. ಬೇಡಿಕೆ ನೋಟಿಸ್‌ ಅನ್ನು ರದ್ದುಪಡಿಸಿರುವ ನ್ಯಾಯಪೀಠ, ಕೆಇಆರ್‌ಸಿ ನಿಗದಿಪಡಿಸಿರುವ ನಿಯಮದಂತೆ ಮೇಲ್ವಿಚಾರಣಾ ಶುಲ್ಕ ಪಾವತಿಸುವಂತೆ ಅರ್ಜಿದಾರ ಕಂಪನಿಗೆ ಆದೇಶಿಸಿದೆ.

ಹೈಕೋರ್ಟ್ ಹೇಳಿದ್ದೇನು?

ವಿದ್ಯುತ್‌ ಕಾಯ್ದೆ -2003ರ ಸೆಕ್ಷನ್‌ 39 ರಿಂದ 41ರ ಪ್ರಕಾರ ಕೆಪಿಟಿಸಿಎಲ್‌ ತನ್ನದೇ ಆದ ಮೇಲ್ವಿಚಾರಣಾ ಶುಲ್ಕಗಳನ್ನು ನಿಗದಿಪಡಿಸಲು ಅಥವಾ ಪರಿಷ್ಕರಿಸಲು ಅಧಿಕಾರ ಹೊಂದಿಲ್ಲ ಎಂದು ಉಲ್ಲೇಖಿಸಿರುವ ನ್ಯಾಯಾಲಯ, ಈ ನಿಬಂಧನೆಗಳು ಕೆಪಿಟಿಸಿಎಲ್‌ನಂಥ ರಾಜ್ಯ ಪ್ರಸರಣ ಉಪಯುಕ್ತತೆ ಮತ್ತು ಪ್ರಸರಣ ಪರವಾನಗಿದಾರರ ಕಾರ್ಯಗಳು, ಕರ್ತವ್ಯಗಳು ಇತ್ಯಾದಿಗಳನ್ನು ನಿಗದಿಪಡಿಸಿವೆ. ವಾಸ್ತವವಾಗಿ ಸ್ವಯಂ-ಕಾರ್ಯನಿರ್ವಹಣೆಯ ಕಾರ್ಯಗಳ ಮೇಲ್ವಿಚಾರಣೆಗಾಗಿ ಗ್ರಾಹಕರು ಪಾವತಿಸಬೇಕಾದ ಶುಲ್ಕಗಳನ್ನು ನಿರ್ಧರಿಸಲು ಅಥವಾ ಪರಿಷ್ಕರಿಸಲು ಕೆಪಿಟಿಸಿಎಲ್‌ಗೆ ಯಾವುದೇ ಅಧಿಕಾರ ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದೆ.

ಕೆಇಆರ್‌ಸಿ ನಿಗದಿಪಡಿಸಿದ ಮಿತಿಗಳನ್ನು ಮೀರಿ ಅನುಷ್ಕಾ ರಿಯಾಲ್ಟಿ ಮೇಲೆ ಕೆಪಿಟಿಸಿಎಲ್ ಮೇಲ್ವಿಚಾರಣಾ ಶುಲ್ಕಗಳನ್ನು ವಿಧಿಸಿದೆ. ನಿಯಂತ್ರಣ ಚೌಕಟ್ಟಿನ ಅಡಿಯಲ್ಲಿ ನಿಗದಿಪಡಿಸಿದ ಮಿತಿಯನ್ನು ಮೀರಿ ಮೇಲ್ವಿಚಾರಣಾ ಶುಲ್ಕಗಳನ್ನು ಪರಿಷ್ಕರಿಸಲು ಕೆಪಿಟಿಸಿಎಲ್‌ ಅಧಿಕಾರ ಹೊಂದಿಲ್ಲದಿದ್ದಾಗ ಬೇಡಿಕೆ ನೋಟಿಸ್‌ ಅನ್ನು ಸಹ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?

ಅನುಷ್ಕಾ ರಿಯಾಲ್ಟಿ ಬೆಂಗಳೂರಿನಲ್ಲಿ ಬಹುಮಹಡಿ ವಸತಿ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿತ್ತು. ಆ ಸಂಬಂಧ ರಾಜ್ಯದ ವಿದ್ಯುತ್‌ ಯುಟಿಲಿಟಿ ಕಂಪನಿಯಿಂದ ಕೆಲವು ವಿದ್ಯುತ್‌ ಕೆಲಸಗಳನ್ನು ನಿರ್ವಹಿಸುವ ಬದಲು ಸ್ವಯಂ-ನಿರ್ವಹಿಸಲು ನಿರ್ಧರಿಸಿತು. ಅಂತಹ ಸಂದರ್ಭಗಳಲ್ಲಿ ಸ್ವಯಂ-ನಿರ್ವಹಣೆಯ ಕಾಮಗಾರಿಗಳ ಮೇಲ್ವಿಚಾರಣೆಯ ವೆಚ್ಚವನ್ನು ಭರಿಸಲು ಮತ್ತು ಸುರಕ್ಷತೆ ಮತ್ತು ಇತರ ಅವಶ್ಯಕತೆಗಳೊಂದಿಗೆ ಅವುಗಳ ಪಾಲನೆಯನ್ನು ಖಾತ್ರಿಪಡಿಸಿಕೊಳ್ಳಲು ಕೆಪಿಟಿಸಿಎಲ್‌ಗೆ ಮೇಲ್ವಿಚಾರಣಾ ಶುಲ್ಕವನ್ನು ಸಂಗ್ರಹಿಸಲು ಅನುಮತಿಸಲಾಗಿದೆ.

ಕೆಇಆರ್‌ಸಿ ನಿಯಮಗಳ ಪ್ರಕಾರ, ಅಂತಹ ಮೇಲ್ವಿಚಾರಣಾ ಶುಲ್ಕಗಳನ್ನು ಕೆಲಸದ ಅಂದಾಜು ವೆಚ್ಚದ ಶೇಕಡ 10 ಪ್ರಮಾಣ ಅಥವಾ 15 ಲಕ್ಷ ರೂ. ಎರಡರಲ್ಲಿ ಯಾವುದು ಕಡಿಮೆಯೋ ಅದಕ್ಕೆ ಮಿತಿಗೊಳಿಸಲಾಗಿದೆ. ಆದರೆ, ಕೆಪಿಟಿಸಿಎಲ್‌, 15 ಲಕ್ಷ ರೂ. ಬದಲಿಗೆ 1.2 ಕೋಟಿ ರೂ. ಮೇಲ್ವಿಚಾರಣಾ ಶುಲ್ಕ ಪಾವತಿಸುವಂತೆ ಬೇಡಿಕೆ ನೋಟಿಸ್‌ ನೀಡಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X