Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ...

ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಪ್ರಶ್ನಿಸಿದ ಅರ್ಜಿ; ಕೇಂದ್ರ, ರಾಜ್ಯ ಸೃಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ30 Jun 2026 8:15 PM IST
share
ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಪ್ರಶ್ನಿಸಿದ ಅರ್ಜಿ; ಕೇಂದ್ರ, ರಾಜ್ಯ ಸೃಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರಾಜ್ಯದ 80ಕ್ಕೂ ಅಧಿಕ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವೇತನ ಪರಿಷ್ಕರಣೆ ಮಾಡಿ 2026ರ ಮೇ 22ರಂದು ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಕರ್ನಾಟಕದಲ್ಲಿ ಅಂದಾಜು 2 ಸಾವಿರ ಮಾರಾಟಗಾರರನ್ನು ಹೊಂದಿರುವ ದೆಹಲಿ ಮೂಲದ ದಿ ಫೆಡರೇಷನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ (ಎಫ್ಎಡಿಎ) ಹಾಗೂ ಬೆಂಗಳೂರಿನಲ್ಲಿರುವ ಅದರ ನಾಲ್ಕು ಸದಸ್ಯ ಸಂಸ್ಥೆಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಕಾರ್ಮಿಕ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆ, ಕಾರ್ಮಿಕ ಸಂಘಟನೆಗಳಾದ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಕರ್ನಾಟಕ ಜನರಲ್ ಲೇಬರ್ ಯೂನಿಯನ್, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್‌ಗೆ (ಸಿಐಟಿಯು) ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 3ಕ್ಕೆ ಮುಂದೂಡಿತು.

ಅರ್ಜಿಯಲ್ಲೇನಿದೆ?

ಎಫ್ಎಡಿಎ ರಾಜ್ಯದಲ್ಲಿ 1,998 ಮಾರಾಟಗಾರರನ್ನು ಹೊಂದಿದ್ದು, ಅಂದಾಜು 2 ಲಕ್ಷ ಜನರಿಗೆ ನೇರ ಉದ್ಯೋಗ ದೊರಕಿಸಿದೆ. ಈ ಮೂಲಕ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಚಟುವಟಿಕೆಗೆ ಎಫ್‌ಎ‌ಡಿಎ ಮತ್ತದರ ಸದಸ್ಯ ಕಂಪನಿಗಳು ದೊಡ್ಡ ಕೊಡುಗೆ ನೀಡುತ್ತಿವೆ. ಸರ್ಕಾರದ ವೇತನ ಪರಿಷ್ಕರಣೆ ಇದಕ್ಕೆ ಹಿನ್ನಡೆ ಉಂಟು ಮಾಡುವ ಆತಂಕವಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಕೇಂದ್ರ ಸರ್ಕಾರ 'ಕಾರ್ಮಿಕ ಸಂಹಿತೆ-2019' ಜಾರಿಗೆ ತಂದು ಕನಿಷ್ಟ ವೇತನ ಕಾಯ್ದೆ-1948ನ್ನು 2025ರಲ್ಲಿ ನಿರಸನಗೊಳಿಸಿದೆ. ದಕ್ಷಿಣದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈಗಾಗಲೇ ಕನಿಷ್ಠ ವೇತನ ಹೆಚ್ಚಾಗಿಯೇ ಇದೆ. ಹೀಗಿರುವಾಗ, ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಜಾರಿಗೆ ಬಂದರೆ ಆಟೋಮೊಬೈಲ್ ವಲಯದ ಉದ್ದಿಮೆ ಹಾಗೂ ಮಾರಾಟಗಾರರಿಗೆ ದೊಡ್ಡ ಹೊಡೆತ ಬಿದ್ದು, ಭಾರಿ ಆರ್ಥಿಕ ನಷ್ಟ ಉಂಟಾಗಲಿದೆ. ಆದ್ದರಿಂದ, ಕನಿಷ್ಠ ವೇತನ ಪರಿಷ್ಕ ರಣೆ ಮಾಡಿ 2026ರ ಮೇ 22ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಕಾನೂನು ನ್ಯೂನ್ಯತೆಗಳನ್ನು ಹೊಂದಿದ್ದು, ಅದನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X