Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ವಿವಿಧೆಡೆಯ 52 ಪ್ರಕರಣಗಳನ್ನು...

ರಾಜ್ಯದ ವಿವಿಧೆಡೆಯ 52 ಪ್ರಕರಣಗಳನ್ನು ಹಿಂಪಡೆದಿದ್ದ ಸರಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ವಾರ್ತಾಭಾರತಿವಾರ್ತಾಭಾರತಿ2 July 2026 6:23 PM IST
share
ರಾಜ್ಯದ ವಿವಿಧೆಡೆಯ 52 ಪ್ರಕರಣಗಳನ್ನು ಹಿಂಪಡೆದಿದ್ದ ಸರಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಇನ್ನಿತರ ಕೆಲ ಪ್ರಕರಣಗಳೂ ಸೇರಿದಂತೆ ಹಲವು ರಾಜಕಾರಣಿಗಳು, ರೈತಪರ, ಕನ್ನಡಪರ ಹಾಗೂ ಸಾಮಾಜಿಕ ಹೋರಾಟಗಾರರ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣಗಳನ್ನು ಹಿಂಪಡೆದಿರುವ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವಂತೆ 2026ರ ಮೇ 27ರಂದು ರಾಜ್ಯ ಗೃಹ ಇಲಾಖೆಯು ಸರ್ಕಾರಿ ಅಭಿಯೋಜಕರಿಗೆ ಆದೇಶಿಸಿದ್ದನ್ನು ಪ್ರಶ್ನಿಸಿ ವಕೀಲ ಗಿರೀಶ್‌ ಭಾರದ್ವಾಜ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ವೆಂಕಟೇಶ್‌ ದಳವಾಯಿ ವಾದ ಮಂಡಿಸಿ, ಮೂವರು ಹಿರಿಯ ಸಚಿವರ ಶಿಫಾರಸಿನ ಮೇರೆಗೆ ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಪ್ರಾಸಿಕ್ಯೂಷನ್‌ ಹಿಂಪಡೆದಿದೆ. ಈ ಸಂಬಂಧ 2025ರಲ್ಲಿ ಇದೇ ನ್ಯಾಯಾಲಯ ಹೊರಡಿಸಿರುವ ಆದೇಶಕ್ಕೆ ವಿರುದ್ಧವಾದ ನಿಲುವನ್ನು ಸರ್ಕಾರ ತಳೆದಿದೆ. ಇದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ತಾರಾನಾಥ್‌ ಪೂಜಾರಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಆಲಿಸಿದ ನ್ಯಾಯಪೀಠ, ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿತು. ಜತೆಗೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಗೆ ನೋಟಿಸ್‌ ಜಾರಿ ಮಾಡಿದ ಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ಪ್ರಕರಣಗಳನ್ನು ಹಿಂಪಡೆದಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ಈ ಮಧ್ಯೆ, ಪ್ರಕರಣದಲ್ಲಿ ಮೂರನೇ ಪ್ರತಿವಾದಿಯಾಗಿರುವ ಹಾಲಿ ಆರೋಗ್ಯ ಸಚಿವ ಯು.ಟಿ. ಖಾದರ್‌ಗೆ ನೋಟಿಸ್‌ ಜಾರಿಗೊಳಿಸಲು ನಿರಾಕರಿಸಿದ ನ್ಯಾಯಪೀಠ, ಸದನದಲ್ಲಿ ಸದಸ್ಯರು ನೀಡುವ ಹೇಳಿಕೆಗೆ ವಿನಾಯಿತಿ ಇರುತ್ತದೆ. ಇದನ್ನು ಆಧರಿಸಿ ಅವರನ್ನು ಪ್ರತಿವಾದಿ ಮಾಡಲಾಗದು ಎಂದು ಮೌಖಿಕವಾಗಿ ಹೇಳಿತು.

ಇದನ್ನು ಸಮರ್ಥಿಸಲು ವಕೀಲ ವೆಂಕಟೇಶ್‌ ದಳವಾಯಿ ಪ್ರಯತ್ನಿಸಿದರೂ ಅದನ್ನು ಒಪ್ಪದ ಪೀಠವು ಯು.ಟಿ. ಖಾದರ್‌ಗೆ ನೋಟಿಸ್‌ ಜಾರಿ ಮಾಡಲು ನಿರಾಕರಿಸಿ, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್‌ 28ಕ್ಕೆ ಮುಂದೂಡಿತು.

ಪ್ರಕರಣವೇನು?

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣಗಳನ್ನು ಹಿಂಪಡೆಯುವ ಕುರಿತ ಪ್ರಸ್ತಾವನೆಯನ್ನು 2026ರ ಮೇ 21ರಂದು ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿತ್ತು. ಮೇ 27ರಂದು ಗೃಹ ಇಲಾಖೆ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶಿಸಿ ಆದೇಶ ಹೊರಡಿಸಿತ್ತು. ಇದರಿಂದ, ಗೃಹ ಇಲಾಖೆಯ ಆದೇಶ ಹಾಗೂ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ. ಸರ್ಕಾರದ ತೀರ್ಮಾನವನ್ನು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವಿರೋಧಿಸಿತ್ತು ಎಂಬ ವಿಚಾರ ಮಾಹಿತಿ ಹಕ್ಕು (ಆರ್‌ಟಿಐ) ದಾಖಲೆಗಳಿಂದ ತಿಳಿದುಬಂದಿದೆ. ಹೀಗಿದ್ದರೂ, ಸರ್ಕಾರ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X