Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು...

ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ; ಶಿಕ್ಷಕಿ ವಿರುದ್ಧದ ಪ್ರಕರಣಕ್ಕೆ ತಡೆ ‌ನೀಡಲು ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ6 July 2026 11:56 PM IST
share
ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ; ಶಿಕ್ಷಕಿ ವಿರುದ್ಧದ ಪ್ರಕರಣಕ್ಕೆ ತಡೆ ‌ನೀಡಲು ಹೈಕೋರ್ಟ್ ನಕಾರ

ಬೆಂಗಳೂರು : ‌ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಪ್ರಕರಣದಲ್ಲಿ ಶಿಕ್ಷಕಿಯೊಬ್ಬರ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲಾಗದು ಎಂದು ತೀಕ್ಷ್ಣವಾಗಿ ನುಡಿದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಸುರತ್ಕಲ್‌ನ‌‌ ಹೋಲಿ ಫ್ಯಾಮಿಲಿ ಶಾಲೆಯ‌ ಶಿಕ್ಷಕಿ ಸಿಸ್ಟರ್ ಆಶಾ ಕ್ರಾಸ್ಟಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆಯೇ ನ್ಯಾಯಪೀಠ ಅರ್ಜಿದಾರ ಪರ ವಕೀಲರನ್ನು ಕುರಿತು ಶಿಕ್ಷಕಿ ಏಕೆ ಮಗುವನ್ನು ಹೊಡೆದರು ಎಂದು ಪ್ರಶ್ನಿಸಿತು. ಅರ್ಜಿದಾರ ಪರ ವಕೀಲರು, ನಾವಲ್ಲ ಎಂದು ಹೇಳುತ್ತಿದ್ದಂತೆಯೇ ಕೋಪಗೊಂಡ ನ್ಯಾಯಮೂರ್ತಿಗಳು, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ.‌‌ ಇಂತಹ ನಡೆಯನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ತೀಕ್ಷ್ಣವಾಗಿ ಹೇಳಿದರು.

ಬಳಿಕ ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಹಾಗೂ ದೂರುದಾರೆಯಾದ ಮಗುವಿನ ತಾಯಿ ಶಫ್ರೀನಾ ಅವರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಸುರತ್ಕಲ್ ಪೊಲೀಸ್ ಠಾಣೆಗೆ 2026ರ ಜನವರಿ 31ರಂದು ದೂರು ನೀಡಿದ್ದ ಶಫ್ರೀನಾ, ನನ್ನ 6 ವರ್ಷದ ಮಗಳು ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಯುಕೆಜಿ ವ್ಯಾಸಂಗ ಮಾಡುತ್ತಿದ್ದು, ಈ ಹಿಂದೆ ತರಗತಿಯಲ್ಲಿ ಮಗಳಿಗೆ ಶಿಕ್ಷಕಿ ಆಶಾ ಕ್ರಾಸ್ಟಾ ಹೊಡೆದಿದ್ದರು‌. ಈ ವಿಚಾರವನ್ನು ಶಾಲೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಮಾತುಕತೆ ನಡೆಸಿ ಮುಕ್ತಾಯಗೊಳಿಸಿದ್ದರು. ಮುಂದೆ ಈ‌ ರೀತಿ ನಡೆಯುವುದಿಲ್ಲ ಎಂದು ಶಿಕ್ಷಕಿ ಆಶಾ ಕ್ರಾಸ್ಟಾ ಅವರೂ ತಿಳಿಸಿದ್ದರು. ಹೀಗಿದ್ದರೂ, 2026ರ ಜನವರಿ 30ರಂದು ನನ್ನ ಮಗಳಿಗೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ‌. ಆದ್ದರಿಂದ, ಶಿಕ್ಷಕಿ ಆಶಾ ಕ್ರಾಸ್ಟಾ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು.ಈ ದೂರು ಆಧರಿಸಿ ಪೊಲೀಸರು, ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75 (ಮಕ್ಕಳ ಮೇಲೆ ಕ್ರೌರ್ಯ) ಹಾಗೂ ಭಾರತೀಯ ನ್ಯಾಯ (ಬಿಎನ್‌ಎಸ್) ಸೆಕ್ಷನ್ 118(1)ರ (ಹೊಡೆದು ದೈಹಿಕ ನೋವು ಅಥವಾ ಗಾಯವನ್ನು ಉಂಟುಮಾಡುವುದು) ಅಡಿ ಎಫ್ಐಆರ್ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ವಿಚಾರಣಾ ನ್ಯಾಯಾಲಯಕ್ಕೆ ಆರೋಪ‌ಪಟ್ಟಿ ‌ಸಲ್ಲಿಸಿದ್ದರು. ಪ್ರಕರಣ ಮಂಗಳೂರಿನ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X