Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಂಗವಿಕಲರ ಹಕ್ಕುಗಳ ಕಾಯ್ದೆಯ ದುರುಪಯೋಗ...

ಅಂಗವಿಕಲರ ಹಕ್ಕುಗಳ ಕಾಯ್ದೆಯ ದುರುಪಯೋಗ ಸಲ್ಲದು : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 July 2026 11:50 PM IST
share
ಅಂಗವಿಕಲರ ಹಕ್ಕುಗಳ ಕಾಯ್ದೆಯ ದುರುಪಯೋಗ ಸಲ್ಲದು : ಹೈಕೋರ್ಟ್

ಬೆಂಗಳೂರು: ಅಂಗವಿಕಲರ ವಿರುದ್ಧ ತಾರತಮ್ಯವೆಸಗಿದ ಯಾವುದೇ ಆರೋಪವಿಲ್ಲದ ಪ್ರಕರಣವೊಂದರಲ್ಲಿ ಅಂಗವಿಕಲರ ಹಕ್ಕುಗಳ ಕಾಯ್ದೆ-2016ರ ಅಡಿಯಲ್ಲಿ ರಾಜ್ಯ ಅಂಗವಿಕಲರ ಆಯುಕ್ತರು ನೀಡಿದ್ದ ಎಚ್ಚರಿಕೆ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಅಂಗವಿಕಲರ ಹಕ್ಕುಗಳ ಕಾಯ್ದೆಯಂತಹ ಜನಪರ ಹಾಗೂ ಕಲ್ಯಾಣಕಾರಿ ಕಾನೂನುಗಳನ್ನು ಸಾಮಾನ್ಯ ಅಪಾರ್ಟ್‌ಮೆಂಟ್ ಅಥವಾ ನೆರೆಹೊರೆಯ ವಿವಾದಗಳನ್ನು ಬಗೆಹರಿಸಲು ಬಳಸಬಾರದು ಎಂದು ಎಚ್ಚರಿಸಿದೆ.

ಅಂಗವಿಕಲರ ಹಕ್ಕುಗಳ ಆಯುಕ್ತರು ನೀಡಿದ್ದ ಎಚ್ಚರಿಕೆ ಪ್ರಶ್ನಿಸಿ ಅಪಾರ್ಟ್‌ಮೆಂಟ್‌ ನಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಇಂತಹ ಕಾನೂನುಗಳ ದುರುಪಯೋಗದಿಂದ ನಿಜವಾದ ಸಂತ್ರಸ್ತ ಅಂಗವಿಕಲರಿಗೆ ಸಿಗಬೇಕಾದ ನ್ಯಾಯ ಹಾಗೂ ಸೌಲಭ್ಯಗಳು ವಿಳಂಬವಾಗುವ ಸಾಧ್ಯತೆ ಇದೆ ಎಂದು ಮಾರ್ಮಿಕವಾಗಿ ನುಡಿದಿದೆ.

ಆರೋಪವೇನು?

ಪ್ರಕರಣದಲ್ಲಿ ದೈಹಿಕ ಅಂಗವೈಕಲ್ಯ ಹೊಂದಿರುವ ದೂರುದಾರರು, ತಮ್ಮ ನಿವಾಸದ ಎದುರು ಸಿಸಿ ಕ್ಯಾಮರಾ ಅಳವಡಿಸಲಾಗಿದೆ, ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ, ನಿರ್ವಹಣಾ ಶುಲ್ಕ ಬಾಕಿ ಇರುವ ಮಾಹಿತಿ ವಾಟ್ಸ್ಆ್ಯಪ್ ಗ್ರೂಪ್ ಹಾಗೂ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಲಾಗಿದೆ, ತಮಗೆ ಯಾವುದೇ ಸಹಾಯ ಮಾಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ ಎಂಬ ಆರೋಪಗಳನ್ನು ಮಾಡಿದ್ದರು.

ಈ ಪ್ರಕರಣದಲ್ಲಿ ಅಪಾರ್ಟ್‌ಮೆಂಟ್ ನಿವಾಸಿಗಳ ವಿರುದ್ಧ ರಾಜ್ಯ ಅಂಗವಿಕಲರ ಆಯುಕ್ತರು 2026ರ ಫೆಬ್ರವರಿ 19ರಂದು ಎಚ್ಚರಿಕೆ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಅಪಾರ್ಟ್‌ಮೆಂಟ್ ಮಾಲೀಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಹೇಳಿದ್ದೇನು?

ಅರ್ಜಿದಾರರ ವಿರುದ್ಧದ ಆರೋಪಗಳು ದೂರುದಾರರ ಅಂಗವೈಕಲ್ಯದ ಕಾರಣದಿಂದ ನಡೆದ ತಾರತಮ್ಯವನ್ನು ತೋರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸಿಸಿ ಕ್ಯಾಮರಾ ಅಳವಡಿಸುವುದು, ಅವಹೇಳನಕಾರಿ ಪದ ಬಳಕೆ ಅಥವಾ ನಿರ್ವಹಣಾ ಶುಲ್ಕ ಬಾಕಿ ಇರುವವರ ಹೆಸರನ್ನು ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸುವುದು ಇವೆಲ್ಲವೂ ಸಾಮಾನ್ಯ ಅಪಾರ್ಟ್‌ಮೆಂಟ್ ವಿವಾದಗಳಿಗೆ ಸಂಬಂಧಿಸಿದ ವಿಷಯಗಳಾಗಿದ್ದು, ಅವುಗಳನ್ನು ಅಂಗವಿಕಲರ ಹಕ್ಕುಗಳ ಕಾಯ್ದೆ ವ್ಯಾಪ್ತಿಗೆ ತರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನಿರ್ವಹಣಾ ಶುಲ್ಕ ಬಾಕಿ ಇರುವವರ ಹೆಸರನ್ನು ವಾಟ್ಸ್ಆ್ಯಪ್ ಗುಂಪು ಅಥವಾ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸುವುದು ಕೇವಲ ಮಾಹಿತಿ ನೀಡುವ ಕ್ರಮವಾಗಿದ್ದು, ಅದನ್ನೇ ಕಿರುಕುಳ ಅಥವಾ ತಾರತಮ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿರುವ ನ್ಯಾಯಪೀಠ, ಪ್ರಕರಣದ ದೂರಿನಲ್ಲಿ ಅಂಗವೈಕಲ್ಯ ಆಧಾರಿತ ತಾರತಮ್ಯದ ಯಾವುದೇ ಆರೋಪ ಇಲ್ಲದಿರುವುದರಿಂದ, ಈ ಪ್ರಕರಣದ ವಿಚಾರಣೆ ನಡೆಸುವ ಅಧಿಕಾರ ರಾಜ್ಯ ಅಂಗವಿಕಲರ ಆಯುಕ್ತರಿಗೆ ಇರಲಿಲ್ಲ ಎಂದು ಅಭಿಪ್ರಾಯಪಟ್ಟು, ಆಯುಕ್ತರು ಹೊರಡಿಸಿದ್ದ ಎಚ್ಚರಿಕೆ ಆದೇಶವನ್ನು ರದ್ದುಪಡಿಸಿದೆ.

ಆರಂಭದಲ್ಲೇ ಪರಿಶೀಲನೆಯಾಗಬೇಕು:

ಭವಿಷ್ಯದಲ್ಲಿ ಇಂಥ ದೂರುಗಳನ್ನು ಆರಂಭಿಕ ಹಂತದಲ್ಲೇ ಸೂಕ್ಷ್ಮವಾಗಿ ಪರಿಶೀಲಿಸಿ, ಅಂಗವೈಕಲ್ಯಕ್ಕೆ ಸಂಬಂಧಿಸಿದ ನೈಜ ಪ್ರಕರಣಗಳನ್ನಷ್ಟೇ ಅಂಗವಿಕಲರ ಹಕ್ಕುಗಳ ಕಾಯ್ದೆಯಡಿ ಪರಿಗಣಿಸುವಂತೆ ರಾಜ್ಯ ಅಂಗವಿಕಲರ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಜತೆಗೆ, ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವವರು ಸಮುದಾಯ ಜೀವನದ ಮೌಲ್ಯಗಳನ್ನು ಅರ್ಥಮಾಡಿಕೊಂಡು ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ನ್ಯಾಯಾಲಯ ಸಲಹೆ ನೀಡಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X