Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಮಾನತು ಆದೇಶ ಪ್ರಶ್ನಿಸಿ ಶಿವಶಂಕರಪ್ಪ...

ಅಮಾನತು ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅರ್ಜಿ; ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ14 July 2026 10:32 PM IST
share
ಅಮಾನತು ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅರ್ಜಿ; ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿರುವ ಕ್ರಮ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳಿಗೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ಜುಲೈ 13ರಂದು ರಾಜ್ಯಪಾಲರು ಹೊರಡಿಸಿರುವ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಹಾಗೂ ಕೆಪಿಎಸ್‌ಸಿ ಕಾಯರ್ದರ್ಶಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಅರ್ಜಿ ವಿಚಾರಣೆ ವೇಳೆ ಶಿವಶಂಕರಪ್ಪ ಸಾಹುಕಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಸಂವಿಧಾನದ ಪರಿಚ್ಛೇದ 317ರ ಪ್ರಕಾರ, ರಾಷ್ಟ್ರಪತಿಗಳು ಸುಪ್ರೀಂಕೋರ್ಟ್‌ಗೆ ತನಿಖೆಗೆ ಆದೇಶಿಸಿದ ನಂತರವಷ್ಟೇ ಅಥವಾ ಸುಪ್ರೀಂಕೋರ್ಟ್ ವಿಚಾರಣೆ ನಡೆಸುವ ಸಂದರ್ಭದಲ್ಲಿ ಮಾತ್ರವೇ ಅಧ್ಯಕ್ಷರನ್ನು ಅಮಾನತುಗೊಳಿಸಲು ಅವಕಾಶವಿರುತ್ತದೆ. ಆದರೆ, ಈ ಪ್ರಕರಣದಲ್ಲಿ ರಾಷ್ಟ್ರಪತಿಗಳು ಇನ್ನೂ ಸುಪ್ರೀಂಕೋರ್ಟ್‌ನಿಂದ ಯಾವುದೇ ಅಧಿಕೃತ ತನಿಖೆಗೆ ಆದೇಶಿಸಿಲ್ಲ. ಆದ್ದರಿಂದ, ರಾಷ್ಟ್ರಪತಿಗಳ ಉಲ್ಲೇಖಕ್ಕೂ ಮುನ್ನವೇ ಹೊರಡಿಸಲಾಗಿರುವ ರಾಜ್ಯಪಾಲರ ಈ ಅಮಾನತು ಆದೇಶ ಕಾನೂನುಬದ್ಧವಾಗಿಲ್ಲ. ಈ ಹಿನ್ನೆಲೆಯಲ್ಲಿ ಅಮಾನತು ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.

ರಾಜ್ಯಪಾಲರ ಪರ ಹಾಜರಿದ್ದ ಹಿರಿಯ ವಕೀಲ ಉದಯ್ ಹೊಳ್ಳ ಅವರು, ರಾಜ್ಯಪಾಲರು ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆಗಾಗಿ ರಾಷ್ಟ್ರಪತಿಗಳಿಗೆ ಅಧಿಕೃತವಾಗಿ ಕೋರಿಕೆ (ಶಿಫಾರಸು) ಕಳುಹಿಸಿಕೊಟ್ಟಿದ್ದಾರೆ. ರಾಷ್ಟ್ರಪತಿಗಳಿಗೆ ಒಮ್ಮೆ ಶಿಫಾರಸು ಕಳುಹಿಸಿದ ನಂತರ, ತನಿಖೆ ಬಾಕಿ ಇರುವ ಅವಧಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಮಾನತುಪಡಿಸುವ ಸಂಪೂರ್ಣ ಅಧಿಕಾರ ರಾಜ್ಯಪಾಲರಿಗೆ ಇರುತ್ತದೆ ಎಂದು ತನಿಖಾ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಹಾಲಿ ಪ್ರಕರಣದಲ್ಲಿ ರಾಷ್ಟ್ರಪತಿಗಳು ಸಂವಿಧಾನದ ಪರಿಚ್ಛೇದ 317ರ ಕ್ಲಾಸ್ (ಕಂಡಿಕೆ) 2ರ ಅಡಿಯಲ್ಲಿ ಸುಪ್ರೀಂಕೋರ್ಟ್‌ಗೆ ಶಿಫಾರಸು ಕಳುಹಿಸುವ ಮುನ್ನವೇ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನು ಅಮಾನತುಗೊಳಿಸಲು ಕರ್ನಾಟಕ ರಾಜ್ಯಪಾಲರಿಗೆ ಅಧಿಕಾರವಿತ್ತೇ ಅಥವಾ ಇಲ್ಲವೇ ಎಂಬದನ್ನು ಪರಿಶೀಲಿಸಬೇಕಿದೆ. ಆದ್ದರಿಂದ, ಎಲ್ಲ ವಕೀಲರು ತಾವು ಈ ವಿಷಯದಲ್ಲಿ ಅವಲಂಬಿತವಾಗಿರುವ ತೀರ್ಪುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X