Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಗತ್ಯ ಸೇವೆಯ ನೆಪದಲ್ಲಿ ನಿಯಮ ಮೀರಲಾಗದು;...

ಅಗತ್ಯ ಸೇವೆಯ ನೆಪದಲ್ಲಿ ನಿಯಮ ಮೀರಲಾಗದು; ಅರಣ್ಯ ಜಮೀನಿನಲ್ಲಿ ಕಸ ಸುರಿಯುತ್ತಿರುವುದಕ್ಕೆ ಹೈಕೋರ್ಟ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ24 July 2026 12:49 AM IST
share
ಅಗತ್ಯ ಸೇವೆಯ ನೆಪದಲ್ಲಿ ನಿಯಮ ಮೀರಲಾಗದು; ಅರಣ್ಯ ಜಮೀನಿನಲ್ಲಿ ಕಸ ಸುರಿಯುತ್ತಿರುವುದಕ್ಕೆ ಹೈಕೋರ್ಟ್ ಆಕ್ರೋಶ

ಬೆಂಗಳೂರು : ಸಂರಕ್ಷಿತ ಅರಣ್ಯ ಜಮೀನಿನಲ್ಲಿ ಕಳೆದ 12 ವರ್ಷಗಳಿಂದ ಘನತ್ಯಾಜ್ಯ ಸುರಿಯುತ್ತಿರುವ ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಅಗತ್ಯ ಸೇವೆಯ ನೆಪದಲ್ಲಿ ನಿಯಮಗಳನ್ನು ಮೀರುವಂತಿಲ್ಲ ಎಂದು ತೀಕ್ಷ್ಣವಾಗಿ ನುಡಿದಿದೆ.

ಜತೆಗೆ, ಈ ಸಂಬಂಧ ಸಮಗ್ರ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿರುವ ನ್ಯಾಯಾಲಯ, ಸರ್ಕಾರದಿಂದ ವರದಿ ಬಂದ ಮೇಲೆ ಸಂಸ್ಥೆಯ ಅಧಿಕಾರಿಗಳು, ಪ್ರತಿನಿಧಿಗಳ ವಿರುದ್ಧ ಯಾವ ರೀತಿ ಕಾನೂನು ಕ್ರಮ ಜರುಗಿಸಬಹುದು ಎಂಬ ಬಗ್ಗೆ ಪರಿಗಣಿಸಲಾಗುವುದು ಎಂದೂ ಹೇಳಿದೆ.

ಬೆಂಗಳೂರು ನಗರ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ 2026ರ ಮೇ 11ರಂದು ಹೊರಡಿಸಿರುವ ಆದೇಶ ರದ್ದುಕೋರಿ ಬಿಬಿಎಂಪಿ (ಜಿಬಿಎ) ಅಧೀನದ ಗುತ್ತಿಗೆದಾರ ಸಂಸ್ಥೇಯಾಗಿರುವ ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ಪ್ರತಿನಿಧಿಯಾಗಿ ಬಿಬಿಎಂಪಿ ಕೆಂಗೇರಿ ಉಪ ವಲಯದ ಸಹಾಯಕ ಕಾರ್ಯಕಾರಿ ಅಭಿಯಂತರ ಆರ್. ಮಧು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು‌.

ಅರ್ಜಿದಾರರ ಪರ ವಕೀಲರು, ಸಹಜ ನ್ಯಾಯ ಪಾಲನೆ ಮಾಡದೇ, ನೋಟಿಸ್ ಸಹ ನೀಡದೇ 30 ದಿನಗಳಲ್ಲಿ ಜಮೀನು ಹಸ್ತಾಂತರ ಮಾಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಸಲಿಗೆ ಈ ಜಾಗ ಬಿಡಿಎ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ನೀಡಿತ್ತು ಎಂದರು.

ಆಗ ನ್ಯಾಯಪೀಠ, ಹಾಗಿದ್ದರೆ ಇದು ಬಿಬಿಎಂಪಿಗೆ ಸೇರಿದ ಜಾಗವಾಗುತ್ತದೆ, ಸಮಸ್ಯೆ ಇದ್ದರೆ ಬಿಬಿಎಂಪಿ ಕೋರ್ಟ್ ಗೆ ಬರಬೇಕು. ಜಾಗ ಯಾವುದು ಅಂತ ಬಿಬಿಎಂಪಿ ನಿಮಗೆ ಹೇಳಬೇಕಿತ್ತು. ಅದು ಬಿಟ್ಟು ನೀವು ಕೋರ್ಟ್‌ಗೆ ಬಂದಿದ್ದೇಕೆ? ಎಷ್ಟು ದಂಡ ಪಾವತಿಸುತ್ತೀರಿ ಹೇಳಿ ಎಂದು ಅರ್ಜಿದಾರರ ಪರ ವಕೀಲರನ್ನು ನ್ಯಾಯಪೀಠ ಕೇಳಿತು. ಈ ಮಧ್ಯೆ, 2014ರಿಂದ ಘಟಕ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಗಮನಿಸಿದ ನ್ಯಾಯಪೀಠ, ನೀವು 2014ರಿಂದ ಅರಣ್ಯ ಜಾಗದಲ್ಲಿ ಕಸ ಹಾಕುತ್ತಿದ್ದೀರಾ ಎಂದು ವಕೀಲರನ್ನು ಪ್ರಶ್ನಿಸಿತು.

ಇದು ಅಗತ್ಯ ಸೇವೆಯ ವಿಷಯವಾಗಿದೆ ಎಂದು ವಕೀಲರು ನೀಡಿದ ಸಮಜಾಯಿಷಿಗೆ ಆಕ್ರೋಶಗೊಂಡ ನ್ಯಾಯಪೀಠ, ಅಗತ್ಯ ಸೇವೆ ನೆಪದಲ್ಲಿ ನಿಯಮಗಳನ್ನು ಮೀರುವಂತಿಲ್ಲ. ಅರಣ್ಯವೂ ಅಗತ್ಯವಲ್ಲವೇ ಎಂದು ಕಟುವಾಗಿ ಪ್ರಶ್ನಿಸಿತು.

ಅಂತಿಮವಾಗಿ, ಈ ಬಗ್ಗೆ ಸಮಗ್ರ ವಿವರಣೆ ನೀಡುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ವರದಿ ಬಂದ ಬಳಿಕ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಯಾವ ಕಾನೂನು ಕ್ರಮ ಜರಗಿಸಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ಹೇಳಿ ಅರಣ್ಯ ಇಲಾಖೆ, ಬೆಂಗಳೂರು ನಗರ ವಲಯ ಉಪ ಸಂರಕ್ಷಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿತು.

ಪ್ರಕರಣವೇನು?

ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಕೆಂಗೇರಿ ಹೋಬಳಿಯ ಲಿಂಗಧೀರನಹಳ್ಳಿ ಗ್ರಾಮದ ಸರ್ವೆ ನಂಬರ್ 16/1 ಹಾಗೂ ಬಿಎಂ ಕಾವಲ್ ಗ್ರಾಮದ ಸರ್ವೆ ನಂಬರ್ 92ರಲ್ಲಿ 1 ಎಕರೆ 26 ಗುಂಟೆ ಜಾಗವನ್ನು ಬಿಡಿಎ ಬಿಬಿಎಂಪಿಗೆ ಹಸ್ತಾಂತರಿಸಿತ್ತು. 2014-15ರಿಂದ ಈ ಜಾಗದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಇದೆ. ಈ ಮಧ್ಯೆ ಅರಣ್ಯ ಜಮೀನು ಒತ್ತುವರಿ ಎಂದು ಆರೋಪಿಸಿ, 30 ದಿನಗಳಲ್ಲಿ ಜಾಗವನ್ನು ಹಸ್ತಾಂತರಿಸುವಂತೆ ಬೆಂಗಳೂರು ನಗರ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ 2026ರ ಮೇ 11ರಂದು ಆದೇಶ ಹೊರಡಿಸಿದ್ದರು. ಅದನ್ನು ಪ್ರಶ್ನಿಸಿ ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X