Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೂರನೇ ವ್ಯಕ್ತಿಯ ದೂರು ಆಧರಿಸಿ ಜಾತಿ...

ಮೂರನೇ ವ್ಯಕ್ತಿಯ ದೂರು ಆಧರಿಸಿ ಜಾತಿ ಪ್ರಮಾಣಪತ್ರ ರದ್ದುಪಡಿಸುವ ಅಧಿಕಾರ ʼಡಿಸಿವಿಸಿʼಗೆ ಇಲ್ಲ : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ22 Aug 2026 7:23 PM IST
share
ಮೂರನೇ ವ್ಯಕ್ತಿಯ ದೂರು ಆಧರಿಸಿ ಜಾತಿ ಪ್ರಮಾಣಪತ್ರ ರದ್ದುಪಡಿಸುವ ಅಧಿಕಾರ ʼಡಿಸಿವಿಸಿʼಗೆ ಇಲ್ಲ : ಹೈಕೋರ್ಟ್

ಬೆಂಗಳೂರು : ಅಪರಿಚಿತ ಅಥವಾ ಮೂರನೇ ವ್ಯಕ್ತಿಯ ದೂರು ಆಧರಿಸಿ ಯಾವುದೇ ವ್ಯಕ್ತಿಯ ಜಾತಿ ಪ್ರಮಾಣಪತ್ರ ರದ್ದುಪಡಿಸುವ ಅಧಿಕಾರ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ (ಡಿಸಿವಿಸಿ) ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಮೂರನೇ ವ್ಯಕ್ತಿಯೊಬ್ಬರು ನೀಡಿದ್ದ ದೂರು ಆಧರಿಸಿ ತಮ್ಮ ಜಾತಿ ಪ್ರಮಾಣಪತ್ರ ರದ್ದುಪಡಿಸಿ 2021ರ ಜುಲೈ 15ರಂದು ಡಿಸಿವಿಸಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಚಿಕ್ಕೇನಹಳ್ಳಿ ಗ್ರಾಮದ ಬೈರಯ್ಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಎಂ.ಜಿ.ಎಸ್. ಕಮಾಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ (ನೇಮಕಾತಿ ಹಾಗೂ ಇತರ ವಿಷಯಕ್ಕಾಗಿ ಮೀಸಲಾತಿ) ಕಾಯ್ದೆ 1990ರ ಸೆಕ್ಷನ್ 4ಎ ಅಡಿ ತಹಶೀಲ್ದಾರ್ ವಿತರಿಸುವ ಜಾತಿ ಪ್ರಮಾಣಪತ್ರವನ್ನು ಮೂರನೇ ವ್ಯಕ್ತಿಯ ದೂರು ಆಧರಿಸಿ ರದ್ದುಪಡಿಸುವ ಅಧಿಕಾರ ಡಿಸಿವಿಸಿಗೆ ಇಲ್ಲ. ಆದರೆ, ಕಾಯ್ದೆಯ ಸೆಕ್ಷನ್ 4ಎಫ್ ಅಡಿ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಪ್ರಕರಣವೇನು?

ಅರ್ಜಿದಾರ ಬೈರಯ್ಯ ಅವರಿಗೆ 1977ರ ಜೂನ್ 8ರಂದು ಸ್ಥಳೀಯ ತಹಶೀಲ್ದಾರ್ ಅವರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದ 'ಜೇನು ಕುರುಬ' ಜಾತಿ ಪ್ರಮಾಣಪತ್ರ ನೀಡಿದ್ದರು. ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸ್ಥಳೀಯ ವ್ಯಕ್ತಿಯೊಬ್ಬರು ನಾಗರಿಕ್ಕ ಹಕ್ಕು ಜಾರಿ ನಿರ್ದೇಶನಾಲಯ ಘಟಕಕ್ಕೆ (ಸಿಆರ್‌ಇ ಸೆಲ್) ದೂರು ಕೊಟ್ಟಿದ್ದರು. ವಿಚಾರಣೆ ನಡೆಸಿದ್ದ, ಸಿ‌ಆರ್‌ಇ ಸೆಲ್ ವರದಿ ಕೊಟ್ಟಿತ್ತು. ಅದನ್ನು ಪರಿಶೀಲಿಸಿದ್ದ ಡಿಸಿವಿಸಿ ಬೈರಯ್ಯ ಅವರ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸಿ ಆದೇಶಿಸಿತ್ತು. ಇದನ್ನು ಬೈರಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X