Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‌ಐಆರ್ ಮುಗಿದ ಬಳಿಕ ಜಿಬಿಎ ಚುನಾವಣೆಗೆ...

ಎಸ್‌ಐಆರ್ ಮುಗಿದ ಬಳಿಕ ಜಿಬಿಎ ಚುನಾವಣೆಗೆ ಹೊಸ ಮತದಾರರ ಪಟ್ಟಿ ಪ್ರಕಟ; ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ29 Aug 2026 7:25 PM IST
share
ಎಸ್‌ಐಆರ್ ಮುಗಿದ ಬಳಿಕ ಜಿಬಿಎ ಚುನಾವಣೆಗೆ ಹೊಸ ಮತದಾರರ ಪಟ್ಟಿ ಪ್ರಕಟ; ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗದ ಮಾಹಿತಿ

ಬೆಂಗಳೂರು : ಭಾರತ ಚುನಾವಣಾ ಆಯೋಗ ಸದ್ಯ ರಾಜ್ಯದಲ್ಲಿ ನಡೆಸುತ್ತಿರುವ 'ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ' (ಎಸ್ಐಆರ್) ಪ್ರಕ್ರಿಯೆ ಮುಗಿದ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗೆ ಹೊಸದಾಗಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ತಿಳಿಸಿದೆ.

ಮುಂಬರಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಲೋಪಗಳಿವೆ ಎಂದು ಆರೋಪಿಸಿ ಬೆಂಗಳೂರು ನವನಿರ್ಮಾಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ, ಜಿಬಿಎ ಚುನಾವಣೆಗಾಗಿ ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಕೆಲ ದೂರುಗಳು ಬಂದ ಹಿನ್ನಲೆಯಲ್ಲಿ 33 ವಾರ್ಡ್‌ಗಳಲ್ಲಿ ಎಸ್ಐಆರ್ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಜಿಬಿಎ ಸೇರಿ ರಾಜ್ಯವ್ಯಾಪಿ ಎಸ್ಐಆರ್ ನಡೆಯುತ್ತಿರುವ ಹಿನ್ನೆಲೆಯಲ್ಲಿನ ರಾಜ್ಯ ಚುನಾವಣಾ ಆಯೋಗದ ಎಸ್ಐಆರ್ ತಡೆ ಹಿಡಿಯಲಾಯಿತು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಮುಂದುವರಿದು, ಹಾಲಿ ಅರ್ಜಿಯಲ್ಲಿ ಎತ್ತಿರುವ ಆಕ್ಷೇಪಣೆ ಹಾಗೂ ದೂರುಗಳನ್ನು ಈಗಾಗಲೇ ಪರಿಗಣಿಸಲಾಗಿದೆ. ಮೇಲಾಗಿ, ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಮುಗಿದ ಬಳಿಕ ಜಿಬಿಎ ಚುನಾವಣೆಗೆ ಹೊಸದಾಗಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರು ಹಲವು ಆಕ್ಷೇಪ ಹಾಗೂ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇವುಗಳನ್ನು ಈಗಾಗಲೇ ಪರಿಗಣಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಎಸ್ಐಆರ್ ಪ್ರಕ್ರಿಯೆ ಮುಗಿದ ಬಳಿಕ ಹೊಸ ಮತದಾರರ ಪಟ್ಟಿ ಪ್ರಕಟಿಸುವುದಾಗಿಯೂ ಆಯೋಗ ತಿಳಿಸಿದೆ. ಆದ್ದರಿಂದ, ಆ ಸಂದರ್ಭದಲ್ಲಿ ಅರ್ಜಿದಾರರ ಆಕ್ಷೇಪಗಳಲ್ಲಿ ಅವಶ್ಯಕವೆನಿಸುವುದನ್ನು ಆಯೋಗ ಪರಿಗಣಿಸಬಹುದು ಎಂದು ತಿಳಿಸಿ, ಅರ್ಜಿ ಇತ್ಯರ್ಥಪಡಿಸಿತು.

Tags

High CourtGBA Election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X