Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ...

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣ; ಶಿವಶಂಕರಪ್ಪ ಸಾಹುಕಾರ್‌ಗೆ ಮಧ್ಯಂತರ ರಕ್ಷಣೆ ಒದಗಿಸಲು ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ31 Aug 2026 8:50 PM IST
share
ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣ; ಶಿವಶಂಕರಪ್ಪ ಸಾಹುಕಾರ್‌ಗೆ ಮಧ್ಯಂತರ ರಕ್ಷಣೆ ಒದಗಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಕರೆದು ಬಂಧಿಸದಂತೆ ತನಿಖಾಧಿಕಾರಿಗಳಿಗೆ ನಿರ್ದೇಶಿಸಿ ಮಧ್ಯಂತರ ರಕ್ಷಣೆ ಒದಗಿಸಬೇಕೆಂದು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮಾಡಿದ್ದ ಮನವಿ ಪರಿಗಣಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಶಿವಶಂಕರಪ್ಪ ಎಸ್‌. ಸಾಹುಕಾರ್‌ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್, ಅರ್ಜಿದಾರರನ್ನು ಎರಡನೇ ಬಾರಿಗೆ ಅಮಾನತು ಮಾಡಲಾಗಿದೆ. ಆದ್ದರಿಂದ, ಅವರು ಮತ್ತೆ ಅಧಿಕಾರ ವಹಿಸಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ವಿಚಾರಣೆಗೆ ಅರ್ಜಿದಾರರು ಸಹಕರಿಸಿದ್ದಾರೆ. ಆದರೆ, ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಿದ್ದು, ಪ್ರತಿಭಟನೆಗಳು ನಡೆದಿವೆ. ಪ್ರಕರಣದಲ್ಲಿ ಅರ್ಜಿದಾರರ ಪಾತ್ರ ಇಲ್ಲ. ಅವರ ಸಂಬಂಧಿಯೊಬ್ಬರು ನೇಮಕಾತಿ ಪ್ರಕ್ರಿಯೆ ಪಾಲ್ಗೊಂಡಿದ್ದರು ಎಂಬ ಆರೋಪವಿದೆ. ಆದರೆ, ಅವರು ಅರ್ಜಿದಾರರ ಸಂಬಂಧಿ ಅಲ್ಲ ಎಂದು ಆಯೋಗದ ಕಾರ್ಯದರ್ಶಿ ಸ್ಪಷ್ಟನೆ ನೀಡಿದ್ದಾರೆ. ಹೀಗಿರುವಾಗ, ಅರ್ಜಿದಾರರನ್ನು ವಿಚಾರಣೆಗೆ ಕರೆಸಿ, ಅನಗತ್ಯವಾಗಿ ಬಂಧಿಸುವ ಸಾಧ್ಯತೆಯಿದೆ. ಆದ್ದರಿಂದ, ಮಧ್ಯಂತರ ರಕ್ಷಣೆ ನೀಡಬೇಕು ಎಂದು ಕೋರಿದರು.

ಸರ್ಕಾರದ ಪರ ಎಸ್‌ಪಿಪಿ ಬಿ.ಎನ್. ಜಗದೀಶ್ ವಾದ ಮಂಡಿಸಿ, ಪ್ರಕರಣದ ತನಿಖೆ ಈಗಷ್ಟೇ ಆರಂಭವಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದೆ. ಆರೋಪಿಯೊಬ್ಬರು ವಿದೇಶಕ್ಕೆ ಹಾರಲು ಸಜ್ಜಾಗಿದ್ದರು. ಅವರನ್ನು ದೆಹಲಿ ವಿಮಾನ ನಿಲ್ದಾಣದಿಂದ ಬಂಧಿಸಿ ಕರೆ ತರಲಾಗಿದೆ. ಅರ್ಜಿದಾರರ ವಿರುದ್ಧ ಇದೊಂದೇ ಅಲ್ಲ, ಇನ್ನೂ ಎರಡು ಪ್ರಕರಣಗಳು ಇವೆ. ಅರ್ಜಿದಾರರ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಈಗಷ್ಟೇ ಆರಂಭವಾಗಿರುವುದರಿಂದ ಯಾವುದೇ ರೀತಿಯ ಮಧ್ಯಂತರ ರಕ್ಷಣೆ ಸೂಕ್ತವಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈಗಾಗಲೇ ಅರ್ಜಿದಾರರ ವಿಚಾರಣೆ ನಡೆಸಲಾಗಿದೆ. ಆಗ ಅವರನ್ನು ಬಂಧಿಸಿಲ್ಲ ಎಂದು ಹೇಳಿ, ವಿಚಾರಣೆಗೆ ಕರೆದು ಬಂಧನ ಮಾಡದಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂಬ ಅರ್ಜಿದಾರರ ಪರ ವಕೀಲರ ಮಧ್ಯಂತರ ಮನವಿಯನ್ನು ಪರಿಗಣಿಸಲು ನಿರಾಕರಿಸಿ ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X