Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಗ್ರಾ.ಪಂ.ಗಳ ಮೀಸಲಾತಿ ನಿಗದಿ...

ರಾಜ್ಯದ ಗ್ರಾ.ಪಂ.ಗಳ ಮೀಸಲಾತಿ ನಿಗದಿ ಪೂರ್ಣ; ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ12 Sept 2026 2:18 AM IST
share
ರಾಜ್ಯದ ಗ್ರಾ.ಪಂ.ಗಳ ಮೀಸಲಾತಿ ನಿಗದಿ ಪೂರ್ಣ; ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

ಬೆಂಗಳೂರು : ರಾಜ್ಯದ 5,864 ಗ್ರಾಮ ಪಂಚಾಯಿತಿಗಳ ವಾರ್ಡ್‌ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಮುಗಿದಿರುವುದನ್ನು ಎಲ್ಲ ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ (ಎಸ್‌ಇಸಿ) ತಂದಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಮುಂದಿನ ಪ್ರಕ್ರಿಯೆ ಆರಂಭಿಸುವುದು ಎಸ್‌ಇಸಿಗೆ ಬಿಟ್ಟ ವಿಚಾರ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಅವಧಿ ಮುಗಿದ ಗ್ರಾಮ ಪಂಚಾಯಿತಿಗಳಿಗೆ‌ ಚುನಾವಣೆ ನಡೆಸಲು ವಾರ್ಡ್‌ಗಳ ಸಂಖ್ಯೆ ಮತ್ತು ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್‌ ಹಾಗೂ ನ್ಯಾಯಮೂರ್ತಿ ಟಿ.ಪಿ. ವಿವೇಕಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ (ಎಎಜಿ) ಪ್ರತಿಮಾ ಹೊನ್ನಾಪುರ ಅವರು, ಗ್ರಾಮ ಪಂಚಾಯಿತಿಗಳಿಗೆ ವಾರ್ಡ್‌ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸಲಾಗಿದೆ. ಮುಂದಿನ ಕ್ರಮಕೈಗೊಳ್ಳುವುದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಎಲ್ಲ ಪ್ರಕ್ರಿಯೆ ಮುಗಿದಿದೆ. ಈ ಸಂಬಂಧ 2026ರ ಸೆಪ್ಟೆಂಬರ್ 8ರಂದು ಪ್ರಮಾಣಪತ್ರವನ್ನೂ ಸಲ್ಲಿಸಲಾಗಿದೆ. ಮೀಸಲಾತಿ ನಿಗದಿಪಡಿಸಿರುವುದರಿಂದ ಅರ್ಜಿಯು ಈಗ ಅಸಿಂಧುವಾಗಿದೆ ಎಂದರು.

ಆಗ ನ್ಯಾಯಪೀಠ, ಅರ್ಜಿಯಲ್ಲಿನ ಕೋರಿಕೆಯಂತೆ ಅಗತ್ಯವಿದ್ದ ಕೆಲಸವನ್ನು ರಾಜ್ಯ ಸರ್ಕಾರ ಮಾಡಿರುವುದರಿಂದ ಅರ್ಜಿ ಅಸಿಂಧುವಾಗಿದೆ. ಈಗ ಮುಂದಿನ ಅಗತ್ಯ ಕ್ರಮಕೈಗೊಳ್ಳುವುದು ರಾಜ್ಯ ಚುನಾವಣಾ ಆಯೋಗದ ಕೆಲಸ ಎಂದಿತಲ್ಲದೆ, ಎಎಜಿ ಹೇಳಿಕೆಯನ್ನು ದಾಖಲಿಸಿಕೊಂಡು ಆಯೋಗದ ಕೋರಿಕೆಯ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್‌ 17ಕ್ಕೆ ಮುಂದೂಡಿತು.

ಇದೇ ವೇಳೆ, ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ನಿರ್ದೇಶನದ ಪ್ರಕಾರ ಇಂದು ಕರಡು ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತಿದೆ. ಆದ್ದರಿಂದ, 10 ದಿನಗಳ ಬಳಿಕ ಕಾಲಾವಕಾಶ ನೀಡಿದರೆ ಈ ಸಂಬಂಧ ದಾಖಲೆಯನ್ನು ಹಾಜರುಪಡಿಸಲಾಗುವುದು ಎಂದು ಎಎಜಿ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಪುರಸ್ಕರಿಸಿದ ನ್ಯಾಯಪೀಠ, ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್‌ 29ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X