Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಬುರಗಿ ಕೋಟೆ ಹೊರಗಿನ 100 ಮೀ....

ಕಲಬುರಗಿ ಕೋಟೆ ಹೊರಗಿನ 100 ಮೀ. ವ್ಯಾಪ್ತಿಯೊಳಗಿನ ಒತ್ತುವರಿ ಬಗ್ಗೆ ಪರಿಶೀಲಿಸಲು ಪುರಾತತ್ವ ಇಲಾಖೆಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ15 Sept 2026 7:04 PM IST
share
ಕಲಬುರಗಿ ಕೋಟೆ ಹೊರಗಿನ 100 ಮೀ. ವ್ಯಾಪ್ತಿಯೊಳಗಿನ ಒತ್ತುವರಿ ಬಗ್ಗೆ ಪರಿಶೀಲಿಸಲು ಪುರಾತತ್ವ ಇಲಾಖೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಐತಿಹಾಸಿಕ ಸ್ಮಾರಕವಾದ ಗುಲ್ಬರ್ಗ (ಕಲಬುರಗಿ) ಕೋಟೆಯ ಹೊರಗಿನ 100 ಮೀಟರ್ ಸಂರಕ್ಷಿತ ಪ್ರದೇಶದೊಳಗೆ ಯಾವುದೇ ಒತ್ತುವರಿಗಳಿವೆಯೇ ಎಂದು ಪರಿಶೀಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಹೈಕೋರ್ಟ್ ನಿರ್ದೇಶಿಸಿದೆ.

ಕಲಬುರಗಿ ಕೋಟೆಯ ಪ್ರದೇಶವನ್ನು ನೂರಾರು ಕುಟುಂಬಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ವಾಸ ಮಾಡುತ್ತಿವೆ ಎಂದು ಆರೋಪಿಸಿ ಶರಣ್ ದೇಸಾಯಿ ಎಂಬುವರು 2018ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಟಿ.ಪಿ. ವಿವೇಕಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ವಕೀಲರು, ಕೋಟೆಯೊಳಗಿನ ನಿವಾಸಿಗಳ ಪುನರ್ವಸತಿ ಕಾರ್ಯ ಪ್ರಗತಿಯಲ್ಲಿದೆ. ಪುನರ್ವಸತಿ ಸ್ಥಳದಲ್ಲಿ ಒಳಚರಂಡಿ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಆ ನಂತರ ಗುರುತಿಸಲಾದ ಕುಟುಂಬಗಳಿಗೆ ನಿವೇಶನಗಳನ್ನು ಹಂಚಲಾಗುವುದು ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರಲ್ಲದೆ, ಪುನರ್ವಸತಿಗೆ ಸಂಬಂಧಿಸಿದ ವರದಿ ಸಿದ್ಧವಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಅರ್ಜಿ ಕುರಿತು ಖುದ್ದು ವಾದ ಮಂಡಿಸಿದ ಶರಣ್ ದೇಸಾಯಿ, ಕೋಟೆಯೊಳಗಿನ ಒತ್ತುವರಿಗಳ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಕೋಟೆಯ ಹೊರಗಿನ 100 ಮೀಟರ್ ವ್ಯಾಪ್ತಿಯ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ವಾಸಿಗಳು ಮುಂದುವರಿದಿದ್ದಾರೆ. ಪುನರ್ವಸತಿಗಾಗಿ ಗುರುತಿಸಲಾಗಿರುವ ಕೋಟೆ ಒಳಗಿನ ಪ್ರದೇಶದ 282 ಕುಟುಂಬಗಳಲ್ಲದೆ, ಕೋಟೆಯ ಹೊರಗೂ 167 ಅಕ್ರಮ ನಿವಾಸಿಗಳಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಆಗ ನ್ಯಾಯಪೀಠ, ಸಂರಕ್ಷಿತ ಪ್ರದೇಶದ ಭಾಗವಾಗಿರುವ ಕೋಟೆಯ ಹೊರಗಿನ ಒತ್ತುವರಿಗಳಿಗೆ ಸಂಬಂಧಿಸಿದಂತೆ ಯಾವುದಾದರೂ ವರದಿ ಇದೆಯೇ ಎಂದು ಪ್ರಶ್ನಿಸಿತು. ಈ ಕುರಿತು ಪರಿಶೀಲಿಸಬೇಕಾಗಿದೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು.

ಅದಕ್ಕೆ ನ್ಯಾಯಪೀಠ, ಕೋಟೆಯ ಹೊರಗೆ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಒತ್ತುವರಿಗಳಿವೆಯೇ ಎಂಬ ಬಗ್ಗೆ ಮಾಹಿತಿ ಪಡೆಯುವಂತೆ ಪುರಾತತ್ವ ಇಲಾಖೆ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಅರವಿಂದ್ ಕಾಮತ್ ಅವರಿಗೆ ನಿರ್ದೇಶಿಸಿತು.

ವಿವಾದಿತ ಪ್ರದೇಶದಲ್ಲಿ ಅಕ್ರಮ ವಾಸಿಗಳು ಕಂಡುಬಂದರೆ, ಅವರನ್ನು ತೆರವುಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು. ಏಕೆಂದರೆ, ಅಂತಹ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಳೀಯ ಅಧಿಕಾರಿಗಳು ನಿರ್ವಹಿಸಬೇಕೇ ಹೊರತು ಎಎಸ್‌ಐ ಅಲ್ಲ ಎಂದು ಅರವಿಂದ್ ಕಾಮತ್ ನ್ಯಾಯಪೀಠಕ್ಕೆ ತಿಳಿಸಿದರು.

ಅಂತಿಮವಾಗಿ ನ್ಯಾಯಪೀಠ, ಪ್ರಕರಣದ ವಸ್ತುಸ್ಥಿತಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಹಾಗೂ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಕಾಲಾವಕಾಶ ನೀಡಿ, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X