Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ...

ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಆರೋಪ; ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ‌ಗೆ ನಿರೀಕ್ಷಣಾ ಜಾಮೀನು

ವಾರ್ತಾಭಾರತಿವಾರ್ತಾಭಾರತಿ22 Sept 2026 6:38 PM IST
share
ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಆರೋಪ; ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ‌ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಶ್ರೀರಂಗಪಟ್ಟಣದ ಉಕ್ಕಡ ಮಾರಮ್ಮ ದೇವಾಲಯದಲ್ಲಿ ಭದ್ರತೆಯ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಕೆನ್ನೆಗೆ ಹೊಡೆದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ ಗೌಡ ಅವರ ಪುತ್ರಿ ಐಶ್ವರ್ಯಾ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಐಶ್ವರ್ಯಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪುರಸ್ಕರಿಸಿದೆ.

ಹೈಕೋರ್ಟ್ ಆದೇಶವೇನು?

ಅರ್ಜಿದಾರರು ಸ್ಥಳೀಯ ಶಾಸಕರ ಪುತ್ರಿಯಾಗಿದ್ದು, ಅವರ ಪತಿ ಹಾಲಿ ಸೇವೆಯಲ್ಲಿರುವ ಡಿವೈಎಸ್‌ಪಿ ಆಗಿದ್ದಾರೆ. ಅರ್ಜಿದಾರರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹೊಂದಿರುವ ವಿವಾಹಿತ ಮಹಿಳೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಕಾರಣವಾದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಅರ್ಜಿದಾರರು ಮತ್ತು ಅವರ ತಂದೆ ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ತೋರಿಸುವ ದಾಖಲೆಗಳನ್ನು ಅರ್ಜಿದಾರರ ಪರ ಹಿರಿಯ ವಕೀಲರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿತ ಅಪರಾಧಗಳಿಗೆ ಗರಿಷ್ಠ 2 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಬೇರೆ ಯಾವುದೇ ಅಪರಾಧಿಕ ಹಿನ್ನೆಲೆ ಇರದ ಅರ್ಜಿದಾರರು ಪ್ರಕರಣದ ತನಿಖೆಗೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕೆಂಬ ಅರ್ಜಿದಾರರ ಮನವಿಯನ್ನು ಪುರಸ್ಕರಿಸಲಾಗಿದ್ದು, ಅರ್ಜಿದಾರರಿಗೆ ಅನ್ವಯವಾಗುವ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಇದಕ್ಕೂ ಮುನ್ನ ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆಯೇ ಐಶ್ವರ್ಯಾ ಪರ ಹಿರಿಯ ವಕೀಲ ಸಂದೇಶ್ ಚೌಟ ಹಾಜರಾಗಿ, ಅರ್ಜಿದಾರರು ಘಟನೆ ಸಂಬಂಧ ಕ್ಷಮೆಯಾಚಿಸಿದ್ದು, ಇದು ಎಲ್ಲ ಸುದ್ದಿ ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಅರ್ಜಿದಾರರ ಕ್ಷಮೆಯಾಚನೆಯ ಸ್ವರೂಪವನ್ನು ಸಹ ನ್ಯಾಯಾಲಯ ಗಮನಿಸಬಹುದು ಎಂದರು.

ಪ್ರಕರಣವೇನು?

ಭೀಮನ ಅಮಾವಾಸ್ಯೆಯಂದು (ಆಗಸ್ಟ್ 12) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದ ಶ್ರೀ ಅಹಲ್ಯಾದೇವಿ ಮಾರಮ್ಮ ದೇವಸ್ಥಾನಕ್ಕೆ ಐಶ್ವರ್ಯಾ ತಮ್ಮ ಮಕ್ಕಳೊಂದಿಗೆ ತೆರಳಿದ್ದರು. ದೇವಾಲಯದ ಗರ್ಭಗುಡಿಗೆ ಪ್ರವೇಶಿಸುವ ವಿಚಾರವಾಗಿ ಅಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್‌ ಅವರೊಂದಿಗೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಐಶ್ವರ್ಯಾ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಕೆನ್ನೆಗೆ ಹೊಡೆದಿದ್ದರು. ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

ಇದರಿಂದ, ಐಶ್ವರ್ಯಾ ವಿರುದ್ಧ ಬಿಎನ್‌ಎಸ್ ಸೆಕ್ಷನ್‌ಗಳಾದ 132 (ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 115(2) (ಉದ್ದೇಶಪೂರ್ವಕವಾಗಿ ಗಾಯಗೊಳಿಸುವುದು), 352 (ಉದ್ದೇಶಪೂರ್ವಕ ಅಪಮಾನ) ಹಾಗೂ 351(2)(ಕ್ರಿಮಿನಲ್ ಬೆದರಿಕೆ) ಅಡಿ ಪ್ರಕರಣ ದಾಖಲಿಸಲಾಗಿತ್ತು.

ಬಂಧನ ಭೀತಿ ಎದುರಿಸುತ್ತಿದ್ದ ಐಶ್ವರ್ಯಾ ಮೊದಲು ಶ್ರೀರಂಗಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕರ್ತವ್ಯನಿರತ ಸರ್ಕಾರಿ ಅಧಿಕಾರಿ ಮೇಲಿನ ಹಲ್ಲೆ ಆರೋಪದ ಗಂಭೀರತೆಯನ್ನು ಪರಿಗಣಿಸಿದ್ದ ಸೆಷನ್ಸ್‌ ನ್ಯಾಯಾಲಯ ಆಗಸ್ಟ್ 31ರಂದು ಐಶ್ವರ್ಯಾ ಅರ್ಜಿ ವಜಾಗೊಳಿಸಿತ್ತು. ಇದರಿಂದ, ಐಶ್ವರ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಐಶ್ವರ್ಯಾ ಪರ ವಕೀಲರು, ಮಹಿಳಾ ಪಿಎಸ್‌ಐ ಮೇಲೆ ಅರ್ಜಿದಾರರು ಮಾಡಿದ ಹಲ್ಲೆಯು ಉದ್ದೇಶಪೂರ್ವಕವಾಗಿರಲಿಲ್ಲ, ಬದಲಿಗೆ ಆ ಕ್ಷಣದ ಆವೇಶದಲ್ಲಿ ನಡೆದಿರುವ ಘಟನೆಯಾಗಿದೆ. ಆ ತಪ್ಪಿಗಾಗಿ ಅರ್ಜಿದಾರರು ಮತ್ತು ಅರ್ಜಿದಾರರ ತಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಅರ್ಜಿದಾರರ ವಿರುದ್ಧದ ಆರೋಪಿತ ಅಪರಾಧಗಳಿಗೆ ಗರಿಷ್ಠ 2 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಅರ್ಜಿದಾರರು ವಿವಾಹಿತ ಮಹಿಳೆಯಾಗಿದ್ದು, ಅವರ ವಿರುದ್ಧ ಬೇರೆ ಯಾವುದೇ ಅಪರಾಧ ಹಿನ್ನೆಲೆಗಳಿಲ್ಲ. ಅವರು ತನಿಖೆಗೆ ಸಹಕರಿಸಲು ಸಿದ್ಧರಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕೆಂದು ಕೋರಿದ್ದರು.

ಅರ್ಜಿಯನ್ನು ಆಕ್ಷೇಪಿಸಿದ್ದ ಸರ್ಕಾರದ ಪರ ವಕೀಲರು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಆದ್ದರಿಂದ, ಅರ್ಜಿ ವಜಾಗೊಳಿಸಬೇಕೆಂದು ಕೋರಿದ್ದರು.

ಕ್ಷಮೆಯಾಚನೆ :

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಮಹಿಳಾ ಪಿಎಸ್‌ಐ ಅವರಿಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ.

ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್‌ಐ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ವೀಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ.

ಅರ್ಜಿ ಕುರಿತು ಸೋಮವಾರ (ಸೆಪ್ಟೆಂಬರ್ 21) ವಿಚಾರಣೆ ನಡೆಸಿದ್ದ ಹೈಕೋರ್ಟ್, ಐಶ್ವರ್ಯಾ ಅವರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿತಲ್ಲದೆ, ಮಹಿಳಾ ಪಿಎಸ್‌ಐ ಬಳಿ ಐಶ್ವರ್ಯಾ ಕ್ಷಮೆ ಯಾಚಿಸಿದರೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಎಂದು ಮೌಖಿಕವಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X