Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಸಾಪ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ...

ಕಸಾಪ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 Oct 2026 10:55 PM IST
share
ಕಸಾಪ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ಗೆ (ಕಸಾಪ) ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪರಿಷತ್ ಮಾಜಿ ಅಧ್ಯಕ್ಷ ನಾಡೋಜ ಡಾ. ಮಹೇಶ್‌ ಜೋಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್‌ ಜೋಶಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಇದೇ ವೇಳೆ, ಆಡಳಿತಾಧಿಕಾರಿಯ ಮುಂದುವರಿಕೆಯು ಕರ್ನಾಟಕ ಸೊಸೈಟಿಗಳ ನೋಂದಣಿ ಕಾಯ್ದೆಯ ಸೆಕ್ಷನ್‌ 27(ಎ)(1), 27(ಎ)(4) ಮತ್ತು 27(ಎ)(5)ಗೆ ಬದ್ಧವಾಗಿರುತ್ತದೆ. ಆಡಳಿತಾಧಿಕಾರಿಯ ವಿಸ್ತರಣೆಯನ್ನು ಅನುಮೋದಿಸಿರುವಂತೆ ಆದೇಶವನ್ನು ಓದಿಕೊಳ್ಳುವಂತಿಲ್ಲ. ಅದು ನಿಯಮಳಿಗೆ ಬದ್ಧವಾಗಿರುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.

ಕಸಾಪ ವ್ಯವಹಾರಗಳ ಕುರಿತು ವಿಚಾರಣಾಧಿಕಾರಿಯ ವರದಿಯಲ್ಲಿನ ಅಭಿಪ್ರಾಯದ ಸತ್ಯಾಸತ್ಯತೆ, ಆ ವರದಿ ಆಧರಿಸಿ ಕರ್ನಾಟಕ ಸೊಸೈಟಿಗಳ ಕಾಯ್ದೆಯಡಿ ಕೈಗೊಂಡಿರುವ ಯಾವುದೇ ಪ್ರಕ್ರಿಯೆ, ಕಸಾಪ ಸದಸ್ಯತ್ವದಿಂದ ಅರ್ಜಿದಾರರನ್ನು ಅಮಾನತುಗೊಳಿಸಿದ/ ತೆಗೆದುಹಾಕಿರುವ ವಿಚಾರಗಳ ಕುರಿತು ನ್ಯಾಯಾಲಯ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಈ ಎಲ್ಲ ವಿಚಾರಗಳನ್ನು ಕಾನೂನು ಅನುಸಾರ ನಿರ್ಧರಿಸಲು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಪಡಿಸಿದೆ.

ಪ್ರಕರಣವೇನು?

ಮಹೇಶ್‌ ಜೋಶಿ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಸಾಪದಲ್ಲಿ ಆರ್ಥಿಕ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಹಕಾರ ಇಲಾಖೆಯು ಕಳೆದ 2025ರ ಜುಲೈನಲ್ಲಿ ವಿಚಾರಣಾಧಿಕಾರಿ ನೇಮಕ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸಾಪ ನಿಗದಿತ ಕಾಲಾವಧಿಯಲ್ಲಿ ವಿಚಾರಣೆಗೆ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದರಂತೆ, ಕಸಾಪಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರ್ಕಾರ 2025ರ ಅಕ್ಟೋಬರ್‌ ಅಂತ್ಯದಲ್ಲಿ ಆದೇಶಿಸಿತ್ತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X