Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‌ಐಆರ್ ವೇಳೆ ಮುಸ್ಲಿಂ ಮತದಾರರ ಹೆಸರು...

ಎಸ್‌ಐಆರ್ ವೇಳೆ ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪ; ರವಿ ಪಾಟೀಲ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ8 Oct 2026 11:10 PM IST
share
ಎಸ್‌ಐಆರ್ ವೇಳೆ ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪ; ರವಿ ಪಾಟೀಲ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

ಬೆಂಗಳೂರು : ಬೆಳಗಾವಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 198 ಮುಸ್ಲಿಂ ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ ಸಂಬಂಧಿತ ಪ್ರಕರಣದಲ್ಲಿ ಬಿಜೆಪಿ ನಾಯಕ ರವಿ ಪಾಟೀಲ್‌ ಮತ್ತವರ ಇಬ್ಬರು ಬೆಂಬಲಿಗರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಬೆಳಗಾವಿಯ ಮಾರ್ಕೆಟ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಆನಂತರ ಕಾನೂನು ಪ್ರಕ್ರಿಯೆ ರದ್ದು ಕೋರಿ ಬಿಜೆಪಿ ನಾಯಕ ರವಿ ಬಸಲಿಂಗಪ್ಪಗೌಡ ಪಾಟೀಲ್, ಅವರ ಬೆಂಬಲಿಗರಾದ ಶಂಕರ ಬೀರಪ್ಪ ನಾಯಕ್ ಮತ್ತು ಪ್ರಶಾಂತ್ ಮುಂಡಿಮಾನಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಮತ್ತು ದೂರುದಾರ ಮೀರಾಸಾಬ್ ಸನದಿ ಅವರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಇತ್ತೀಚಿನ ತನಿಖಾ ವರದಿಯೊಂದಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡಿತು. ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಪ್ರತಿವಾದಿ ಪೊಲೀಸರು/ತನಿಖಾಧಿಕಾರಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಅಕ್ಟೋಬರ್ 13ಕ್ಕೆ ಮುಂದೂಡಿತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬಸಲಿಂಗಪ್ಪಗೌಡ ಪಾಟೀಲ್‌ಗ ಬೆಳಗಾವಿ ಸತ್ರ ನ್ಯಾಯಾಲಯವು ಅಕ್ಟೋಬರ್ 3ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಅರ್ಜಿದಾರರ ವಿರುದ್ಧದ ಆರೋಪವೇನು?

ಅರ್ಜಿದಾರರೂ ಸೇರಿದಂತೆ ಸುಮಾರು 20-25 ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದರು ಹಾಗೂ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 198 ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಅರ್ಜಿದಾರರ ವಿರುದ್ಧ ಬೆಳಗಾವಿಯ ಮಾರ್ಕೆಟ್‌ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X