Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಜಮೀನು...

ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಜಮೀನು ಹಂಚಿಕೆ ವಿವಾದ; ಹಿಂದಿನ ಆದೇಶ ಹಿಂಪಡೆದು ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ16 Oct 2026 6:56 PM IST
share
ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಜಮೀನು ಹಂಚಿಕೆ ವಿವಾದ; ಹಿಂದಿನ ಆದೇಶ ಹಿಂಪಡೆದು ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್ ನಿರ್ಧಾರ

ಬೆಂಹಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ಸದಸ್ಯರ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ನಿಯಮಬಾಹಿರವಾಗಿ ಜಮೀನು ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಗಸ್ಟ್ 18ರಂದು ನೀಡಿದ್ದ ಆದೇಶ ಹಿಂಪಡೆದು, ಪ್ರಕರಣವನ್ನು ಮರುವಿಚಾರಣೆಗೆ ಕೈಗೆತ್ತಿಕೊಳ್ಳಲು ಹೈಕೋರ್ಟ್ ನಿರ್ಧರಿಸಿದೆ.

ಸಿದ್ಧಾರ್ಥ ವಿಹಾರ ಟ್ರಸ್ಟ್‌ನ ಟ್ರಸ್ಟಿ ರಾಹುಲ್‌ ಖರ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದ್ದು, ಪ್ರಕರಣದಲ್ಲಿ ಪ್ರತಿವಾದಿಗಳ ವಾದ ಆಲಿಸಲು ಅಕ್ಟೋಬರ್ 30ರಂದು ಮರುವಿಚಾರಣೆ ನಡೆಸಲು ತೀರ್ಮಾನಿಸಿದೆ.

ಕಳೆದ ಆಗಸ್ಟ್ 18ರಂದು ಹೈಕೋರ್ಟ್‌, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದ ನಿರ್ದೇಶನವನ್ನು ರದ್ದುಪಡಿಸಿತ್ತು. ಪ್ರಕರಣದ ದೂರುದಾರರಾದ 'ಲಂಚ ಮುಕ್ತ ಕರ್ನಾಟಕ ವೇದಿಕೆ' ರಾಜ್ಯಾಧ್ಯಕ್ಷ ವಿಜಯರಾಘವ ಮರಾಠೆ ಸಲ್ಲಿಸಿದ್ದ ಖಾಸಗಿ ದೂರಿನೊಂದಿಗೆ ಜೋಡಿಸಲಾಗಿದ್ದ ಪ್ರಮಾಣಪತ್ರದಲ್ಲಿ ಕಾನೂನುಬದ್ಧ ದೋಷವಿದೆ ಎಂದು ಗಮನಿಸಿದ್ದ ನ್ಯಾಯಾಲಯ, ಆ ದೋಷ ಸರಿಪಡಿಸಲು ದೂರುದಾರರಿಗೆ ಅವಕಾಶ ನೀಡಿತ್ತು. ಬಳಿಕ, ದೂರಿನಲ್ಲಿರುವ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರ ತನಿಖೆ ಅಗತ್ಯವಿದೆಯೇ ಎಂಬುದನ್ನು ವಿಚಾರಣಾ ನ್ಯಾಯಾಲಯ ನಿರ್ಧರಿಸಬೇಕು ಎಂದು ಸೂಚಿಸಿತ್ತು.

ಆ ಆದೇಶ ಮರುಪರಿಶೀಲನೆ ಅಥವಾ ಆದೇಶ ಹಿಂಪಡೆಯುವಂತೆ ಕೋರಿ ರಾಹುಲ್ ಖರ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 18ರ ಆದೇಶ ಹಿಂಪಡೆದು ಪ್ರಕರಣವನ್ನು ಮತ್ತೆ ಆಲಿಸಲು ನಿರ್ಧರಿಸಿದೆ.

ದೂರಿನಲ್ಲಿರುವ ಆರೋಪಗಳೇನು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಧಾಕೃಷ್ಣ, ರಾಧಾಬಾಯಿ ಖರ್ಗೆ, ರಾಹುಲ್‌ ಖರ್ಗೆ, ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಇತರರ ವಿರುದ್ಧ ದೂರುದಾರ ವಿಜಯರಾಘವ ಮರಾಠೆ ಆರೋಪಗಳನ್ನು ಮಾಡಿದ್ದಾರೆ. ಸಿದ್ಧಾರ್ಥ ವಿಹಾರ ಟ್ರಸ್ಟ್‌ ಅನ್ನು ಪರಿಶಿಷ್ಟ ಜಾತಿ ಸಮುದಾಯದ ಟ್ರಸ್ಟ್‌ ಎಂದು ತೋರಿಸಿ, ಬಿಡಿಎ ಇಂದ ಶೇ. 50 ರಿಯಾಯಿತಿಯಲ್ಲಿ ಜಮೀನು ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಬನಶಂಕರಿ 6ನೇ ಹಂತದಲ್ಲಿ ಅಂದಾಜು 8,125 ಚದರ ಮೀಟರ್‌ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ಟ್ರಸ್ಟ್‌ಗೆ ಮಂಜೂರು ಮಾಡಲಾಗಿತ್ತು. ಆ ಟ್ರಸ್ಟ್‌ ಎಲ್ಲ ಜಾತಿ, ಧರ್ಮ ಮತ್ತು ವರ್ಗಗಳ ಜನರ ಹಿತಕ್ಕಾಗಿ ಸ್ಥಾಪಿತವಾಗಿದ್ದು, ಪರಿಶಿಷ್ಟ ಜಾತಿಗಾಗಿ ಮಾತ್ರ ಸ್ಥಾಪಿಸಲಾದ ಸಂಸ್ಥೆಯಲ್ಲ. ಆದ್ದರಿಂದ, ಎಸ್‌ಸಿ ವರ್ಗದಡಿ ನಿವೇಶನ ಹಾಗೂ ಶೇ.50ರ ರಿಯಾಯಿತಿ ಪಡೆಯಲು ಅದು ಅರ್ಹವಾಗಿರಲಿಲ್ಲ ಎಂಬುದು ದೂರುದಾರರ ವಾದವಾಗಿದೆ.

ಇದಲ್ಲದೆ, ದೇವನಹಳ್ಳಿ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಕೆಐಎಡಿಬಿ ಇಂದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಿರುವುದನ್ನೂ ದೂರುದಾರರು ಪ್ರಶ್ನಿಸಿದ್ದಾರೆ. ಏರೋಸ್ಪೇಸ್‌ ಅಥವಾ ಸಂಶೋಧನಾ ಕ್ಷೇತ್ರದಲ್ಲಿ ಅನುಭವವಿಲ್ಲದ ಟ್ರಸ್ಟ್‌ಗೆ ಈ ಜಮೀನು ನೀಡಲಾಗಿದೆ ಎಂದು ದೂರಿನಲ್ಲಿ ಆಕ್ಷೇಪಿಸಲಾಗಿದೆ. ಆರೋಪಗಳು ಕೇಳಿ ಬಂದ ಬಳಿಕ ಜಮೀನನ್ನು ಹಿಂದಿರುಗಿಸಲಾಗಿದೆ ಎಂದು ವರದಿಗಳಿದ್ದರೂ, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಬಳಿಕವೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಸಂಬಂಧ ಖಾಸಗಿ ದೂರು ಸಲ್ಲಿಸಲಾಗಿದ್ದು, ಲೋಕಾಯುಕ್ತ ತನಿಖೆಗೆ ಆದೇಶಿಸುವಂತೆ ಮನವಿ ಮಾಡಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X