Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧಾರವಾಡ-ಕಲಬುರಗಿ ಪೀಠಗಳ ಡಿ ಗ್ರೂಪ್...

ಧಾರವಾಡ-ಕಲಬುರಗಿ ಪೀಠಗಳ ಡಿ ಗ್ರೂಪ್ ನೌಕರರ ಖಾಯಮಾತಿ ಕುರಿತು ಸರಕಾರದ ನಿಲುವು ಕೇಳಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 Oct 2026 9:55 PM IST
share
ಧಾರವಾಡ-ಕಲಬುರಗಿ ಪೀಠಗಳ ಡಿ ಗ್ರೂಪ್ ನೌಕರರ ಖಾಯಮಾತಿ ಕುರಿತು ಸರಕಾರದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು : ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರ ಸೇವೆ ಖಾಯಂಗೊಳಿಸುವ ಕುರಿತು ನಿಲುವು ತಿಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಧಾರವಾಡ ಹೈಕೋರ್ಟ್ ಪೀಠದಲ್ಲಿ 2008ರಿಂದ ಡಿ ಗ್ರೂಪ್ ಗೆ ಸಮನಾಂತರ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎನ್.ಎಸ್. ಗೋಪಾಲ್ ರಾವ್ ಸೇರಿ 44 ಮಂದಿ ಹಾಗೂ ಕಲಬುರಗಿ ಹೈಕೋರ್ಟ್ ಪೀಠದಲ್ಲಿ 2009ರಿಂದ ಡಿ ಗ್ರೂಪ್ ಗೆ ಸಮನಾಂತರ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚಂದ್ರಕಾಂತ್ ಸೇರಿ 23 ಮಂದಿ ನೌಕರರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲೆ ಮೈತ್ರೇಯಿ ಕೃಷ್ಣನ್ ವಾದ ಮಂಡಿಸಿ, ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್ ಪೀಠಗಳು ಪ್ರಾರಂಭವಾದ ಕಾಲದಿಂದ ಅರ್ಜಿದಾರರು ಮಂಜೂರಾದ ಹುದ್ದೆಗಳ ಎದುರಾಗಿ ಹೈಕೋರ್ಟ್ ಪೀಠ, ನ್ಯಾಯಮೂರ್ತಿಗಳ ನಿವಾಸ ಹಾಗೂ ಸಿಬ್ಬಂದಿ ವಸತಿ ಗೃಹಗಳಲ್ಲಿ ಹೌಸ್ ಕೀಪಿಂಗ್, ಸ್ವಚ್ಛತಾಗಾರರು, ಅಡುಗೆಯವರು, ವಾಚ್‌ ಮ್ಯಾನ್, ವಾಟರ್ ಮ್ಯಾನ್ ಇತ್ಯಾದಿ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಇವರು ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆ ಖಾಯಂಗೊಳಿಸುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ, ಈವರೆಗೆ ಕ್ರಮ ಆಗಿಲ್ಲ. ಆದ್ದರಿಂದ, ಸೇವೆ ಖಾಯಂಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿದರು.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕಚೇರಿ ಪರ ವಕೀಲೆ ಬಿ.ವಿ. ವಿದ್ಯುಲ್ಲತಾ ವಾದ ಮಂಡಿಸಿ, ನಾವು (ಹೈಕೋರ್ಟ್) ಅರ್ಜಿದಾರರ ಪರವಾಗಿದ್ದೇವೆ. ಅವರ ಸೇವೆ ಖಾಯಂ ಆಗಬೇಕು ಎಂದು ಬಯಸುತ್ತೇವೆ. ಈ ವಿಚಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಸೇವೆ ಕಾಯಂಗೊಳಿಸುವ ವಿಚಾರದಲ್ಲಿ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X