Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಕ್ರಮ ಸಿಮ್ ಕಾರ್ಡ್ ಮಾರಾಟ ಪ್ರಕರಣಗಳ...

ಅಕ್ರಮ ಸಿಮ್ ಕಾರ್ಡ್ ಮಾರಾಟ ಪ್ರಕರಣಗಳ ತನಿಖೆಗೆ ಮಾರ್ಗಸೂಚಿ ರೂಪಿಸಲು ಸೈಬರ್ ಡಿಜಿಪಿಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ24 Oct 2026 9:41 PM IST
share
ಅಕ್ರಮ ಸಿಮ್ ಕಾರ್ಡ್ ಮಾರಾಟ ಪ್ರಕರಣಗಳ ತನಿಖೆಗೆ ಮಾರ್ಗಸೂಚಿ ರೂಪಿಸಲು ಸೈಬರ್ ಡಿಜಿಪಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಆಧಾರ್ ದತ್ತಾಂಶ ಹಾಗೂ ಗ್ರಾಹಕರ ಗುರುತಿನ ದಾಖಲೆಗಳನ್ನು ಅವರ ಅನುಮತಿಯಿಲ್ಲದೆ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಸಿಮ್ ಕಾರ್ಡ್‌ಗಳನ್ನು ಸಕ್ರಿಯಗೊಳಿಸಿ ಮಾರಾಟ ಮಾಡುವ ಜಾಲದ ವಿರುದ್ಧ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಇಂತಹ ಪ್ರಕರಣಗಳ ತನಿಖೆಗಾಗಿ ಅಗತ್ಯ ಮಾರ್ಗಸೂಚಿಗಳನ್ನು ರೂಪಿಸುವಂತೆ ಸೈಬರ್ ಕಮಾಂಡ್‌ನ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನಿರ್ದೇಶಿಸಿದೆ.

ಪೂರ್ವಸಕ್ರಿಯಗೊಳಿಸಿದ (ಪ್ರಿ-ಆಕ್ಟಿವೇಟೆಡ್) 75 ಸಿಮ್ ಕಾರ್ಡ್‌ಗಳನ್ನು ಅಕ್ರಮವಾಗಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಮಲ್ಲಿಕಾರ್ಜುನ ಎಂಬುವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನಗಳನ್ನು ನೀಡಿದೆ.

ಸಿಮ್ ಕಾರ್ಡ್ ಕೇವಲ ಟೆಲಿಕಾಂ ಜಾಲವನ್ನು ಬಳಸುವ ಸಾಧನವಲ್ಲ. ಅದು ಡಿಜಿಟಲ್ ಗುರುತು, ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ), ಬ್ಯಾಂಕಿಂಗ್ ಮತ್ತು ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದ ಪ್ರಮುಖ ತಂತ್ರಜ್ಞಾನವಾಗಿದೆ. ಅಮಾಯಕರ ಹೆಸರಿನಲ್ಲಿ ಅನಧಿಕೃತವಾಗಿ ಸಿಮ್ ಕಾರ್ಡ್‌ಗಳನ್ನು ಸಕ್ರಿಯಗೊಳಿಸುವುದರಿಂದ ಅವರು ಸೈಬರ್ ಅಪರಾಧ ಮತ್ತು ಹಣಕಾಸು ವಂಚನೆಗೆ ತುತ್ತಾಗುವ ಅಪಾಯವಿದೆ ಎಂದು ನ್ಯಾಯಾಲಯ ಹೇಳಿದೆ.

ಅಮಾಯಕ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ ಸಿಮ್ ಕಾರ್ಡ್‌ಗಳ ದುರ್ಬಳಕೆ ತಡೆಯಲು ಮತ್ತು ಅವುಗಳನ್ನು ಅಪರಾಧ ಕೃತ್ಯಗಳಿಗೆ ಬಳಸುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿರುವ ನ್ಯಾಯಪೀಠ, ಅನಧಿಕೃತ ಸಿಮ್ ಸಕ್ರಿಯಗೊಳಿಸುವಿಕೆ ಕುರಿತು ಮಾಹಿತಿ ಲಭ್ಯವಾದ ತಕ್ಷಣ ಸಂಬಂಧಪಟ್ಟ ಪೊಲೀಸ್ ಪ್ರಾಧಿಕಾರಗಳೊಂದಿಗೆ ಸಮನ್ವಯ ಸಾಧಿಸಿ ಪರಿಶೀಲನೆ ನಡೆಸಬೇಕು ಹಾಗೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ.

ಅಕ್ರಮವಾಗಿ ಸಿಮ್ ಕಾರ್ಡ್‌ಗಳನ್ನು ಸಕ್ರಿಯಗೊಳಿಸಿ ಮಾರಾಟ ಮಾಡುವುದರ ಹಿಂದೆ ಕಾರ್ಯನಿರ್ವಹಿಸುತ್ತಿರುವ ಜಾಲವನ್ನು ಪತ್ತೆಹಚ್ಚಲು ತನಿಖಾ ವಿಧಾನಗಳನ್ನು ಬಲಪಡಿಸಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ರೂಪಿಸಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಮೊಬೈಲ್ ಸೇವಾ ಪೂರೈಕೆದಾರರು ಸಿಮ್ ಕಾರ್ಡ್‌ಗಳ ವಿತರಣೆ ಮತ್ತು ಸಕ್ರಿಯಗೊಳಿಸುವಿಕೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪರಿಶೀಲಿಸಬೇಕು ಎಂದು ನಿರ್ದೇಶಿಸಿರುವ ನ್ಯಾಯಪೀಠ, ಸಕ್ರಿಯಗೊಳಿಸದ ಸಿಮ್ ಕಾರ್ಡ್‌ಗಳ ಸಂಗ್ರಹಣೆ, ಸಾಗಣೆ ಮತ್ತು ನಿರ್ವಹಣೆಗೆ ಅನುಮತಿ ಪಡೆದ ವ್ಯಕ್ತಿಗಳ ವಿವರಗಳನ್ನು ದಾಖಲಿಸುವ ವ್ಯವಸ್ಥೆ ಸಮರ್ಪಕವಾಗಿರಬೇಕು. ವಿತರಕರು ಮತ್ತು ಮಧ್ಯವರ್ತಿಗಳಿಗೆ ಪೂರೈಸಿದ ಹಾಗೂ ಅವರಿಂದ ಹಿಂದಿರುಗಿಸಲಾದ ಸಿಮ್ ಕಾರ್ಡ್‌ಗಳ ಲೆಕ್ಕಪತ್ರ ನಿರ್ವಹಣೆಯನ್ನೂ ಪರಿಶೀಲಿಸಬೇಕು ಎಂದು ಸೂಚಿಸಿದೆ.

ವಿತರಕರು ಮತ್ತು ಮಧ್ಯವರ್ತಿಗಳಿಗೆ ಪೂರೈಸಿದ ಸಿಮ್ ಕಾರ್ಡ್‌ಗಳ ಸಂಖ್ಯೆ, ಮಾರಾಟವಾದವು, ಹಿಂದಿರುಗಿಸಲಾದವು, ರದ್ದುಗೊಂಡವು ಹಾಗೂ ಇತರ ರೀತಿಯಲ್ಲಿ ವಿಲೇವಾರಿಯಾದ ಕಾರ್ಡ್‌ಗಳ ವಿವರಗಳನ್ನು ಸಮನ್ವಯಗೊಳಿಸುವ ವ್ಯವಸ್ಥೆ ಇರಬೇಕು ಎಂದು ನ್ಯಾಯಾಲಯ ಹೇಳಿದೆ.

ಗ್ರಾಹಕರಿಗೆ ತಿಳಿಯದಂತೆ ಅಥವಾ ಅವರ ಅನುಮತಿಯಿಲ್ಲದೆ ಗುರುತಿನ ದಾಖಲೆಗಳನ್ನು ಬಳಸಿ ಸಿಮ್ ಕಾರ್ಡ್‌ಗಳನ್ನು ಸಕ್ರಿಯಗೊಳಿಸುವುದನ್ನು ತಡೆಯಲು ಪರಿಣಾಮಕಾರಿ ಪರಿಶೀಲನಾ ಕ್ರಮಗಳನ್ನು ಜಾರಿಗೊಳಿಸಬೇಕು. ತಮ್ಮ ಹೆಸರಿನಲ್ಲಿ ಅನಧಿಕೃತವಾಗಿ ಸಿಮ್ ಕಾರ್ಡ್‌ಗಳನ್ನು ಸಕ್ರಿಯಗೊಳಿಸಿರುವ ಬಗ್ಗೆ ದೂರು ಸಲ್ಲಿಸಲು ಗ್ರಾಹಕರಿಗೆ ಸುಲಭವಾಗಿ ಲಭ್ಯವಾಗುವ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಟೆಲಿಕಾಂ ಸಂಸ್ಥೆಗಳು ಪ್ರಮೋಟರ್‌ಗಳು ಮತ್ತು ವಿತರಕರ ನೇಮಕಾತಿ, ಅವರಿಗೆ ಪೂರೈಸುವ ಸಿಮ್ ಕಾರ್ಡ್‌ಗಳ ದಾಸ್ತಾನು ನಿರ್ವಹಣೆ ಹಾಗೂ ಗ್ರಾಹಕರ ದಾಖಲೆಗಳ ಪರಿಶೀಲನೆ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸೂಚಿಸಿರುವ ನ್ಯಾಯಪೀಠ, ತನಿಖೆಗಾಗಿ ರೂಪಿಸುವ ಮಾರ್ಗಸೂಚಿಗಳು ಕಾನೂನಿನ ಚೌಕಟ್ಟಿನಲ್ಲಿರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರ ವೈಯಕ್ತಿಕ ದತ್ತಾಂಶದ ಮೇಲೆ ಅನಗತ್ಯ ನಿಗಾ ಇರಿಸುವುದಾಗಲಿ, ಅವರ ಗೌಪ್ಯತೆಯನ್ನು ಉಲ್ಲಂಘಿಸುವುದಾಗಲಿ ನಡೆಯಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಕರಣವೇನು?

ಅರ್ಜಿದಾರ ಮಲ್ಲಿಕಾರ್ಜುನ ಒಂದು ಸಂಸ್ಥೆಯ ಪ್ರಮೋಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಿಮ್ ಕಾರ್ಡ್ ಖರೀದಿಸಲು ತಮ್ಮ ಬಳಿ ಬರುತ್ತಿದ್ದ ಗ್ರಾಹಕರ ಗುರುತಿನ ದಾಖಲೆಗಳು ಮತ್ತು ಭಾವಚಿತ್ರಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ಹೆಸರಿನಲ್ಲಿ ಅನಧಿಕೃತವಾಗಿ ಸಿಮ್ ಕಾರ್ಡ್‌ಗಳನ್ನು ಸಕ್ರಿಯಗೊಳಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಎಚ್‌ಎಎಲ್ ಪೊಲೀಸ್ ಠಾಣೆಗೆ ಬಂದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆಯ ಬಳಿಕ ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ತನಿಖೆಯ ಸಂದರ್ಭದಲ್ಲಿ ಅರ್ಜಿದಾರನ ವಶದಲ್ಲಿದ್ದ ಒಟ್ಟು 75 ಪೂರ್ವಸಕ್ರಿಯಗೊಳಿಸಿದ ಸಿಮ್ ಕಾರ್ಡ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದರು. ಇದರಿಂದ, ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X