Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಔಷಧ, ವೈದ್ಯಕೀಯ ಉಪಕರಣಗಳ ಮೂಲ ದರ...

ಔಷಧ, ವೈದ್ಯಕೀಯ ಉಪಕರಣಗಳ ಮೂಲ ದರ ಪ್ರಕಟಣೆ ಸುತ್ತೋಲೆ ಜಾರಿಗೆ ಒತ್ತಾಯಿಸುವುದಿಲ್ಲ; ಹೈಕೋರ್ಟ್​ಗೆ ಸರ್ಕಾರದ ಭರವಸೆ

ವಾರ್ತಾಭಾರತಿವಾರ್ತಾಭಾರತಿ30 Oct 2026 8:17 PM IST
share
ಔಷಧ, ವೈದ್ಯಕೀಯ ಉಪಕರಣಗಳ ಮೂಲ ದರ ಪ್ರಕಟಣೆ ಸುತ್ತೋಲೆ ಜಾರಿಗೆ ಒತ್ತಾಯಿಸುವುದಿಲ್ಲ; ಹೈಕೋರ್ಟ್​ಗೆ ಸರ್ಕಾರದ ಭರವಸೆ

ಬೆಂಗಳೂರು : ಔಷಧಗಳು, ವೈದ್ಯಕೀಯ ಉಪಕರಣಗಳು ಹಾಗೂ ಬಳಕೆಯ ವಸ್ತುಗಳ ಮೂಲ ದರವನ್ನು ಬಹಿರಂಗವಾಗಿ ಪ್ರಕಟಿಸುವಂತೆ ಆಸ್ಪತ್ರೆಗಳಿಗೆ ಸೂಚಿಸಿ ಹೊರಡಿಸಿರುವ ಸುತ್ತೋಲೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ದರ ಪ್ರಕಟಣೆ ಕಡ್ಡಾಯಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಖಾಸಗಿ ಆಸ್ಪತ್ರೆಗಳ ಪರವಾಗಿ ಡಾ. ಶೋಭಾ ಪ್ರಕಾಶ್, ಡಾ. ಹಾಲಗೆರೆ ಮಲ್ಲಿಕಾರ್ಜುನ ಪ್ರಸನ್ನ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸರ್ಕಾರ ಈ ಭರವಸೆ ನೀಡಿದೆ.

ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಬಿ.ವಿ. ಭಾನುಪ್ರಕಾಶ್ ಅವರು ಔಷಧಗಳು, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ಮೂಲ ದರವನ್ನು ಬಹಿರಂಗಪಡಿಸುವಂತೆ ಸರ್ಕಾರ ಅಕ್ಟೋಬರ್ 1ರಂದು ಸುತ್ತೋಲೆ ಹೊರಡಿಸಿದೆ. ಆದರೆ, ಅರ್ಜಿದಾರರು ಸುತ್ತೋಲೆ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿರುವುದು ತಡವಾಗಿದೆ. ಸುತ್ತೋಲೆಯಲ್ಲಿ ಉಲ್ಲೇಖಿಸಿರುವ ಕಾನೂನು ನಿಬಂಧನೆಗಳಿಗೆ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ನೀಡಿದರೆ, ಸುತ್ತೋಲೆಯನ್ನು ಹಿಂಪಡೆದು ಹೊಸದಾಗಿ ಸುತ್ತೋಲೆ ಹೊರಡಿಸುವ ಸಾಧ್ಯತೆಯೂ ಇದೆ ಎಂದು ವಿವರಿಸಿದರು.

ಆಗ ನ್ಯಾಯಪೀಠ, ನವೆಂಬರ್ 1ರಿಂದ ಸುತ್ತೋಲೆ ಜಾರಿಗೆ ಬರಲಿದ್ದು, ಅಲ್ಲಿಯವರೆಗೆ ಸುತ್ತೋಲೆ ಜಾರಿ ಮಾಡುವಂತೆ ಕಡ್ಡಾಯಗೊಳಿಸಬಾರದು ಎಂಬುದು ಅರ್ಜಿದಾರರ ಮನವಿಯಾಗಿದೆ ಎಂದು ತಿಳಿಸಿತು. ಇದಕ್ಕೆ ಸರ್ಕಾರದ ಪರ ವಕೀಲರು, ಅರ್ಜಿದಾರರ ವಿರುದ್ಧ ಯಾವುದೇ ಆತುರದ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.

ಇದನ್ನು ಆಲಿಸಿದ ನ್ಯಾಯಪೀಠ, ಸುತ್ತೋಲೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸುವುದಿಲ್ಲ ಎಂಬುದಾಗಿ ಸರ್ಕಾರ ತಿಳಿಸಿದೆ ಎಂಬ ಅಂಶವನ್ನು ದಾಖಲಿಸಿಕೊಂಡು ಅರ್ಜಿ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X