Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಕೀಲರ ಪ್ರತಿಭಟನೆ ವೇಳೆ ಕೋರ್ಟ್...

ವಕೀಲರ ಪ್ರತಿಭಟನೆ ವೇಳೆ ಕೋರ್ಟ್ ಸಭಾಂಗಣದಲ್ಲಿ ಗದ್ದಲ; ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ3 Nov 2026 8:36 PM IST
share
ವಕೀಲರ ಪ್ರತಿಭಟನೆ ವೇಳೆ ಕೋರ್ಟ್ ಸಭಾಂಗಣದಲ್ಲಿ ಗದ್ದಲ; ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಕೀಲರ ಮೇಲಿನ ಹಿಂಸಾಚಾರ ಖಂಡಿಸಿ ಬೆಂಗಳೂರು ವಕೀಲರ ಸಂಘ ಕರೆ ನೀಡಿದ್ದ ಪ್ರತಿಭಟನೆಯ ವೇಳೆ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಗದ್ದಲ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಹೈಕೋರ್ಟ್ ಮಂಗಳವಾರ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠವು ಮಂಗಳವಾರ ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ವಕೀಲರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ವಕೀಲರ ಸಂಘಕ್ಕೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ, ಮೇಲ್ನೋಟಕ್ಕೆ, ಈ ವರ್ತನೆಯು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ನ್ಯಾಯಾಲಯದ ಸಭಾಂಗಣದಲ್ಲಿ ಗದ್ದಲ ಸೃಷ್ಟಿಸಲು ಯತ್ನಿಸಿದವರನ್ನು ಗುರುತಿಸಲು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿರುವ ಹೈಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 19ಕ್ಕೆ ನಿಗದಿಪಡಿಸಿದೆ.

ಕರ್ನಾಟಕದಲ್ಲಿ ವಿವಿಧೆಡೆ ವಕೀಲರ ಮೇಲೆ ನಡೆದಿರುವ ಇತ್ತೀಚಿನ ಹಲ್ಲೆ ಪ್ರಕರಣಗಳ ಹಿನ್ನೆಲೆಯಲ್ಲಿ, ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ-2023 ಅನ್ನು ಬಲಪಡಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು (ಕೆಎಸ್‌ಬಿಸಿ), ಬೆಂಗಳೂರು ವಕೀಲರ ಸಂಘ (ಎಎಬಿ) ಹಾಗೂ ರಾಜ್ಯದ ವಿವಿಧ ವಕೀಲರ ಸಂಘಗಳು ಮಂಗಳವಾರ ಪ್ರತಿಭಟನೆಗೆ ಕರೆ ನೀಡಿದ್ದವು. ಈ ಪ್ರತಿಭಟನೆಯ ನಡುವೆಯೇ ಕೆಲವು ವಕೀಲರು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಸಭಾಂಗಣಕ್ಕೆ ಪ್ರವೇಶಿಸಿ ಕಲಾಪಕ್ಕೆ ಅಡ್ಡಿಪಡಿಸಿ ಗದ್ದಲ ಸೃಷ್ಟಿಸಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿ ಆದೇಶ ಹೊರಡಿಸಿದ ಬಳಿಕ ವಕೀಲರ ಸಂಘದ ಖಜಾಂಚಿ ಶ್ವೇತಾ ರವಿಶಂಕರ್ ನ್ಯಾಯಪೀಠದ ಮುಂದೆ ಹಾಜರಾಗಿ ಘಟನೆಯ ಕುರಿತು ವಿವರಣೆ ನೀಡಲು ಮುಂದಾದರು. ಆದರೆ, ನ್ಯಾಯಾಲಯದ ಸಭಾಂಗಣಕ್ಕೆ ಪ್ರವೇಶಿಸಿ ಗದ್ದಲ ಸೃಷ್ಟಿಸುವ ವಕೀಲರ ವರ್ತನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

ವಕೀಲರ ಪರವಾಗಿ ಕ್ಷಮೆಯಾಚಿಸಲು ಶ್ವೇತಾ ರವಿಶಂಕರ್ ಮುಂದಾದಾಗ ನ್ಯಾಯಪೀಠ, ಯಾವ ಕ್ಷಮಾಪಣೆ? (ಕಲಾಪಕ್ಕೆ ಅಡ್ಡಿಪಡಿಸಿದ) ವಕೀಲರು ಕ್ಷಮೆಯಾಚಿಸಲು ಬಯಸಿದರೆ ಆ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕು. ಇದು ಎಂತಹ ವರ್ತನೆ? ನೀವು ವಕೀಲರೇ? ನೀವು ನ್ಯಾಯಾಲಯದ ಅಧಿಕಾರಿಗಳು. ನಿಮ್ಮ ಜವಾಬ್ದಾರಿಗಳನ್ನು ಹೀಗೆ ಬದಿಗಿಟ್ಟು ವರ್ತಿಸಲು ಸಾಧ್ಯವಿಲ್ಲ. ಇದು ವಕೀಲರಿಗೆ ಸಂಪೂರ್ಣವಾಗಿ ಶೋಭೆ ತರುವುದಿಲ್ಲ ಎಂದು ಆಕ್ಷೇಪಿಸಿತು.

ಶ್ವೇತಾ ರವಿಶಂಕರ್ ಅವರು, ಇಂದಿನ ಮಟ್ಟಿಗೆ ವಿನಾಯಿತಿ ನೀಡುವಂತೆ ಕೋರಿದರಲ್ಲದೆ, ಸಂಘದ ಎಲ್ಲ ಪದಾಧಿಕಾರಿಗಳು ಮರುದಿನ ನ್ಯಾಯಾಲಯದ ಮುಂದೆ ಹಾಜರಾಗಿ ಸಂಘದ ಪರವಾಗಿ ಪ್ರಮಾಣಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಆದರೆ, ಈಗಾಗಲೇ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿರುವುದರಿಂದ ಸಂಘವು ವಿಚಾರಣೆಗೆ ಉತ್ತರಿಸಲೇಬೇಕು. ಇದು ನ್ಯಾಯಾಲಯದ ಎದುರೇ ನಡೆದ ನ್ಯಾಯಾಂಗ ನಿಂದನೆಯಾಗಿದೆ. ನಿಮ್ಮ ಉತ್ತರ ಸಲ್ಲಿಸಿ, ಮುಂದೇನು ಮಾಡಬೇಕು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ನ್ಯಾಯಪೀಠ ಹೇಳಿತು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ವಕೀಲರು ಇಂದು ನ್ಯಾಯಾಲಯಕ್ಕೆ ಹಾಜರಾಗದಿದ್ದರೂ ಯಾವುದೇ ಪ್ರತಿಕೂಲ ಆದೇಶಗಳನ್ನು ಹೊರಡಿಸುವುದಿಲ್ಲ ಎಂದು ಈ ಹಿಂದೆ ಭರವಸೆ ನೀಡಿದ್ದರೂ, ನ್ಯಾಯಾಲಯದ ಸಭಾಂಗಣದಲ್ಲಿ ಗದ್ದಲ ಸೃಷ್ಟಿಸಿರುವುದಕ್ಕೆ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಇದು ರಾಜ್ಯದ ಹೈಕೋರ್ಟ್. ಯಾರಾದರೂ ಒಳನುಗ್ಗಿ ಗದ್ದಲ ಸೃಷ್ಟಿಸಬಹುದು ಎಂದು ನೀವು ಭಾವಿಸಿದರೆ, ಅದರ ಪರಿಣಾಮಗಳನ್ನು ಎದುರಿಸಲೇಬೇಕು ಎಂದು ಎಚ್ಚರಿಸಿತು.

ಅಂತಿಮವಾಗಿ ಬೆಂಗಳೂರು ವಕೀಲರ ಸಂಘ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿದ ನ್ಯಾಯಾಲಯ, ಸಂಬಂಧಪಟ್ಟವರ ವಾದ ಆಲಿಸಿದ ಬಳಿಕ ಮುಂದಿನ ಕ್ರಮವನ್ನು ನಿರ್ಧರಿಸುವುದಾಗಿ ತಿಳಿಸಿ,‌ ವಿಚಾರಣೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X