Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ...

ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 Nov 2026 10:33 PM IST
share
ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾಗಿ ಬಿಜೆಪಿ ಎಂ. ಸತೀಶ್ ರೆಡ್ಡಿ ಅವರ ಆಯ್ಕೆ ಪ್ರಶ್ನಿಸಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಶ್ರೀನಿವಾಸ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸತೀಶ್ ರೆಡ್ಡಿ ಅವರ ಆಯ್ಕೆ ಅಸಿಂಧುಗೊಳಿಸುವಂತೆ ಹಾಗೂ ತಮ್ಮನ್ನು ಚುನಾಯಿತ ಅಭ್ಯರ್ಥಿ ಎಂದು ಘೋಷಿಸುವಂತೆ ಕೋರಿ ಉಮಾಪತಿ ಶ್ರೀನಿವಾಸ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ವಜಾಗೊಳಿಸಿರುವ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಚುನಾವಣಾ ತಕರಾರು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಪಾವತಿಸಬೇಕಿದ್ದ 2 ಸಾವಿರ ರೂ. ಭದ್ರತಾ ಠೇವಣಿಯನ್ನು ಮರುದಿನ ಪಾವತಿಸಿರುವುದು ಕಾನೂನುಬದ್ಧ ಲೋಪವಾಗಿದ್ದು, ಅದನ್ನು ನಂತರ ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ವಿಧಾನಸಭೆ ಚುನಾವಣೆಯ ಫಲಿತಾಂಶ 2023ರ ಮೇ 13ರಂದು ಪ್ರಕಟವಾಗಿತ್ತು. ಫಲಿತಾಂಶ ಪ್ರಕಟವಾದ 45 ದಿನಗಳ ಕಾಲಮಿತಿಯ ಕೊನೆಯ ದಿನವಾದ ಜೂನ್ 27ರಂದು ಉಮಾಪತಿ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ, ಜನಪ್ರತಿನಿಧಿ ಕಾಯ್ದೆ ಪ್ರಕಾರ ಕಡ್ಡಾಯವಾಗಿದ್ದ 2 ಸಾವಿರ ರೂ. ಭದ್ರತಾ ಠೇವಣಿಯನ್ನು ಜೂನ್ 28ರಂದು ಪಾವತಿಸಿದ್ದರು. ಈ ಹಿನ್ನೆಲೆಯಲ್ಲಿ, ಅರ್ಜಿ ಸಲ್ಲಿಸುವ ಮೊದಲು ಠೇವಣಿ ಪಾವತಿಸದಿರುವುದು ಹಾಗೂ ಮರುದಿನ ಪಾವತಿಸಿರುವುದನ್ನು ಅರ್ಜಿದಾರರು ಒಪ್ಪಿಕೊಂಡಿರುವುದರಿಂದ, ಇದರ ಆಧಾರದಲ್ಲಿ ಅರ್ಜಿ ವಜಾಗೊಳಿಸಬಹುದು ಎಂದು ಹೈಕೋರ್ಟ್ ಹೇಳಿದೆ.

ಅರ್ಜಿದಾರರು ಜೂನ್ 27ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಹೈಕೋರ್ಟ್‌ಗೆ ಬಂದಿದ್ದು, 3.55ಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಅಷ್ಟರಲ್ಲಾಗಲೇ ಆರ್ಥಿಕ ವಿಭಾಗದಲ್ಲಿ ನಗದು ಸ್ವೀಕರಿಸುವ ಪ್ರಕ್ರಿಯೆ ಸ್ಥಗಿತಗೊಂಡಿದ್ದರಿಂದ ಠೇವಣಿ ಪಾವತಿಸಲು ಸಾಧ್ಯವಾಗಿರಲಿಲ್ಲ. ಅರ್ಜಿಯಲ್ಲಿ ಕಂಡುಬರುವ ಲೋಪಗಳನ್ನು ನಂತರ ಸರಿಪಡಿಸಲು ಚುನಾವಣಾ ತಕರಾರು ಅರ್ಜಿ ಕಾರ್ಯವಿಧಾನ ನಿಯಮಗಳಲ್ಲಿ ಅವಕಾಶವಿದೆ ಎಂದು ಉಮಾಪತಿ ಪರ ವಕೀಲರು ಪ್ರತಿಪಾದಿಸಿದ್ದರು.

ಈ ವಾದವನ್ನೊಪ್ಪದ ನ್ಯಾಯಪೀಠ, ಠೇವಣಿ ಪಾವತಿಸಲು ಸಾಧ್ಯವಾಗದಿರುವುದಕ್ಕೆ ತಮ್ಮ ನಿಯಂತ್ರಣಕ್ಕೆ ಮೀರಿದ ಪರಿಸ್ಥಿತಿ ಕಾರಣವಾಗಿತ್ತು ಎಂಬುದನ್ನು ಅರ್ಜಿದಾರರು ಚುನಾವಣಾ ಅರ್ಜಿಯಲ್ಲಿ ಉಲ್ಲೇಖಿಸಿಲ್ಲ. ಜತೆಗೆ, ಕಚೇರಿ ಸಮಯದ ನಂತರ ಠೇವಣಿ ಪಾವತಿಸಲು ಅನುಮತಿ ಕೋರಿ ರಿಜಿಸ್ಟ್ರಾರ್ ಅವರನ್ನು ಸಂಪರ್ಕಿಸಿರುವ ಬಗ್ಗೆಯೂ ಅರ್ಜಿಯಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಹೇಳಿದೆ.

ಒಂದು ಕೆಲಸ ಮಾಡಲು ಹಲವು ಮಾರ್ಗಗಳಿರುವಾಗ, ಅಸಾಧ್ಯತೆಯ ವಾದ ಮಾಡುವವರು ಆ ಎಲ್ಲ ಮಾರ್ಗಗಳನ್ನು ಪ್ರಯತ್ನಿಸಿರುವುದನ್ನು ಮತ್ತು ಪ್ರತಿಯೊಂದು ಮಾರ್ಗದಲ್ಲೂ ಹೇಗೆ ಅಡ್ಡಿಯಾಯಿತು ಎಂಬುದನ್ನು ಸಾಬೀತುಪಡಿಸಬೇಕು ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 117ರ ಅಡಿಯಲ್ಲಿ ಚುನಾವಣಾ ತಕರಾರು ಅರ್ಜಿಯೊಂದಿಗೆ ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯ. ಅದನ್ನು ಮನ್ನಾ ಮಾಡಲು ಅಥವಾ ತಡವಾಗಿ ಪಾವತಿಸುವುದನ್ನು ಕ್ಷಮಿಸಲು ಹೈಕೋರ್ಟ್‌ಗೆ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X