Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಾಡಿಗೆ ತಾಯ್ತನ ಆಯ್ಕೆಗೆ 13 ದಂಪತಿಗಳಿಗೆ...

ಬಾಡಿಗೆ ತಾಯ್ತನ ಆಯ್ಕೆಗೆ 13 ದಂಪತಿಗಳಿಗೆ ಅವಕಾಶ ಕಲ್ಪಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ21 Nov 2023 11:56 PM IST
share
ಬಾಡಿಗೆ ತಾಯ್ತನ ಆಯ್ಕೆಗೆ 13 ದಂಪತಿಗಳಿಗೆ ಅವಕಾಶ ಕಲ್ಪಿಸಿದ ಹೈಕೋರ್ಟ್

ಬೆಂಗಳೂರು: ದಾನಿಗಳಿಂದ ವೀರ್ಯಾಣು ಪಡೆದು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡು ಮಕ್ಕಳನ್ನು ಪಡೆಯಲು 13 ದಂಪತಿಗೆ ಹೈಕೋರ್ಟ್ ಅನುವು ಮಾಡಿಕೊಟ್ಟಿದೆ.

2023 ರ ಮಾ.14ರಿಂದ ಜಾರಿಗೆ ಬಂದಿರುವ ಸರೋಗೆಸಿ ತಿದ್ದುಪಡಿ ನಿಯಮ 7 ಅನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

ಅಲ್ಲದೇ, ಹೊಸ ಬಾಡಿಗೆ ತಾಯ್ತನ (ಸರೋಗೆಸಿ)ತಿದ್ದುಪಡಿಯ ಪ್ರಕಾರ, ದಾನಿಗಳ ವೀರ್ಯ ಪಡೆಯಲು ನಿರ್ಬಂಧಸಿದೆ. ಆದರೆ, ಅದು ಎಲ್ಲ ಪ್ರಕರಣಗಳನ್ನೂ ಏಕರೂಪವಾಗಿ ಅನ್ವಯಿಸುವುದು ಸರಿಯಲ್ಲ. ಪ್ರತಿಯೊಂದು ಪ್ರಕರಣಗಳನ್ನು ಆಧರಿಸಿ ನಿಯಮಗಳನ್ನು ಸಡಿಲಗೊಳಿಸಬಹುದು ಎಂದು ನ್ಯಾಯಪೀಠ ತಿಳಿಸಿದೆ.

ಮಕ್ಕಳನ್ನು ಹೊಂದಬೇಕು ಎನ್ನುವ ದಂಪತಿಗಳ ವೈದ್ಯಕೀಯ ಸ್ಥಿತಿಗತಿ ಆಧರಿಸಿ ನಿಯಮದಲ್ಲಿರುವ ನಿರ್ಬಂಧ ತೆಗೆದುಹಾಕಬೇಕಾಗುತ್ತದೆ ಅಥವಾ ಸಡಿಲಿಸಬೇಕಾಗುತ್ತದೆ. ಅದಕ್ಕೆ ನಿಯಮ 14ರಲ್ಲಿ ಅವಕಾಶವಿದೆ. ಕಾಯ್ದೆಯಲ್ಲಿ ವೈದ್ಯಕೀಯ ಸ್ಥಿತಿಗತಿ ಬಗ್ಗೆ ವ್ಯಾಖ್ಯಾನ ಇಲ್ಲದಿದ್ದರೂ ನಿಯಮ 14ರಲ್ಲಿ ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಳ್ಳಲು ಬಯಸುವ ಮಹಿಳೆಯ ಆರೋಗ್ಯ ಸ್ಥಿತಿಗತಿ ಅಂಶ ಪ್ರಸ್ತಾಪಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅಲ್ಲದೇ, ನ್ಯಾಯಾಲಯದ ಮುಂದೆ ಹಲವು ಅರ್ಜಿದಾರ ದಂಪತಿಗಳಿದ್ದಾರೆ. ಅವರ ವೈದ್ಯಕೀಯ ಸ್ಥಿತಿಗತಿಗಳನ್ನು ಪರಿಗಣಿಸಿ ಅವರಿಗೆ ಗರ್ಭಾವಸ್ಥೆಯ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯಲು ಅವಕಾಶ ನೀಡಲಾಗುವುದು. ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ಪ್ರಮಾಣಪತ್ರಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಹಲವು ಹೈಕೋರ್ಟ್‌ಗಳ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ ಕೇರಳ, ದೆಹಲಿ ಸೇರಿದಂತೆ ಹಲವು ಹೈಕೋರ್ಟ್‌ಗಳ ಮುಂದೆ ಬಂದಿವೆ. ದಿಲ್ಲಿ ಕೋರ್ಟ್ ಮೇಲ್ನೋಟಕ್ಕೆ ಹೊಸ ನಿಯಮಗಳು ದಂಪತಿಗಳ ಹಕ್ಕುಗಳನ್ನು ಕಸಿದುಕೊಂಡಿವೆ ಎಂದು ಹೇಳಿದ್ದರೆ, ಕೇರಳ ಹೈಕೋರ್ಟ್ ಈ ತಿದ್ದುಪಡಿಯ ಹಿಂದಿನ ಉದ್ದೇಶವೇನು? ಎಂದು ಪ್ರಶ್ನಿಸಿದೆ. ಇದೇ ವಿಚಾರ ಸುಪ್ರೀಂಕೋರ್ಟ್ ಮುಂದೆಯೂ ಬಾಕಿ ಇದೆ. ಅಲ್ಲಿ ಮಧ್ಯಂತರ ಆದೇಶವಾಗಿ ಮಹಿಳೆಯೊಬ್ಬರಿಗೆ ದಾನಿಗಳಿಂದ ವೀರ್ಯಾಣು ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಿರುವ ಹೈಕೋರ್ಟ್ ಈ ಸಂಬಂಧದ ಹಲವು ತೀರ್ಪುಗಳನ್ನು ಉಲ್ಲೇಖಿಸಿದೆ.

ಜತೆಗೆ ಅರ್ಜಿದಾರರು ತಿದ್ದುಪಡಿಯನ್ನು ಪ್ರಶ್ನಿಸಿದ್ದಾರೆ. ಆದರೆ, ಹೊಸ ತಿದ್ದುಪಡಿ ವಿಚಾರ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ ನಿಯಮವನ್ನು ಸ್ವಲ್ಪ ಸಡಿಲಿಕೆ ಮಾಡಿ ನ್ಯಾಯಾಲಯದ ಮೊರೆ ಹೋಗಿದ್ದ 13 ದಂಪತಿಗೆ ಮಕ್ಕಳನ್ನು ಹೊಂದಲು ಅವಕಾಶ ಕಲ್ಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X