Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೆಟ್ರೊ ರೈಲು ದರ ನಿಗದಿ ಸಮಿತಿಯ ವರದಿ...

ಮೆಟ್ರೊ ರೈಲು ದರ ನಿಗದಿ ಸಮಿತಿಯ ವರದಿ ಬಹಿರಂಗ ಬಗ್ಗೆ ನಿಲುವು ತಿಳಿಸಿ : ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Sept 2025 9:31 PM IST
share
ಮೆಟ್ರೊ ರೈಲು ದರ ನಿಗದಿ ಸಮಿತಿಯ ವರದಿ ಬಹಿರಂಗ ಬಗ್ಗೆ ನಿಲುವು ತಿಳಿಸಿ : ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಮೆಟ್ರೊ ರೈಲು ಪ್ರಯಾಣ ದರ ಪರಿಷ್ಕರಣೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ತಾರಿಣಿ ಅವರ ನೇತೃತ್ವದ ‘ಮೆಟ್ರೊ ರೈಲು ದರ ನಿಗದಿ ಸಮಿತಿ’ ಸಲ್ಲಿಸಿರುವ ವರದಿ ಸಾರ್ವಜನಿಕಗೊಳಿಸುವ ಕುರಿತು ನಿಲುವು ತಿಳಿಸುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್‌ ಸೂಚಿಸಿದೆ.

ನ್ಯಾಯಮೂರ್ತಿ ತಾರಿಣಿ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿ ಬಹಿರಗಂಪಡಿಸಲು ಆದೇಶಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಸಂಸದರ ಪರ ವಕೀಲರು ವಾದ ಮಂಡಿಸಿ, ಅರ್ಜಿಗೆ ಬಿಎಂಆರ್‌ಸಿಎಲ್‌ ಆಕ್ಷೇಪಣೆ ಸಲ್ಲಿಸಿದೆ. ದರ ನಿಗದಿ ಸಮಿತಿ ವರದಿಯನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಲು ಜುಲೈನಲ್ಲಿ ರಾಜ್ಯ ಸರಕಾರ ಅನುಮತಿ ನೀಡಿದೆ ಎಂದು ಬಿಎಂಆರ್‌ಸಿಎಲ್ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಇನ್ನೂ ವೆಬ್‌ಸೈಟ್ ನಲ್ಲಿ ವರದಿ ಪ್ರಕಟಿಸಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ನ್ಯಾಯಮೂರ್ತಿ ತಾರಿಣಿ ನೇತೃತ್ವದ ದರ ನಿಗದಿ ಸಮಿತಿಯ ವರದಿಯನ್ನು ಬಹಿರಂಗಪಡಿಸುವ ಕುರಿತು ನಿಲುವು ತಿಳಿಸುವಂತೆ ಬಿಎಂಆರ್‌ಸಿಎಲ್‌ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ ಏನು?

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು ಕೇಂದ್ರ ಮತ್ತು ರಾಜ್ಯ ಸರಕಾರದ ಉದ್ದಿಮೆಯಾಗಿದೆ. ಸಾರ್ವಜನಿಕ ನಿಧಿಯನ್ನು ಬಳಕೆಯಾಗುತ್ತಿರುವ ನಿಗಮವು ಪಾರದರ್ಶಕವಾಗಿ ಸೇವೆ ಒದಗಿಸಬೇಕಿದ್ದು, ದರ ಏರಿಕೆ ಸಂಬಂಧಿಸಿದ ವರದಿ ಬಹಿರಂಗ ಪಡಿಸುವುದು ಬಿಎಂಆರ್‌ಸಿಎಲ್ ಕರ್ತ್ಯವವಾಗಿರಲಿದೆ. ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಮತ್ತು ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ದರ ನಿಗದಿಗೆ ಸಂಬಂಧಿಸಿದ ವರದಿಯನ್ನು ಈ ಹಿಂದೆ ದೆಹಲಿ, ಮುಂಬೈ ಮತ್ತು ಹೈದರಾಬಾದ್‌ ಮೆಟ್ರೊ ರೈಲು ನಿಗಮಗಳು ಸಾರ್ವಜನಿಕಗೊಳಿಸಿದ್ದವು. ಆದ್ದರಿಂದ, ಸ್ವೇಚ್ಛೆಯಿಂದ ನಡೆದುಕೊಳ್ಳುವುದನ್ನು ಬಿಟ್ಟು ಬಿಎಂಆರ್‌ಸಿಎಲ್‌ ಸಹ ವರದಿ ಬಹಿರಂಗಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರು ಮೆಟ್ರೊ ರೈಲು ಸಂಚರಿಸುವ ಕ್ಷೇತ್ರ ಪ್ರತಿನಿಧಿಸುವ ಸಂಸದರಾಗಿದ್ದು, ಹಲವು ಸಂದರ್ಭಗಳಲ್ಲಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಆದ್ದರಿಂದ, ವರದಿಯಲ್ಲಿನ ಅಂಶಗಳನ್ನು ತಿಳಿದುಕೊಳ್ಳಲು ಅವಕಾಶ ನೀಡಬೇಕು. ವರದಿ ಬಹಿರಂಗ ಪಡಿಸುವಂತೆ 2025ರ ಏಪ್ರಿಲ್ ತಿಂಗಳಿನಿಂದ ಈವರೆಗೂ 3 ಬಾರಿ ಮನವಿ ಸಲ್ಲಿಸಿದ್ದು, ವರದಿ ಬಹಿರಂಗಪಡಿಸುವಲ್ಲಿ ಬಿಎಂಆರ್‌ಸಿಎಲ್ ವಿಫಲವಾಗಿದೆ. ಸಾರ್ವಜನಿಕ ಪ್ರಾಧಿಕಾರವಾಗಿರುವ ನಿಗಮವು ಜನರ ಮೇಲೆ ಪರಿಣಾಮ ಬೀರುವಂತಹ ನಿರ್ಧಾರಗಳನ್ನು ತೆಗೆದುಕೊಂಡ ಸಂದರ್ಭದಲ್ಲಿ ಅದನ್ನು ಬಹಿರಂಗ ಪಡಿಸಬೇಕಾಗುತ್ತದೆ. ವರದಿಯನ್ನು ಬಹಿರಂಗ ಪಡಿಸದಂತೆ ಯಾವುದೇ ಕಾನೂನಿನಲ್ಲಿ ತಿಳಿಸಿಲ್ಲ. ಆದ್ದರಿಂದ, ಸಾರ್ವಜನಿಕ ಪ್ರಾಧಿಕಾರವಾಗಿರುವ ಬಿಎಂಆರ್‌ಸಿಎಲ್‌ಗೆ ವರದಿ ಬಹಿರಂಗ ಪಡಿಸುವಂತೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Tags

High CourtBMRCL
share
ವಾರ್ತಾಭಾರತಿ
ವಾರ್ತಾಭಾರತಿ
Next Story
X