Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಗದಿತ ಸಮಯ ಮೀರಿ ಪಟಾಕಿ ಸಿಡಿತ :...

ನಿಗದಿತ ಸಮಯ ಮೀರಿ ಪಟಾಕಿ ಸಿಡಿತ : ಸುಪ್ರೀಂ ಮಾರ್ಗಸೂಚಿ ಜಾರಿಗೆ ಕೈಗೊಂಡ ಕ್ರಮಗಳ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ13 Nov 2026 11:24 PM IST
share
ನಿಗದಿತ ಸಮಯ ಮೀರಿ ಪಟಾಕಿ ಸಿಡಿತ : ಸುಪ್ರೀಂ ಮಾರ್ಗಸೂಚಿ ಜಾರಿಗೆ ಕೈಗೊಂಡ ಕ್ರಮಗಳ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ನಿಗದಿತ ಸಮಯ ಮೀರಿ ತಡರಾತ್ರಿವರೆಗೂ ಪಟಾಕಿ ಸಿಡಿಸಲಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಜಾರಿಗೆ ಕೈಗೊಂಡಿರುವ ಕ್ರಮಗಳ ಕುರಿತು ಮೂರು ವಾರಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಸುಪ್ರೀಂಕೋರ್ಟ್ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಟಾಕಿ ಸಿಡಿಸಲಾಗುತ್ತಿದೆ ಎಂದು ಆಕ್ಷೇಪಿಸಿ ಬೆಂಗಳೂರಿನ ವಿನೋದ್ ಜಾಕೋಬ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಸಿಡಿಸಲು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದರೂ ಈ ಸಮಯದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿಲ್ಲ. ರಾತ್ರಿ 9:30ರ ಬಳಿಕ ಪಟಾಕಿ ಸಿಡಿಸಲು ಆರಂಭಿಸಿ, ನಸುಕಿನವರೆಗೂ ಮುಂದುವರಿಸುವ ಪ್ರವೃತ್ತಿ ಕಂಡುಬರುತ್ತಿದೆ. ಪಟಾಕಿ ಸಿಡಿಸಲು ನಿಗದಿಪಡಿಸಿರುವ ಸಮಯದ ಮಿತಿಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಪಟಾಕಿ ಬಳಕೆಯ ಮೇಲಿನ ಸಮಯದ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವನ್ನು ಒತ್ತಿಹೇಳಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿತು. ಜತೆಗೆ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಜಾರಿಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು.

Tags

Supreme CourtHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X