Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಐಬಿಇ ಉತ್ತೀರ್ಣರಾಗದ ವಕೀಲರ ಪತ್ತೆಗೆ...

ಎಐಬಿಇ ಉತ್ತೀರ್ಣರಾಗದ ವಕೀಲರ ಪತ್ತೆಗೆ ವ್ಯವಸ್ಥೆ ರೂಪಿಸಲಿ ಕೆ‌ಎಸ್‌ಬಿಸಿಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ19 Oct 2026 11:42 PM IST
share
ಎಐಬಿಇ ಉತ್ತೀರ್ಣರಾಗದ ವಕೀಲರ ಪತ್ತೆಗೆ ವ್ಯವಸ್ಥೆ ರೂಪಿಸಲಿ ಕೆ‌ಎಸ್‌ಬಿಸಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ) ಉತ್ತೀರ್ಣರಾಗದೆ ನಿಗದಿತ ಅವಧಿಯ ನಂತರವೂ ಕಾನೂನು ವೃತ್ತಿ ನಡೆಸುತ್ತಿರುವ ವಕೀಲರನ್ನು ಗುರುತಿಸಿ, ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಸೂಕ್ತ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ಗೆ (ಕೆಎಸ್‌ಬಿಸಿ) ಹೈಕೋರ್ಟ್ ನಿರ್ದೇಶಿಸಿದೆ.

ವ್ಯಕ್ತಿಯೊಬ್ಬರು 2011ರಲ್ಲಿ ವಕೀಲರಾಗಿ ನೋಂದಣಿಯಾಗಿ ಎಐಬಿಇ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಸುಮಾರು 11 ವರ್ಷಗಳ ಕಾಲ ವಕೀಲಿಕೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಈ ನಿರ್ದೇಶನಗಳನ್ನು ನೀಡಿದೆ. ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಕ್ಟೋಬರ್ 17ರಂದು ಹೊರಡಿಸಿರುವ ಆದೇಶದಲ್ಲಿ ಈ ನಿರ್ದೇಶನ ನೀಡಿದ್ದು, ಅಗತ್ಯ ವ್ಯವಸ್ಥೆ ರೂಪಿಸಲು ಕೆಎಸ್‌ಬಿಸಿ‌ಗೆ 45 ದಿನಗಳ ಗಡುವು ವಿಧಿಸಿದೆ.

ವಕೀಲರನ್ನು ನೋಂದಾಯಿಸುವುದಷ್ಟೇ ಕೆ‌ಎಸ್‌ಬಿಸಿ ಕರ್ತವ್ಯವಲ್ಲ. ವಕೀಲಿಕೆ ನಡೆಸಲು ಅರ್ಹರಾಗಿರುವವರು ಮತ್ತು ಅರ್ಹರಲ್ಲದವರ ದಾಖಲೆಯನ್ನು ನಿರ್ವಹಿಸುವುದೂ ಅದರ ಕರ್ತವ್ಯವಾಗಿದೆ. ಎಐಬಿಇ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ವಕೀಲಿಕೆ ಮುಂದುವರಿಸುತ್ತಿರುವವರನ್ನು ಗುರುತಿಸಲು ನಿರ್ದಿಷ್ಟ ವ್ಯವಸ್ಥೆ ರೂಪಿಸಿ, ಪತ್ತೆಹಚ್ಚಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ವಕೀಲರಾಗಿ ನೋಂದಣಿ ಮಾಡಿಕೊಂಡ ಬಳಿಕ ಎರಡು ವರ್ಷಗಳೊಳಗೆ ಎಐಬಿಇ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುವುದರಿಂದ, ನಿಗದಿತ ಅವಧಿಯಲ್ಲಿ ಪರೀಕ್ಷೆ ಉತ್ತೀರ್ಣರಾಗದ ವಕೀಲರನ್ನು ಗುರುತಿಸಲು ಪರಿಣಾಮಕಾರಿ ವ್ಯವಸ್ಥೆ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಡಿಜಿಟಲ್ ದಾಖಲೆ ನಿರ್ವಹಿಸಲು ಸೂಚನೆ

ವಕೀಲರ ನೋಂದಣಿ ದಿನಾಂಕ ಮತ್ತು ಎರಡು ವರ್ಷಗಳ ಗಡುವು ಮುಕ್ತಾಯವಾಗುವ ದಿನಾಂಕವನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಿಕೊಳ್ಳುವಂತೆ ವಕೀಲರ ಪರಿಷತ್‌ಗೆ ಸೂಚಿಸಿದೆ.

ನೋಂದಣಿಯಾದರೂ ವಕೀಲಿಕೆ ಮುಂದುವರಿಸಲು ಅಗತ್ಯ ಅರ್ಹತೆ ಪಡೆಯದ ವಕೀಲರನ್ನು ಪರಿಷತ್ ಗುರುತಿಸಬೇಕು. ಕಾನೂನುಬಾಹಿರ ವಕೀಲಿಕೆಯನ್ನು ತಡೆಯಲು ಅಂತಹವರ ಪಟ್ಟಿಯನ್ನು ಸಿದ್ಧಪಡಿಸಿ, ಅವರ ನೋಂದಣಿ ಅಮಾನತುಗೊಳಿಸುವ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ವಕೀಲರ ನೋಂದಣಿಗೆ ಸಂಬಂಧಿಸಿದ ಸಮಗ್ರ ದಾಖಲೆಯನ್ನು ನಿರ್ವಹಿಸುವುದರ ಜತೆಗೆ, ಸಂಬಂಧಪಟ್ಟ ವಕೀಲರು ಎಐಬಿಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುವ ವ್ಯವಸ್ಥೆಯನ್ನೂ ರೂಪಿಸಬೇಕು. ಈ ಸಂಬಂಧ ಭಾರತೀಯ ವಕೀಲರ ಪರಿಷತ್ತಿನ (ಬಿಸಿಐ) ನೆರವಿನೊಂದಿಗೆ ಎಐಬಿಇ ಪರೀಕ್ಷೆಯ ಫಲಿತಾಂಶಗಳನ್ನು ಪರಿಶೀಲಿಸಲು ಸೂಕ್ತ ಕಾರ್ಯವಿಧಾನ ರೂಪಿಸುವಂತೆ ಕೆಎಸ್‌ಬಿಸಿಗೆ ಸೂಚಿಸಲಾಗಿದೆ. ಈ ವ್ಯವಸ್ಥೆಯ ಕಾರ್ಯನಿರ್ವಹಣೆಯ ಕುರಿತು ಕಾಲಕಾಲಕ್ಕೆ ಪರಿಶೀಲನೆ ನಡೆಸುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಇದೇ ವೇಳೆ, ಎಐಬಿಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಲ್ಲ ಎಂಬ ಕಾರಣಕ್ಕೆ ಗುರುತಿಸಲಾದ ವಕೀಲರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವ ಮೊದಲು, ಅವರಿಗೆ ತಮ್ಮ ವಾದ ಮಂಡಿಸಲು ಸಮರ್ಪಕ ಅವಕಾಶ ನೀಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X