Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಸ್ತೆ ಗುಂಡಿ ಮುಚ್ಚಲು ಕೈಗೊಂಡ...

ರಸ್ತೆ ಗುಂಡಿ ಮುಚ್ಚಲು ಕೈಗೊಂಡ ಕ್ರಮಗಳೇ‌ನು? ಸಮಗ್ರ ಪ್ರಮಾಣಪತ್ರ ಸಲ್ಲಿಸಲು ಜಿಬಿಎಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ14 Aug 2026 7:17 PM IST
share
ರಸ್ತೆ ಗುಂಡಿ ಮುಚ್ಚಲು ಕೈಗೊಂಡ ಕ್ರಮಗಳೇ‌ನು? ಸಮಗ್ರ ಪ್ರಮಾಣಪತ್ರ ಸಲ್ಲಿಸಲು ಜಿಬಿಎಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ನಗರದಲ್ಲಿ ಈವರೆಗೆ ಎಷ್ಟು ರಸ್ತೆ ಗುಂಡಿಗಳನ್ನು ಗುರುತಿಸಲಾಗಿದೆ, ಅವುಗಳಲ್ಲಿ ಎಷ್ಟು ಗುಂಡಿಗಳನ್ನು ಮುಚ್ಚಲಾಗಿದೆ, ರಸ್ತೆ ಗುಂಡಿಗಳನ್ನು ಮುಚ್ಚಲು ಕೈಗೊಂಡಿರುವ ಕ್ರಮಗಳೇನು ಎಂಬ ಕುರಿತ ಸಮಗ್ರ ವಿವರಗಳನ್ನು ಒಳಗೊಂಡ ಪ್ರಮಾಣಪತ್ರ ಸಲ್ಲಿಸುವಂತೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಕುರಿತು 2015ರಲ್ಲಿ ಕೋರಮಂಗಲದ ವಿಜಯನ್‌ ಮೆನನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಸ್ತೆ ದುರಸ್ತಿ ಕಾರ್ಯವಿಧಾನವನ್ನು ಸೂಚಿಸುವ ಪ್ರಮಾಣಪತ್ರ ಸಲ್ಲಿಸುವಂತೆ ಜಿಬಿಎಗೆ ಸೂಚಿಸಿತಲ್ಲದೆ, ಪ್ರಮಾಣಪತ್ರದಲ್ಲಿ ಗುಂಡಿಗಳ ಸಮಸ್ಯೆ ಎದುರಿಸಲು ಪ್ರತಿ ವರ್ಷ ಅಳವಡಿಸಿಕೊಳ್ಳುವ ಕಾರ್ಯವಿಧಾನ, ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಮತ್ತು ಅಂಥ ರಸ್ತೆಗಳ ಪ್ರಮಾಣ ತಗ್ಗಿಸಲು ಕೈಗೊಂಡ ಕ್ರಮಗಳು ಮತ್ತು ಗುಂಡಿಗಳನ್ನು ಗುರುತಿಸಿ ದುರಸ್ತಿ ಮಾಡಿದ ಸಮಗ್ರ ವಿವರಗಳನ್ನು ಒಳಗೊಂಡಿರುಬೇಕು ಎಂದು ಆದೇಶಿಸಿತು.

ಇದೇ ವೇಳೆ, ರಸ್ತೆ ಗುಂಡಿಗಳಿಂದ ಉಂಟಾದ ಸಾವು, ನೋವುಗಳಿಗೆ ಸಂಬಂಧಿಸಿದಂತೆ ದಾಖಲಾದ ಎಫ್‌ಐಆರ್‌ಗಳ ಸಂಖ್ಯೆಯ ಕುರಿತು ಮಾಹಿತಿ ಪಡೆದು ಒದಗಿಸುವಂತೆ ಸರ್ಕಾರದ ಪರ ವಕೀಲರಿಗೆ ನ್ಯಾಯಪೀಠ ಸೂಚಿಸಿದೆ.

ಇದಕ್ಕೂ ಮುನ್ನ ಜಿಬಿಎ ಪರ ವಕೀಲರು ವಾದ ಮಂಡಿಸಿ, ಏಪ್ರಿಲ್‌‌ನಿಂದ ಈವರೆಗೆ 10,202 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ರಸ್ತೆಗುಂಡಿ ಮುಚ್ಚುವ ಕಾರ್ಯ ಈಗಲೂ ನಡೆಯುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಷ್ಟು ಸಮಯದ ಅಗತ್ಯವಿದೆ ಎಂಬ ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿದ ವಕೀಲರು, ಅದು ನಿರಂತರ ಪ್ರಕ್ರಿಯೆ ಎಂದು ತಿಳಿಸಿದರು.

Tags

High CourtGBA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X