Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವನ್ಯಜೀವಿ ಅಂಗಾಂಗ ಮರಳಿಸಲು ರಾಜ್ಯ ಸರಕಾರ...

ವನ್ಯಜೀವಿ ಅಂಗಾಂಗ ಮರಳಿಸಲು ರಾಜ್ಯ ಸರಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ವಾರ್ತಾಭಾರತಿವಾರ್ತಾಭಾರತಿ20 Feb 2024 8:50 PM IST
share
ವನ್ಯಜೀವಿ ಅಂಗಾಂಗ ಮರಳಿಸಲು ರಾಜ್ಯ ಸರಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ʼವನ್ಯಜೀವಿಗಳಿಗೆ ಸಂಬಂಧಿಸಿದ ಮತ್ತು ಅವುಗಳ ದೇಹದ ಯಾವುದೇ ಭಾಗ ಅಥವಾ ವಸ್ತುಗಳ ಸಂಗ್ರಹ ಕಾನೂನುಬಾಹಿರವಾಗಿದ್ದು, ಅಂತಹ ವಸ್ತುಗಳು ಇದ್ದಲ್ಲಿ ಅವುಗಳನ್ನು ಸ್ಥಳೀಯ ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಬೇಕು’ ಎಂದು ಘೋಷಿಸಿ ರಾಜ್ಯ ಸರಕಾರ ಹೊರಡಿಸಿದ್ದ ಅಧಿಸೂಚನೆ ಹಾಗೂ ಈ ಸಂಬಂಧ ಅರಣ್ಯಾಧಿಕಾರಿಗಳು ಅರ್ಜಿದಾರರಿಗೆ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಅಧಿಸೂಚನೆ ಮತ್ತು ನೋಟಿಸ್‌ ಪ್ರಶ್ನಿಸಿ ಕೊಡಗು ಜಿಲ್ಲೆ ವಿರಾಜಪೇಟೆಯ ಪಿ.ಎ.ರಂಜಿ ಪೂಣಚ್ಚ ಮತ್ತು ನಾಪೋಕ್ಲುವಿನ ಕೆ.ಎ.ಕುಟ್ಟಪ್ಪ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಒಟ್ಟು ಏಳು ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿರುವ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್‌ 18ಕ್ಕೆ ಮುಂದೂಡಿದೆ.

ಪ್ರಕರಣವೇನು?: ಹುಲಿ ಉಗುರು ಧರಿಸಿದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರ 2024ರ ಜನವರಿ 10ರಂದು ಅಧಿಸೂಚನೆಯೊಂದನ್ನು ಹೊರಡಿಸಿತ್ತು. ‘ವನ್ಯಜೀವಿಗಳಿಗೆ ಸಂಬಂಧಿಸಿದ ಮತ್ತು ಅವುಗಳ ದೇಹದ ಯಾವುದೇ ಭಾಗ ಅಥವಾ ವಸ್ತುಗಳ ಸಂಗ್ರಹ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಪ್ರಕಾರ ಶಿಕ್ಷಾರ್ಹ ಅಪರಾಧ. ಒಂದು ವೇಳೆ ಯಾರಾದರೂ ತಮ್ಮ ಬಳಿ ವನ್ಯಜೀವಿಗಳ ದೇಹದ ಭಾಗಗಳನ್ನು ಇದ್ದಲ್ಲಿ ಅವುಗಳನ್ನು ಸಮೀಪದ ಅರಣ್ಯಾಧಿಕಾರಿ ವಶಕ್ಕೆ ಒಪ್ಪಿಸಬೇಕು. ಇವುಗಳ ನಿಖರತೆ ಮತ್ತು ಕಾನೂನು ಬದ್ಧತೆಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿತ್ತು.

ಈ ನಿಟ್ಟಿನಲ್ಲಿ ಪ್ರಕರಣದ ಅರ್ಜಿದಾರರಿಗೆ ಮಡಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ನೋಟಿಸ್‌ ನೀಡಿ, ‘ನೀವು ಮುಖ್ಯ ಸಮಾರಂಭಗಳಲ್ಲಿ ಸಾಂಪ್ರದಾಯಿಕ ಉಡುಗೆ–ತೊಡುಗೆ ಜೊತೆಗೆ ಸಾಲು ಸಾಲು ಹುಲಿ ಉಗುರುಗಳನ್ನು ಹೊಂದಿರುವ ಕತ್ತಿಯನ್ನು ನಿಮ್ಮ ಬಳಿ ಹೊಂದಿರುತ್ತೀರಿ. ಈ ಕುರಿತಂತೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಅದಕ್ಕೆ ಸಂಬಂಧಿಸಿದ ಛಾಯಾಚಿತ್ರಗಳೂ ನಮ್ಮ ಬಳಿ ಇವೆ. ಆದ್ದರಿಂದ, ನೀವು ಧರಿಸಿರುವ ಹುಲಿ ಉಗುರುಗಳನ್ನು ತಕ್ಷಣವೇ ಅರಣ್ಯ ಇಲಾಖೆ ಕಚೇರಿಗೆ ತಂದು ಒಪ್ಪಿಸಬೇಕು. ನಿಮ್ಮ ಬಳಿ ಹುಲಿ ಉಗುರುಗಳು ಇಲ್ಲವೆಂಬುದೇ ನಿಮ್ಮ ನಿಲುವಾದಲ್ಲಿ ಕಚೇರಿಗೆ ಹಾಜರಾಗಿ ಛಾಯಾಚಿತ್ರಗಳ ಬಗ್ಗೆ ಸ್ಪಷ್ಟನೆ ನೀಡಲು ಸೂಚಿಸಲಾಗಿದೆ’ ಎಂದು ತಿಳಿಸಿದ್ದರು. ‘ಈ ನೋಟಿಸ್‌ ಮತ್ತು ಸರಕಾರ ಹೊರಡಿಸಿದ ಅಧಿಸೂಚನೆ ಸಂವಿಧಾನದ 14, 19 ಮತ್ತು 21ರ ಸ್ಪಷ್ಟ ಉಲ್ಲಂಘನೆ’ ಎಂದು ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X