Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ...

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ವಾರ್ತಾಭಾರತಿವಾರ್ತಾಭಾರತಿ18 March 2024 9:55 PM IST
share
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಕನ್ನಡ ಕಡ್ಡಾಯಗೊಳಿಸುವ ಕಾಯ್ದೆ ಹಾಗೂ ಸುತ್ತೋಲೆಯನ್ನು ಪ್ರಶ್ನಿಸಿ ಮುಂಬೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ ಸೇರಿದಂತೆ ಒಟ್ಟು ಎಂಟು ಕಂಪನಿಗಳು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

ಅರ್ಜಿದಾರರು, ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ಪೀಠ, ಸುತ್ತೋಲೆಯ ಅನುಸಾರ ವಾಣಿಜ್ಯ ಸಂಸ್ಥೆಗಳ ವಿರುದ್ಧ ಸದ್ಯಕ್ಕೆ ಬಲವಂತದ ಕ್ರಮ ಜರುಗಿಸಬಾರದು. ಅಂತೆಯೇ, ಕಾಯ್ದೆ ಯಾವ ದಿನದಿಂದ ಜಾರಿಗೆ ಬಂದಿದೆ? ಯಾವ ದಿನ ಸರ್ಕಾರದ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಅಧಿಸೂಚನೆಗೊಂಡು ಪ್ರಕಟವಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಈ ಕುರಿತ ದಾಖಲೆಗಳನ್ನು ಒದಗಿಸಿ ಎಂದು ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಅವರಿಗೆ ಸೂಚಿಸಿ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ’ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು. ಶೇ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು? ಎಂದು ವಾಣಿಜ್ಯ ಮಳಿಗೆಗಳ ಸಂಘದ ಪರ ವಕೀಲರನ್ನು ಮೌಖಿಕವಾಗಿ ಪ್ರಶ್ನಿಸಿದರು.ಇದಕ್ಕೆ ಅರ್ಜಿದಾರರ ಪರ ವಕೀಲರು, ಎಲ್ಲಾ ಬಗೆಯ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022ರ ಜಾರಿ ಸಮರ್ಪಕವಾಗಿಲ್ಲ. ಜಾರಿ ದಿನಾಂಕದ ಬಗ್ಗೆ ಗೆಜೆಟ್‌ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಅಂತೆಯೇ, ಡಿಜಿಟಲ್‌ ನಾಮಫಲಕಗಳನ್ನು ಬದಲಿಸಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಮತ್ತು ಬಿಬಿಎಂಪಿ ಸ್ವಲ್ಪ ಸಮಯಾವಕಾಶ ನೀಡಿದೆಯಾದರೂ ಅದು ಸಾಕಾಗುತ್ತಿಲ್ಲ. ಒಂದೇ ಬಾರಿಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ಫಲಕ ಬದಲಾವಣೆಗೆ ಮುಂದಾಗಿರುವುದರಿಂದ ನಾಮಫಲಕಗಳು ಸಕಾಲದಲ್ಲಿ ಲಭ್ಯವಾಗುತ್ತಿಲ್ಲ. ಆದರೆ, ಸರ್ಕಾರ ಮತ್ತು ಬಿಬಿಎಂಪಿ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಲು ಮುಂದಾಗುತ್ತಿವೆ. ವ್ಯಾಪಾರಿಗಳ ವಿರುದ್ಧ ಇದೊಂದು ಉಗ್ರ ಕ್ರಮವಾಗಿದೆ. ಇದರಿಂದ ವಾಣಿಜ್ಯ ಸಂಸ್ಥೆಗಳ ವ್ಯಾಪಾರ, ವಹಿವಾಟಿಗೆ ತೊಂದರೆಯಾಗುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X