ರೌಡಿಶೀಟರ್ ಹತ್ಯೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ

ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ, ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧಿಸದಂತೆ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಹೈಕೋರ್ಟ್ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ. ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್ ರದ್ದು ಕೋರಿ ಬಿಜೆಪಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಮೇಲಿನ ಆದೇಶ ನೀಡಿದೆ.
ಅರ್ಜಿದಾರರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 35(3)ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಅದರಂತೆ ವಿಚಾರಣೆ ನಡೆಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
Next Story





