Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರ್‌ಟಿಐ ಮಾಹಿತಿಗಾಗಿ ಏಕರೂಪ ವ್ಯವಸ್ಥೆ...

ಆರ್‌ಟಿಐ ಮಾಹಿತಿಗಾಗಿ ಏಕರೂಪ ವ್ಯವಸ್ಥೆ ಜಾರಿಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ3 Oct 2026 10:19 PM IST
share
ಆರ್‌ಟಿಐ ಮಾಹಿತಿಗಾಗಿ ಏಕರೂಪ ವ್ಯವಸ್ಥೆ ಜಾರಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ–2005ರ ಅನುಷ್ಠಾನಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಣೆ, ನಿರ್ವಹಣೆ ಹಾಗೂ ಬಹಿರಂಗಪಡಿಸುವುದಕ್ಕೆ ಸಂಬಂಧಿಸಿದಂತೆ ಏಕರೂಪದ ಡಿಜಿಟಲ್‌ ವ್ಯವಸ್ಥೆ ಜಾರಿಗೊಳಿಸುವಂತೆ ಕರ್ನಾಟಕ ಮಾಹಿತಿ ಆಯೋಗಕ್ಕೆ (ಕೆಐಸಿ) ಹೈಕೋರ್ಟ್ ನಿರ್ದೇಶಿಸಿದೆ.

ಮಾಹಿತಿ ಒದಗಿಸದ ಆಯೋಗದ ಕ್ರಮ ಪ್ರಶ್ನಿಸಿ ನಗರದ ಎನ್. ರಮೇಶ್ ಬಾಬು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರ್‌ಟಿಐ‌ಗೆ ಸಂಬಂಧಿಸಿದ ಮಾಹಿತಿಯನ್ನು ನಾಗರಿಕರು ಸುಲಭವಾಗಿ ಪಡೆಯುವಂತಾಗಬೇಕು. ಈ ನಿಟ್ಟಿನಲ್ಲಿ ಕೆಐಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಂದ್ರೀಕೃತ ಎಲೆಕ್ಟ್ರಾನಿಕ್ ಸೂಚ್ಯಂಕ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆದೇಶಿಸಿದೆ.

ವರ್ಷವಾರು ಸ್ವೀಕರಿಸಿದ, ವಿಲೇವಾರಿ ಮಾಡಿದ ಹಾಗೂ ತಿರಸ್ಕರಿಸಿದ ಆರ್‌ಟಿಐ ಅರ್ಜಿಗಳ ವಿವರ, ಮೊದಲ ಮತ್ತು ಎರಡನೇ ಮೇಲ್ಮನವಿಗಳ ಮಾಹಿತಿ, ವಿಧಿಸಲಾದ ದಂಡದ ವಿವರ ಹಾಗೂ ಮಾಹಿತಿ ಒದಗಿಸಲು ವಿಫಲವಾದ ಅಥವಾ ನಿರಾಕರಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿಗಳ (ಪಿಐಒ) ವಿರುದ್ಧ ಆರ್‌ಟಿಐ ಕಾಯ್ದೆಯ ಸೆಕ್ಷನ್ 20ರ ಅಡಿ ಶಿಫಾರಸು ಮಾಡಲಾದ ಶಿಸ್ತು ಕ್ರಮಗಳ ಮಾಹಿತಿಯನ್ನು ಈ ಏಕರೂಪ ವ್ಯವಸ್ಥೆ ಒಳಗೊಂಡಿರಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ರಾಜ್ಯದ ಪ್ರತಿಯೊಂದು ಇಲಾಖೆಯೂ ತನ್ನ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಪ್ರಾಧಿಕಾರಗಳನ್ನು ಗುರುತಿಸಿ, ಆರ್‌ಟಿಐ ಕಾಯ್ದೆಯ ಸೆಕ್ಷನ್ 25ರ ಅಡಿ ಅಗತ್ಯ ಮಾಹಿತಿ ಸಂಗ್ರಹಿಸಬೇಕು. ದಾಖಲೆಗಳನ್ನು ನಿರಂತರವಾಗಿ ನವೀಕರಿಸುವ ಹೊಣೆಗಾರಿಕೆಯನ್ನು ನಿರ್ದಿಷ್ಟ ಅಧಿಕಾರಿಗೆ ವಹಿಸಬೇಕು. ಈ ಎಲ್ಲ ಮಾಹಿತಿಯನ್ನು ವಿದ್ಯುನ್ಮಾನ ರೂಪದಲ್ಲಿ ನಿರ್ವಹಿಸಬೇಕು. ಇದರಿಂದ, ಕಡತಗಳನ್ನು ಕೈಯಾರೆ ಪರಿಶೀಲಿಸುವ ಅಗತ್ಯವಿಲ್ಲದೆ ಮಾಹಿತಿ ಹುಡುಕಲು, ವಿಂಗಡಿಸಲು ಹಾಗೂ ಮರುಪಡೆಯಲು ಸಾಧ್ಯವಾಗುವಂತಿರಬೇಕು ಎಂದು ನ್ಯಾಯಾಲಯ ಹೇಳಿದೆ.

ಕೆಐಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆರ್‌ಟಿಐ ಅನುಷ್ಠಾನ ಮತ್ತು ಅನುಸರಣೆಗೆ ಸಂಬಂಧಿಸಿದಂತೆ ಸ್ಪಷ್ಟವಾಗಿ ಗುರುತಿಸಬಹುದಾದ ಪ್ರತ್ಯೇಕ ವಿಭಾಗವನ್ನು ಹೊಂದಿರಬೇಕು. ಆಯೋಗದ ಕಾರ್ಯನಿರ್ವಹಣೆ, ಮೇಲ್ಮನವಿಗಳು, ದೂರುಗಳು, ದಂಡ ಹಾಗೂ ಕಾಯ್ದೆಯಡಿ ಮಾಡಲಾದ ಶಿಫಾರಸುಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪ್ರಕಟಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಈ ನಿರ್ದೇಶನಗಳು ಆರ್‌ಟಿಐ ಕಾಯ್ದೆಯಡಿ ಬಹಿರಂಗಪಡಿಸುವಿಕೆಯಿಂದ ವಿನಾಯಿತಿ ಪಡೆದಿರುವ ಅಂಶಗಳಿಗೆ ಅನ್ವಯಿಸುವುದಿಲ್ಲ. ಜತೆಗೆ, ಹೊಸದಾಗಿ ಯಾವುದೇ ಮಾಹಿತಿಗೆ ವಿನಾಯಿತಿ ಸೃಷ್ಟಿಸುವ ಉದ್ದೇಶವೂ ಇರುವುದಿಲ್ಲ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ.

Tags

High CourtRTI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X