Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುರುಘಾ ಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್...

ಮುರುಘಾ ಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ20 Nov 2023 6:06 PM IST
share
ಮುರುಘಾ ಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ನ. 20: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಶ್ರೀ ಬಂಧನ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಸ್ವಾಮೀಜಿಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಹೈಕೋರ್ಟ್ ಅವಕಾಶ ನೀಡಿದ್ದರೂ, ಬಂಧನಕ್ಕೊಳಪಡಿಸಿದ್ದ ಕ್ರಮವನ್ನು ಪ್ರಶ್ನಿಸಿ ಮುರುಘಾ ಶರಣರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಅರ್ಜಿದಾರರನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.

ಅಲ್ಲದೆ, ಈ ಆದೇಶದ ಪ್ರತಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್ ಅವರು ತಕ್ಷಣ ಇ-ಮೇಲ್ ಮೂಲಕ ಚಿತ್ರದುರ್ಗ ಜೈಲು ಅಧಿಕಾರಿಗಳಿಗೆ ರವಾನಿಸಿ ಆದಷ್ಟು ಶೀಘ್ರದಲ್ಲಿ ಬಿಡುಗಡೆಗೆ ಕ್ರಮ ವಹಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.

ಪೊಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದರು.

ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೊಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಎರಡನೇ ಪ್ರಕರಣ ಸಂಬಂಧ ಚಿತ್ರದುರ್ಗದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಸೋಮವಾರ ಶರಣರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ನೀಡಿ ಆದೇಶ ಹೊರಡಿಸಿದ್ದರು.

ವಾರೆಂಟ್ ಆದೇಶದ ಬೆನ್ನಲ್ಲೇ ಚಿತ್ರದುರ್ಗದ ಪೊಲೀಸರು ದಾವಣಗೆರೆಗೆ ತೆರಳಿ ಮುರುಘಾ ಶರಣರನ್ನು ಬಂಧಿಸಿದ್ದರು. ನಂತರ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣರನ್ನು ಹಾಜರುಪಡಿಸಿದ್ದರು.

14 ತಿಂಗಳ ಜೈಲುವಾಸ ಬಳಿಕ ಬಿಡುಗಡೆಯಾಗಿತ್ತು: ಪೊಕ್ಸೊ ಪ್ರಕರಣದಲ್ಲಿ ಸತತ 14 ತಿಂಗಳ ಜೈಲುವಾಸ ಅನುಭವಿಸಿ ಜಾಮೀನು ಪಡೆದು, ದಾವಣಗೆರೆಗೆ ಆಗಮಿಸಿ ಇಲ್ಲಿನ ವಿರಕ್ತಮಠದಲ್ಲಿ ಕಳೆದ ಮೂರು ದಿನಗಳಿಂದ ವಾಸ್ತವ್ಯ ಹೂಡಿರುವ ಚಿತ್ರದುರ್ಗದ ಮುರುಘಾ ಶ್ರೀಗಳು, ಶನಿವಾರವೂ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಜಾರಿದ್ದರು. ಶಾಸಕ ವೀರೇಂದ್ರ ಪಪ್ಪಿ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X