Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿಗಳನ್ನು ಭ್ರಷ್ಟಾಚಾರ ಎನ್ನಲಾಗದು...

ಗ್ಯಾರಂಟಿಗಳನ್ನು ಭ್ರಷ್ಟಾಚಾರ ಎನ್ನಲಾಗದು ಎಂದ ಹೈಕೋರ್ಟ್ | ಸಚಿವ ಝಮೀರ್ ಅಹ್ಮದ್ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

“ಕಾಂಗ್ರೆಸ್‌ ನ 5 ಗ್ಯಾರಂಟಿ ಯೋಜನೆಗಳನ್ನು ಸಾಮಾಜಿಕ ಕಲ್ಯಾಣ ಯೋಜನೆಗಳೆಂದು ಪರಿಗಣಿಸಬೇಕು”

ವಾರ್ತಾಭಾರತಿವಾರ್ತಾಭಾರತಿ27 April 2024 6:09 PM IST
share
ಗ್ಯಾರಂಟಿಗಳನ್ನು ಭ್ರಷ್ಟಾಚಾರ ಎನ್ನಲಾಗದು ಎಂದ ಹೈಕೋರ್ಟ್ | ಸಚಿವ ಝಮೀರ್ ಅಹ್ಮದ್ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಬೆಂಗಳೂರು : 2023 ವಿಧಾನಸಭಾ ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ತಪ್ಪಾದ ನೀತಿಯಿಂದ ಕೂಡಿದೆ ಎಂದು ಅಪಾದಿಸಬಹುದೇ ಹೊರತು ಅದನ್ನು ಪ್ರಜಾಪ್ರತಿನಿಧಿ ಕಾಯಿದೆ ಅಡಿ ಭ್ರಷ್ಟಾಚಾರ ಎಂದು ಕರೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಚಾಮರಾಜಪೇಟೆ ಶಾಸಕ ಝಮೀರ್‌ ಅಹ್ಮದ್‌ ಆಯ್ಕೆಯನ್ನು ಪ್ರಶ್ನಿಸಿ ಸ್ಥಳೀಯ ಮತದಾರ ಶಶಾಂಕ್‌ ಜೆ. ಶ್ರೀಧರ್‌ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ನೇತೃತ್ವದ ಏಕಸದಸ್ಯ ವಿಚಾರಣೆ ನಡೆಸಿ ವಜಾಗೊಳಿಸಿದೆ.

ಇದೇ ವೇಳೆ ಹೈಕೋರ್ಟ್ ನ್ಯಾಯಪೀಠ, ಕಾಂಗ್ರೆಸ್‌ ಪಕ್ಷ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಸಾಮಾಜಿಕ ಕಲ್ಯಾಣ ಯೋಜನೆಗಳು ಎಂದು ಪರಿಗಣಿಸಬೇಕು. ಆರ್ಥಿಕ ದೃಷ್ಟಿಯಿಂದ ಅವುಗಳನ್ನು ಮುನ್ನಡೆಸುವುದು ಸಾಧ್ಯವೇ ಎಂಬುದು ಬೇರೆ ವಿಚಾರವಾಗಿದೆ. ಈ ಯೋಜನೆಗಳ ಜಾರಿಯಿಂದ ಹೇಗೆ ರಾಜ್ಯದ ಬೊಕ್ಕಸ ದಿವಾಳಿಯಾಗಲಿದೆ, ಅದು ಹೇಗೆ ರಾಜ್ಯದ ದುರಾಡಳಿತಕ್ಕೆ ನಾಂದಿಯಾಡುತ್ತದೆ ಎಂಬುದನ್ನು ಇತರೆ ಪಕ್ಷವರು ತೋರಿಸಬೇಕಾಗುತ್ತದೆ. ಪ್ರಕರಣದ ವಾಸ್ತವಿಕ ಅಂಶಗಳು ಮತ್ತು ಸಂದರ್ಭ ಆಧರಿಸಿ ಅವುಗಳನ್ನು ತಪ್ಪಾದ ನೀತಿಗಳು ಎಂದು ವ್ಯಾಖ್ಯಾನಿಸುವ ಸಾಧ್ಯತೆ ಇದೆ. ಆದರೆ, ಅವುಗಳನ್ನು ಭ್ರಷ್ಟಾಚಾರ ಎನ್ನಲಾಗದು ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಆದರೆ ಕಣದಲ್ಲಿರುವ ಅಭ್ಯರ್ಥಿ ಅಥವಾ ಅವರ ಏಜೆಂಟ್‌ ಅಥವಾ ಇತರೆ ಯಾವುದೇ ವ್ಯಕ್ತಿಯು ಅಭ್ಯರ್ಥಿ ಅಥವಾ ಏಜೆಂಟ್‌ ಒಪ್ಪಿಗೆ ಪಡೆದು ಈ ರೀತಿಯ ಘೋಷಣೆ ಮಾಡಿದರೆ ಅದು ಭ್ರಷ್ಟಾಚಾರ ಕೃತ್ಯವಾಗಲಿದೆ ಎಂದು ನ್ಯಾಯಾಲಯ ಹೇಳಿದೆ. ಪಕ್ಷವೊಂದು ತಾನು ಅಧಿಕಾರಕ್ಕೆ ಬಂದರೆ ನಿರ್ದಿಷ್ಟ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳುವುದು ಭ್ರಷ್ಟಾಚಾರ ಕೃತ್ಯ ಎನ್ನಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ನೀತಿ ಉತ್ತಮವಾಗಿದೆಯೇ ಅಥವಾ ಉಚಿತ ಕೊಡುಗೆಗಳನ್ನು ನೀಡುವ ಪರಿಣಾಮವನ್ನು ಹೊಂದಿದೆಯೇ ಅಥವಾ ಇತರರಿಗೆ ಹಾನಿಯಾಗುವಂತೆ ಸಮಾಜದ ಒಂದು ವರ್ಗವನ್ನು ಸಮಾಧಾನಪಡಿಸುತ್ತದೆಯೇ ಎಂಬುದು ಚರ್ಚೆಯ ವಿಷಯವಾಗಿದೆ ಎಂಬುದನ್ನು ಮತದಾರರು ಪರಿಗಣಿಸಬೇಕಾಗಿದೆ ಎಂದು ನ್ಯಾಯಾಲಯ ಹೇಳಿದೆ. ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್‌ 123ರ ಅಡಿ ಈ ಘೋಷಣೆಗಳನ್ನು ಭ್ರಷ್ಟಾಚಾರ ಕೃತ್ಯ ಎಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ತಿಳಿಸಿದೆ. ಕಾಂಗ್ರೆಸ್‌ ಪ್ರಣಾಳಿಕೆಯು ಭ್ರಷ್ಟಾಚಾರಕ್ಕೆ ಸಮ ಎಂಬ ಏಕೈಕ ಆಧಾರದಲ್ಲಿ ಝಮೀರ್‌ ಅಹ್ಮದ್‌ ಖಾನ್‌ ಆಯ್ಕೆ ಪ್ರಶ್ನಿಸಿರುವ ಅರ್ಜಿಯಲ್ಲಿ ಯಾವುದೇ ಕ್ರಮದ ಅಗತ್ಯ ಕಾಣುತ್ತಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X