Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ...

ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಕುರಿತ ಉನ್ನತ ಮಟ್ಟದ ಸಭೆ

ಡಿಪಿಆರ್ ತ್ವರಿತಗೊಳಿಸಲು ಸಚಿವರ ಕಟ್ಟುನಿಟ್ಟಿನ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Nov 2026 3:25 PM IST
share
ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಕುರಿತ ಉನ್ನತ ಮಟ್ಟದ ಸಭೆ

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷಿ ಬೇಡ್ತಿ-ವರದಾ (ಹಿರೇವಡ್ಡಟ್ಟಿ) ನದಿ ಜೋಡಣೆ ಯೋಜನೆ'ಯ ಪ್ರಗತಿ ಪರಿಶೀಲನಾ ಸಭೆಯು ಕೃಷ್ಣಾ ಭಾಗ್ಯ ಜಲ ನಿಗಮದ ಕೇಂದ್ರ ಕಚೇರಿಯಲ್ಲಿ, ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಇನ್ನು ಈ ಸಭೆಯಲ್ಲಿ ಕೇಂದ್ರ ಜಲಸಂಪನ್ಮೂಲ (WRD) ಇಲಾಖೆಯ ಅಧಿಕಾರಿಗಳು, ರಾಜ್ಯ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳು, ಹಾಗೂ KNNL, VJNL, CNNL, KBJNL ನಿಗಮಗಳ ಎಲ್ಲಾ ವ್ಯವಸ್ಥಾಪಕ ನಿರ್ದೇಶಕರು, ಸಚಿವರ ಆಪ್ತ ಕಾರ್ಯದರ್ಶಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಯೋಜನೆಯ ವಿಸ್ತೃತ ವಿವರ:

* ಬೃಹತ್ ಮೊತ್ತದ ಯೋಜನೆ: ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ - NWDA ಸಿದ್ಧಪಡಿಸುತ್ತಿರುವ ಈ ವಿಸ್ತೃತ ನದಿ ಜೋಡಣೆ ಯೋಜನೆಗೆ 9,652.73 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

* ನೀರಿನ ಸದ್ಬಳಕೆ: ಪಶ್ಚಿಮಕ್ಕೆ ಹರಿಯುವ ಬೇಡ್ತಿ ನದಿಯ 524 Mm3 (ಸುಮಾರು 18.5 TMC) ಹೆಚ್ಚುವರಿ ನೀರನ್ನ ಮುಂಗಾರು ಹಂಗಾಮಿನಲ್ಲಿ ಪೈಪ್‌ಲೈನ್ ಮತ್ತು ಲಿಫ್ಟ್ ಮೂಲಕ ತುಂಗಭದ್ರಾ ಉಪ-ಕಣಿವೆಗೆ ತಿರುಗಿಸಲಾಗುತ್ತದೆ.

* ಹಂಚಿಕೆ ವಿವರ: ಲಭ್ಯವಾಗುವ ನೀರಿನಲ್ಲಿ 77 Mm3 ಕುಡಿಯುವ ಉದ್ದೇಶಕ್ಕೆ, 131 Mm3 ಕೈಗಾರಿಕೆಗಳಿಗೆ ಹಾಗೂ 316 Mm3 ನೀರನ್ನ ಕೃಷಿ ಮತ್ತು ನೀರಾವರಿಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

* ಕೃಷಿ ಹಾಗೂ ಜನತೆಗೆ ಲಾಭ: ಈ ಯೋಜನೆಯಿಂದ ಒಟ್ಟು 70,053 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಸುಮಾರು 20.21 ಲಕ್ಷ ಜನರಿಗೆ ನೇರ ಪ್ರಯೋಜನವಾಗಲಿದೆ.

* ಫಲಾನುಭವಿ ಜಿಲ್ಲೆಗಳು: ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ನೀರಿನ ಬವಣೆ ಈ ಯೋಜನೆಯಿಂದ ನೀಗಲಿದೆ.

* ಗೋದಾವರಿ-ಕಾವೇರಿ ಜೋಡಣೆ ಲಾಭ: ಬೇಡ್ತಿ-ವರದಾ ಯೋಜನೆಯನ್ನ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಯೊಂದಿಗೆ ಸಂಯೋಜಿಸಲಾಗಿದ್ದು, ಪರ್ಯಾಯ ವ್ಯವಸ್ಥೆಯಡಿ ಆಲಮಟ್ಟಿ ಜಲಾಶಯದ ಮೂಲಕ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 15.89 TMC ನೀರು ಲಭ್ಯವಾಗಲಿದೆ.

ಸ್ಥಳ ಗುರುತಿಸುವಿಕೆಗೆ ಮತ್ತು ಅರಣ್ಯ ಇಲಾಖೆ ಅನುಮತಿಗಳನ್ನ ತ್ವರಿತವಾಗಿ ಮುಗಿಸಲು ಸಚಿವರ ಸೂಚನೆ

ಯೋಜನೆಯ ಮಾರ್ಗಮಧ್ಯೆ ಹಾವೇರಿ ಜಿಲ್ಲೆಯಲ್ಲಿ ನೀರಿನ ಶೇಖರಣಾ ಘಟಕ ನಿರ್ಮಿಸಲು ಸೂಕ್ತ ಸ್ಥಳವನ್ನ ಕೂಡಲೇ ಗುರುತಿಸುವಂತೆ ಹಾಗೂ ನೀರಾವರಿ ಅಚ್ಚುಕಟ್ಟು ಪ್ರದೇಶವನ್ನ ತ್ವರಿತವಾಗಿ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ಯೋಜನೆಯ ಸಮೀಕ್ಷೆ ಮತ್ತು ತನಿಖಾ ಕಾರ್ಯಗಳಿಗಾಗಿ ಅರಣ್ಯ ಇಲಾಖೆಯಿಂದ ಅಗತ್ಯವಿರುವ ಅನುಮತಿಗಳನ್ನ ಆದ್ಯತೆಯ ಮೇರೆಗೆ ಶೀಘ್ರವಾಗಿ ಪಡೆದುಕೊಳ್ಳಲು ಸಮನ್ವಯತೆಯಿಂದ ಕೆಲಸ ಮಾಡುವಂತೆಯು ಸಹ ಸಚಿವರು ಸಲಹೆ ನೀಡಿದರು.

ಡಿಪಿಆರ್ ತ್ವರಿತಗೊಳಿಸಲು ಕಟ್ಟುನಿಟ್ಟು ಸೂಚನೆ

ಟೊಪೊಗ್ರಾಫಿಕಲ್ ಮತ್ತು ಜಿಯೋಲಾಜಿಕಲ್ ಸಮೀಕ್ಷೆಗಳು ಸಹ ಪ್ರಗತಿಯಲ್ಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಿ ವಿಸ್ತೃತ ಯೋಜನಾ ವರದಿಯನ್ನ (DPR) ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಚಿವರು ಹೇಳಿದರು.

Tags

Minister N. Cheluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X