Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ...

ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಾಸ್ ಗೆ ಹೇಳಿದ್ದೀನಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Dec 2023 7:54 PM IST
share
ಉಡುಪು ಅವರವರ ಇಷ್ಟ: ಹಿಜಾಬ್ ನಿಷೇಧ ವಾಪಾಸ್ ಗೆ ಹೇಳಿದ್ದೀನಿ: ಸಿಎಂ ಸಿದ್ದರಾಮಯ್ಯ

ನಂಜನಗೂಡು: ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೀನಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ.

ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು.

ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದರು.

ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು ಎಂದು ಸೂಚಿಸಿದರು.

ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮುಖ್ಯ ಅತಿಥಿಗಳಾಗಿದ್ದರು.

ಅನಿಲ್ ಚಿಕ್ಕಮಾದು, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಆಶ್ರಯ ಸಮಿತಿ ಅಧ್ಯಕ್ಷರಾದ‌ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೀತಿಲ್ವಾ?

ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X