Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ...

ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ; ವರ್ಷವಿಡೀ ‘ಗಾಂಧೀ ಭಾರತ’ ಕಾರ್ಯಕ್ರಮ

ಬೆಳಗಾವಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 Oct 2024 8:40 PM IST
share
ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ; ವರ್ಷವಿಡೀ ‘ಗಾಂಧೀ ಭಾರತ’ ಕಾರ್ಯಕ್ರಮ

ಬೆಂಗಳೂರು: ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಶತಮಾನೋತ್ಸವ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ‘ಗಾಂಧೀ ಭಾರತ’ ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಮುಂಬರುವ ಡಿಸೆಂಬರ್‌ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಂಟಿ ಅಧಿವೇಶನಕ್ಕೆ ಮಹಾತ್ಮಾ ಗಾಂಧೀಜಿಯವರನ್ನು ಜಗತ್ತಿನ ನಾಯಕ ಎಂದು ಕರೆದ ಅಮೇರಿಕಾದ ಮಾಜಿ ಅಧ್ಯಕ್ಷರಾಗಿರುವ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲು ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಬರಾಕ್ ಓಬಾಮಾ ಅವರಿಗೆ ಪತ್ರ ಬರೆದು ಆಗಮಿಸಲು ಕೋರುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.

1924ರ ಡಿಸೆಂಬರ್ 26-27 ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾಂಗ್ರೇಸ್ ಅಧಿವೇಶನ ಜರುಗಿದೆ. ಇದರ ನೆನಪನ್ನು ಮರುಸ್ಥಾಪಿಸಲು ಛಾಯಾಚಿತ್ರ ಪ್ರದರ್ಶನ, ಒಂದು ವರ್ಷ ಕಾಲ ವಸ್ತು ಪ್ರದರ್ಶನ, ಸ್ಮಾರಕ ಸ್ಥಂಭ ಸ್ಥಾಪನೆ ಮತ್ತಿತರ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶಗಳಿವೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಗಾಂಧೀಜಿಯವರಿಗೆ ಆಪ್ತವಾದ ಗ್ರಾಮೀಣಾಭಿವೃದ್ಧಿ ಮತ್ತು ಸ್ವರಾಜ್ ಚಟುವಟಿಕೆಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಹಮ್ಮಿಕೊಳ್ಳಲಾಗುವುದು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಮತ್ತು ಗಾಂಧೀ ವಿಚಾರಗಳ ಪರಿಣಿತರ ಸಲಹೆ ಪಡೆದು ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತನಾಡಿ, ಶತಮಾನೋತ್ಸವದ ಅಂಗವಾಗಿ ಒಂದು ವರ್ಷದ ಕಾಲ ಮಹಾತ್ಮಾ ಗಾಂಧೀಜಿಯವರ ಚಿಂತನೆ, ಪ್ರಯೋಗಗಳನ್ನು ಪುನರ್ ಮನನ ಮಾಡುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕು. ಮಕ್ಕಳು, ಯುವಜನರ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದರು.

ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಿ.ಎಲ್.ಶಂಕರ್ ಮಾತನಾಡಿ, ಗಾಂಧೀ ಮತ್ತು ಭಾರತವನ್ನು ಪ್ರತ್ಯೇಕವಾಗಿ ನೋಡಲು ಸಾಧ್ಯವಿಲ್ಲ. ಆದ್ದರಿಂದ ಈ ಕಾರ್ಯಕ್ರಮಕ್ಕೆ ‘ಗಾಂಧೀ ಭಾರತ’ ಎಂಬ ಶೀರ್ಷಿಕೆ ನೀಡಲಾಗಿದೆ ಎಂದರು.

ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆ, ಕಾಲೇಜುಗಳ ಪ್ರಮುಖ ಸ್ಥಳಗಳಲ್ಲಿ ಧ್ಯಾನಸ್ಥ ಸ್ಥಿತಿಯಲ್ಲಿರುವ ಗಾಂಧೀಜಿಯವರ ಭಾವಚಿತ್ರಗಳನ್ನು ಅಳವಡಿಸಲು ಕ್ರಮವಹಿಸಬೇಕು. ಗಾಂಧೀ ಭವನ, ಚಿತ್ರಕಲಾ ಪರಿಷತ್ ಈ ಚಿತ್ರಗಳನ್ನು ಒದಗಿಸಲಿವೆ. ಡಿ.ಎಸ್.ನಾಗಭೂಷಣ್ ಅವರು ಬರೆದ ಗಾಂಧೀ ಕಥನ ಕೃತಿಯನ್ನು ಮುದ್ರಿಸಿ ವಿತರಿಸಲು ಹಾಗೂ ರಿಚರ್ಡ್ ಅಟೆನ್ ಬರೋ ನಿರ್ದೇಶನದ ಮಹಾತ್ಮಾ ಗಾಂಧೀ ಚಲನಚಿತ್ರವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಬಿ.ಎಲ್.ಶಂಕರ್ ಸಲಹೆ ನೀಡಿದರು.

ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಮುಖ್ಯಮಂತ್ರಿಯವರ ನೀತಿ ಮತ್ತು ಕಾರ್ಯಕ್ರಮದ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕರಾದ ಜೆ.ಟಿ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, 2024ನೇ ಸಾಲಿನ ಗಾಂಧೀ ಸೇವಾ ಪ್ರಶಸ್ತಿ ಪುರಸ್ಕೃತ ಪ್ರೊ.ಜಿ.ಬಿ.ಶಿವರಾಜು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X