Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳ ಘರ್ಷಣೆ | ತನಿಖೆ ನಡೆಸಿ ವರದಿ...

ಧರ್ಮಸ್ಥಳ ಘರ್ಷಣೆ | ತನಿಖೆ ನಡೆಸಿ ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ7 Aug 2025 12:27 PM IST
share
ಧರ್ಮಸ್ಥಳ ಘರ್ಷಣೆ | ತನಿಖೆ ನಡೆಸಿ ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್‌ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್‌ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್‌ಐಟಿ ಮಾಡಿದ್ದೇವೆ ಎಂದು ತಿಳಿಸಿದರು.

ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ ಸಿಕ್ಕಿರುವ ಬಗ್ಗೆ ನೀವೆಲ್ಲ ವರದಿ ಮಾಡಿದ್ದೀರಿ. ಇದರ ಹೊರತುಪಡಿಸಿ ಗುಡ್ಡದಲ್ಲಿ ಒಂದಷ್ಟು ಮೂಳೆಗಳು ಸಿಕ್ಕಿದ್ದು, ಎಫ್‌ಎಸ್‌ಎಲ್ ಗೆ ಕಳಿಸುವ ಕೆಲಸ ಎಸ್‌ಐಟಿ ಮಾಡಿದೆ ಎಂದರು..

ಇದರ ಹಿನ್ನೆಲೆಯಲ್ಲಿ ಅಥವಾ ಸಂಬಂಧಪಟ್ಟಂತೆ ಎರಡು ಗುಂಪುಗಳ ಮಧ್ಯೆ ನಿನ್ನೆ ದಿನ ಘರ್ಷಣೆಯಾಗಿದೆ. ದೂರು, ಪ್ರತಿದೂರು ಕೊಟ್ಟಿದ್ದಾರೆ. ಎಫ್‌ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ. ಅದನ್ನ ತನಿಖೆ ಮಾಡುತ್ತಾರೆ. ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಎಸ್‌ಐಟಿ ಹಾಗೂ ಸ್ಥಳೀಯ ಪೊಲೀಸರು ಮಾಡುತ್ತಾರೆ ಎಂದು ತಿಳಿಸಿದರು.

ಧರ್ಮಸ್ಥಳದ ವಿಚಾರದಲ್ಲಿ ಯಾರೋ ಹೇಳಿಕೆ ಕೊಡುತ್ತಾರೆ ಅದು ನಮಗೆ ಮುಖ್ಯವಲ್ಲ. ಎಸ್‌ಐಟಿಯವರು ತನಿಖೆಯನ್ನು ತಾಂತ್ರಿಕವಾಗಿ ಮತ್ತು ಆಧುನಿಕವಾಗಿ ಸತ್ಯ ಹೊರಗೆ ಬರುವ ರೀತಿಯಲ್ಲಿ ಮಾಡಬೇಕು. ಆ ಕೆಲಸವನ್ನು ಎಸ್‌ಐಟಿ ಮಾಡುತ್ತದೆ. ಅವರನ್ನು ಈಗಲೇ ಪ್ರಶ್ನೆ ಮಾಡಿದರೆ ತನಿಖೆಗೆ ಅರ್ಥ ಬರುವುದಿಲ್ಲ ಎಂದರು.

ಎಸ್‌ಐಟಿ ಸರಿಯಾಗಿ ತನಿಖೆ ಮಾಡುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಸೆರಿಯಾಗಿ ತನಿಖೆ ಆಗುತ್ತಿಲ್ಲ ಎಂದು ಇನ್ನೂ ಕೆಲವರು ಹೇಳುತ್ತಿದ್ದಾರೆ. ಇವರೆ ಎಲ್ಲ ಸಲಹೆ ಕೊಡುತ್ತಾರೆ. ರೆಡಾರ್ ತರಬೇಕು ಎನ್ನುತ್ತಿದ್ದಾರೆ. ಅವರು ಹೇಳಿದ ರೀತಿ ತನಿಖೆ ಮಾಡಲು ಆಗುತ್ತದೆಯೇ? ಪೊಲೀಸರು ಸಮರ್ಥರಿದ್ದಾರೆ. ತನಿಖೆ ಮಾಡುತ್ತಾರೆ. ಎಸ್‌ಐಟಿ ತನಿಖೆಯ ಬಗ್ಗೆ ಸರಕಾರ ಯಾವುದೇ ಡೈರೆಕ್ಷನ್ಸ್ ಕೊಡುವುದಿಲ್ಲ ಎಂದು ಹೇಳಿದರು.

ನಾಳೆ ನಡೆಯಲಿರುವ ಮತಗಳ್ಳತನದ ವಿರುದ್ಧದ ಪ್ರತಿಭಟನೆಗೆ ಪೊಲೀಸ್ ಆಯುಕ್ತರು ಎಲ್ಲ ರೀತಿಯ ಭದ್ರತೆ ಕೈಗೊಂಡಿದ್ದಾರೆ‌. ಕೇಂದ್ರದಿಂದ ಎಸ್‌ಪಿಜಿ ಯವರು ಬಂದಿದ್ದಾರೆ. ಅವರೊಂದಿಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರುತ್ತಿದ್ದು, ಅವರಿಗೂ ಭದ್ರತೆ ಒದಗಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X