Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ...

ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?:‌ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ಷೇಪ

ʼʼಹಿಂದಿ ಹೇರಿಕೆ ದೇಶದ ಐಕ್ಯತೆಗೆ ಮಾರಕʼʼ

ವಾರ್ತಾಭಾರತಿವಾರ್ತಾಭಾರತಿ14 Sept 2023 6:37 PM IST
share
ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?:‌ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ಷೇಪ

ಬೆಂಗಳೂರು, ಸೆ. 14: ‘ಕನ್ನಡಿಗರಿಗೆ, ಕನ್ನಡ ನುಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾವು ಯಾರ ಅಡಿಯಾಳೂ ಅಲ್ಲ. ನಮಗೆ ನಮ್ಮದೇ ಆದ ಸಂಸ್ಕೃತಿ ಪರಂಪರೆ ಇದೆ. ಹಿಂದಿ ನುಡಿಯ ಯಜಮಾನಿಕೆ ನಮಗೆ ಬೇಕಿಲ್ಲ. ಒಕ್ಕೂಟ ಸರಕಾರ ಇದನ್ನು ಅರ್ಥ ಮಾಡಿಕೊಂಡು ಹಿಂದಿ ಹೇರಿಕೆ ನಿಲ್ಲಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಗುರುವಾರ ಸರಣಿ ಎಕ್ಸ್ ಮಾಡಿರುವ ಅವರು, ‘ಹಿಂದಿಹೇರಿಕೆಯ ಕ್ರೂರ ಪರಿಣಾಮಗಳನ್ನು ನಾವು ಈಗಾಗಲೇ ನಮ್ಮ ಬ್ಯಾಂಕು, ಅಂಚೆ ಕಚೇರಿಗಳಲ್ಲಿ, ಕೇಂದ್ರ ಸರಕಾರದ ಇಲಾಖೆಗಳಲ್ಲಿ, ಹೆದ್ದಾರಿಗಳಲ್ಲಿ ನೋಡುತ್ತಿದ್ದೇವೆ. ಹೀಗೇ ಬಿಟ್ಟರೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ, ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

‘ನಾವು ಯಾವ ನುಡಿಯ ವಿರೋಧಿಗಳೂ ಅಲ್ಲ. ಅವರವರಿಗೆ ಅವರವರ ನುಡಿಗಳು ಹೆಚ್ಚು. ನಿಮ್ಮ ಮೇಲೆ ನಮ್ಮ ನುಡಿಯನ್ನು ನಾವು ಹೇರಿಲ್ಲ. ನಮ್ಮ ಮೇಲೆ ನಿಮ್ಮ ನುಡಿಯನ್ನು ಹೇರಬೇಡಿ. ನಮಗೆ ಇಷ್ಟವಾದ ನುಡಿ ಕಲಿಯುತ್ತೇವೆ. ಹಿಂದಿಯನ್ನೇ ಕಲಿಯಬೇಕು ಎಂಬ ಹೇರಿಕೆ ಮಾಡಬೇಡಿ. ಸಂವಿಧಾನದಲ್ಲಿ ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ನಿಲ್ಲಿಸಬೇಕು. ಹಿಂದಿಗೆ ಹೆಚ್ಚುಗಾರಿಕೆ ನೀಡುವುದೆಂದರೆ ಹಿಂದಿ ಭಾಷಿಕರಿಗೆ ಹೆಚ್ಚುಗಾರಿಕೆ ನೀಡುವುದು. ಹೀಗಾದಾಗ ಎಲ್ಲರೂ ಸಮಾನರೆಂಬ ಸಂವಿಧಾನದ ಮೂಲ ಆಶಯವೇ ಈಡೇರುವುದಿಲ್ಲ. ಎಲ್ಲ ನುಡಿಗಳೂ ಸಮಾನವಾಗಬೇಕು’ ಎಂದು ಪ್ರತಿಪಾದಿಸಿದ್ದಾರೆ.

‘ಒಕ್ಕೂಟ ಸರಕಾರ ಇದೇ ರೀತಿ ಹಿಂದಿಹೇರಿಕೆ ಮುಂದುವರೆಸಿದರೆ ಭಾರತದ ಒಗ್ಗಟ್ಟಿನ ಬೇರೇ ಸಡಿಲವಾಗುತ್ತದೆ. ಈ ಹೇರಿಕೆಯಿಂದ ಹಿಂದಿಯೇತರರಲ್ಲಿ ಅಭದ್ರತಾ ಭಾವ ನೆಲೆಸುತ್ತಿದೆ. ಇದು ಒಳ್ಳೆಯ ಸೂಚನೆ ಅಲ್ಲ. ಭಾರತ ಒಂದಾಗಿರಬೇಕೆಂದರೆ ಎಲ್ಲರಿಗೂ ಸಮಾನ ಹಕ್ಕು ಅವಕಾಶಗಳಿರಬೇಕು. ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿ ಹೇರಿಕೆ ದೇಶದ ಐಕ್ಯತೆಗೆ ಮಾರಕ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ? ಉತ್ತರದ ರಾಜ್ಯಗಳಲ್ಲಿ ಎಂದಾದರೂ ಕನ್ನಡ ದಿವಸವನ್ನು ಆಚರಿಸಿದ್ದಾರೆಯೇ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಯಾಕೆ? ಹಿಂದಿ ರಾಜ್ಯಗಳಲ್ಲಿ ಹಿಂದಿ ದಿವಸ ಆಚರಿಸಿಕೊಳ್ಳಿ. ಕನ್ನಡ ನಾಡಿನಲ್ಲಿ ನಿಮ್ಮ ಆಚರಣೆ ಬೇಕಿಲ್ಲ. ಹಿಂದಿ ಎಂಬುದು ಹಿಂದೂಸ್ತಾನಿ, ಉರ್ದು, ಪರ್ಶಿಯನ್, ಸಂಸ್ಕೃತ ನುಡಿಗಳಿಂದ ಸಂಕರಗೊಂಡ ಕೃತಕ ನುಡಿ. ಅದಕ್ಕೆ ಯಾವ ಇತಿಹಾಸವೂ ಇಲ್ಲ. ಅದಕ್ಕೊಂದು ಸಾಂಸ್ಕೃತಿಕ ಪರಂಪರೆಯೂ ಇಲ್ಲ. ನಮಗೆ ನಮ್ಮ ಶ್ರೀಮಂತ ಕನ್ನಡವೇ ರಾಷ್ಟ್ರನುಡಿ. ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ’ ಎಂದು ಅವರು ತಿಳಿಸಿದ್ದಾರೆ.

‘ದಕ್ಷಿಣದ ರಾಜ್ಯಗಳಿಗೆ ಯಾವ ರೀತಿಯೂ ಸಂಬಂಧವಿಲ್ಲದ ಹಿಂದಿಯನ್ನು ಬಲವಂತವಾಗಿ ನಮ್ಮ ಶಿಕ್ಷಣದಲ್ಲಿ ತರಲಾಯಿತು. ಕನ್ನಡದ ಮಕ್ಕಳಿಗೆ ಬಲವಂತವಾಗಿ ಕಲಿಸಲಾಯಿತು. ಹಿಂದಿ ದೇಶದ ರಾಷ್ಟ್ರಭಾμÉ ಎಂದು ಸುಳ್ಳು ಹೇಳಿಕೊಡಲಾಯಿತು. ಇಷ್ಟು ದೊಡ್ಡ ದ್ರೋಹವನ್ನು ಬ್ರಿಟಿಷರೂ ಮಾಡಿರಲಿಲ್ಲ’ ಎಂದು ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕನ್ನಡಿಗರು ಯಾವ ಕಾರಣಕ್ಕೆ ಕಡ್ಡಾಯವಾಗಿ ಹಿಂದಿ ಕಲಿಯಬೇಕು? ಉತ್ತರದ ರಾಜ್ಯಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುತ್ತಿಲ್ಲ ಯಾಕೆ? ಇಷ್ಟನ್ನು ಅರ್ಥ ಮಾಡಿಕೊಂಡರೆ ಹಿಂದಿಹೇರಿಕೆಯ ಹುನ್ನಾರ ಅರ್ಥವಾಗುತ್ತದೆ. ನಮ್ಮನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುವುದೇ ಹಿಂದಿ ಹೇರಿಕೆಯ ಸಂಚು’

-ಟಿ.ಎ.ನಾರಾಯಣಗೌಡ ರಾಜ್ಯಾಧ್ಯಕ್ಷ ಕರವೇ

Tags

Narayana Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X