ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮಾ.31ರ ವರೆಗೆ ಅವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಎಲ್ಲ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ(ಎಚ್ಎಸ್ಆರ್ಪಿ) ಅಳವಡಿಸಲು ನೀಡಲಾಗಿದ್ದ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ.
ಎಪ್ರಿಲ್ 1, 2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಲು 2023ರ ಆಗಸ್ಟ್ 8ರವರೆಗೆ ಕಾಲಮಿತಿ ನೀಡಲಾಗಿತ್ತು. ಇದೀಗ 2025ರ ಮಾಚ್ 31ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.
Next Story





