Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಅಕ್ರಮ ಸಂಬಂಧ’ ಹೊಂದಿದ ಮಹಿಳೆಗೆ ಪತಿ...

‘ಅಕ್ರಮ ಸಂಬಂಧ’ ಹೊಂದಿದ ಮಹಿಳೆಗೆ ಪತಿ ಜೀವನಾಂಶ ನೀಡಲಾಗದು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 Oct 2023 9:45 PM IST
share
‘ಅಕ್ರಮ ಸಂಬಂಧ’ ಹೊಂದಿದ ಮಹಿಳೆಗೆ ಪತಿ ಜೀವನಾಂಶ ನೀಡಲಾಗದು: ಹೈಕೋರ್ಟ್

ಬೆಂಗಳೂರು, ಅ.6: ಮದುವೆಯಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ.

ಚಿಕ್ಕಮಗಳೂರು 2ನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಪುನರರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಈ ರೀತಿ ಹೇಳಿದ್ದು, ಅರ್ಜಿ ವಜಾಗೊಳಿಸಿತು.

ಅರ್ಜಿದಾರರು ಅಕ್ರಮ ಸಂಬಂಧ ಹೊಂದಿದ್ದು, ಪ್ರಾಮಾಣಿಕರಲ್ಲದಿದ್ದಾಗ ಪತಿಯಿಂದ ಜೀವನಾಂಶ ನೀಡಬೇಕು ಎಂಬ ವಾದ ಒಪ್ಪಿಕೊಳ್ಳುವುದಿಲ್ಲ. ಪತಿಯ ಕಡೆಯಿಂದ ಯಾವುದೇ ನಿರೀಕ್ಷೆ ಮಾಡಬಾರದು ಎಂದು ಪೀಠ ತಿಳಿಸಿದೆ.

ಅರ್ಜಿದಾರರು ಮತ್ತೊಬ್ಬ ವ್ಯಕ್ತಿಯೊಂದಿಗೆ ಓಡಿಹೋಗಿರುವ ಸಂಬಂಧ ದೂರು ದಾಖಲಾಗಿದ್ದು, ತನಿಖೆ ವೇಳೆ ಆಪ್ತನೊಂದಿಗೆ ನೆಲೆಸಲು ಇಚ್ಚಿಸುತ್ತಿದ್ದಾರೆ ಎಂಬುದಾಗಿ ಪೆÇಲೀಸರು ತಿಳಿಸಿದ್ದಾರೆ. ಇದೇ ಆಧಾರದಲ್ಲಿ ವಿಚ್ಛೇದನವೂ ಮಂಜೂರಾಗಿದೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿಲ್ಲ. ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿಲ್ಲ. ಈ ಸಂಬಂಧ ಹಿಂದೊಮ್ಮೆ ರಾಜಿ ಪಂಚಾಯತಿ ನಡೆಸಿದ ಬಳಿಕ ಗಂಡನ ಮನೆಗೆ ಕಳುಹಿಸಲಾಗಿತ್ತು. ಆದರೂ, ಅವರು ಗಂಡನನ್ನು ಬಿಟ್ಟು ಮತ್ತೊಬ್ಬ ವ್ಯಕ್ತಿಯೊಂದಿಗೆ ಸಹಜೀವನ ನಡೆಸುತ್ತಿದ್ದಾರೆ ಎಂಬುದಾಗಿ ಆಕೆಯ (ಅರ್ಜಿದಾರಳ) ಸಹೋದರ ತಿಳಿಸಿದ್ದಾರೆ.

ಪ್ರಕರಣವೇನು?: ಚಿಕ್ಕಮಗಳೂರು ಜಿಲ್ಲೆಯ ರಾಮನಹಳ್ಳಿಯ ವ್ಯಕ್ತಿ ಅದೇ ಜಿಲ್ಲೆಯ ರತ್ನಕೋಟೆ ಎಂಬ ಗ್ರಾಮದ ಮಹಿಳೆಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದರು. ಈ ಸಂಬಂಧ ರಾಜಿ ಪಂಚಾಯಿತಿ ನಡೆದು ಬುದ್ಧಿವಾದ ಹೇಳಲಾಗಿತ್ತು.

ಆದರೂ, ಆಕೆ ತನ್ನ ವರ್ತನೆ ಸರಿಪಡಿಸಿಕೊಂಡಿರಲಿಲ್ಲ. ಇದೇ ಆಧಾರದಲ್ಲಿ ಕೌಟುಂಬಿಕ ನ್ಯಾಯಾಲಯ ವಿಚ್ಚೇದನವನ್ನೂ ಮಂಜೂರು ಮಾಡಿತ್ತು. ಆದರೆ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಪತ್ನಿಗೆ ಜೀವನ ನೀರ್ವಹಣೆಗೆ 1,500 ರೂ., ಮನೆ ಬಾಡಿಗೆಗೆ 1 ಸಾವಿರ ರೂ. ಮತ್ತು 5 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿತ್ತು. ಈ ಆದೇಶವನ್ನು ಸೆಷನ್ಸ್ ನ್ಯಾಯಾಲಯ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರ ಹೈಕೋರ್ಟ್‍ನಲ್ಲಿ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X