Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಿಜಾಬ್ ಕುರಿತು ಸಿಎಂ ಸಿದ್ದರಾಮಯ್ಯ ಅವರು...

ಹಿಜಾಬ್ ಕುರಿತು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ23 Dec 2023 4:59 PM IST
share
ಹಿಜಾಬ್ ಕುರಿತು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹಿಜಾಬ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿದ್ದು, ಬಿಜೆಪಿಯವರು ಇಲ್ಲಸಲ್ಲದ ಟೀಕೆ ಮಾಡುವ ಬದಲು ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ʼಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಹಿಜಾಬ್ ನಿಷೇಧ, ಪಠ್ಯ ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದರು. ಆ ಸಂದರ್ಭದಲ್ಲೇ ಸಿದ್ದರಾಮಯ್ಯ ಅವರು ಹಿಜಾಬ್ ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆಯಾ ಧರ್ಮದ ಪದ್ಧತಿಗಳ ಪಾಲನೆಗೆ ಅಡ್ಡಿ ಉಂಟು ಮಾಡಬಾರದು ಎಂದಿದ್ದರು. ಈಗ ಕಾರ್ಯಕ್ರಮ ಒಂದರಲ್ಲಿ ಯಾರೋ ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ನಿಷೇಧ ಹಿಂಪಡೆಯುವ ಹೇಳಿಕೆ ನೀಡಿದ್ದಾರೆʼ ಎಂದಿದ್ದಾರೆ.

ಬಿಜೆಪಿಯವರು ಇಂತಹ ವಿಷಯಗಳನ್ನು ಮಾತ್ರ ಆಯ್ಕೆ ಮಾಡುತ್ತದೆ. ಪರೇಶ್ ಮೇಸ್ತಾ ವಿಚಾರದಲ್ಲಿ ಕೈ ಹಾಕಿದ್ದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಪುನಃ ಗಲಭೆಗೆ ಮುಂದಾಗಿದ್ದರು ಎಂದು ಸಮಾಧಾನ ವ್ಯಕ್ತಪಡಿಸಿದರು.

ದೇಶ ಗಲಭೆಯ ಕಾರಣಕ್ಕೆ ಪ್ರಸಿದ್ಧವಾಗಿಲ್ಲ:

ನಮ್ಮ ದೇಶ ಗಲಭೆಯ ಕಾರಣಕ್ಕೆ ಪ್ರಸಿದ್ಧವಾಗಿಲ್ಲ, ಬದಲಾಗಿ ವೈವಿಧ್ಯತೆಯ ಕಾರಣಕ್ಕೆ ಮನ್ನಣೆ ಗಳಿಸಿದೆ. ಶಾಲೆಯಲ್ಲಿ ಮಕ್ಕಳು ಸಮಾನವಾಗಿರಬೇಕು. ಇದು ಸೂಕ್ಷ್ಮ ವಿಷಯ ಅನ್ನುತ್ತಾರೆ. ಹಾಗೆಯೇ ಅವರವರ ಧರ್ಮದ ಪದ್ಧತಿಗೂ ಮನ್ನಣೆ ನೀಡಬೇಕಿದೆ. ಹಿಜಾಬ್ ಕುರಿತು ಎಸ್‌ಡಿಎಂಸಿ ಅವರು ತೀರ್ಮಾನ ಕೈಗೊಳ್ಳಬಹುದು ಎಂದು ನ್ಯಾಯಾಲಯ ಆದೇಶಿಸಿತ್ತು ಎಂದರು.

ಬಿಜೆಪಿಯವರು ಬರ ಅಧ್ಯಯನ ನಡೆಸಿದ್ದು, ಅದರ ವರದಿ ಎಲ್ಲಿದೆ. ಮೊದಲು ಅದನ್ನು ಕೇಂದ್ರಕ್ಕೆ ತಲುಪಿಸಲಿ. ರಾಜ್ಯದಿಂದ ಕೇಂದ್ರಕ್ಕೆ 4 ಲಕ್ಷ ರೂ. ತೆರಿಗೆ ಪಾವತಿ ಆಗುತ್ತಿದೆ. ಆದರೆ ಕಡಿಮೆ ಪಾಲು ಬರುತ್ತಿದೆ. ಇಂತಹ ವಿಷಯಗಳನ್ನು ಬಿಜೆಪಿ ಪ್ರಸ್ತಾಪಿಸಲಿ ಎಂದು ತಿರುಗೇಟು ನೀಡಿದರು.

"ಹಿಜಾಬ್ ನಿಷೇಧ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಮಾಲೋಚಿಸಲಿದ್ದಾರೆ. ಕಾನೂನು ಇಲಾಖೆ ಅಧಿಕಾರಿಗಳು ಕೂಡ ಪರಿಶೀಲಿಸಲಿದ್ದಾರೆ. ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ" ಎಂದು ಪುನರುಚ್ಚರಿಸಿದರು.

ಹಿಜಾಬ್ ವಿಚಾರದಲ್ಲಿ ರಾಜ್ಯದಲ್ಲಿ ಗಲಭೆಯಾದ್ರೆ ಸಿಎಂ ಸಿದ್ದರಾಮಯ್ಯ ಕಾರಣ ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಂಗೆ ಮಾಡುವವರೇ ಹೀಗೆ ಹೇಳುವುದು. ಕಾನೂನು ಬಹಳ ಗಟ್ಟಿಯಾಗಿದೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ. ಎಲ್ಲಾ ಧರ್ಮಗಳಿಗೂ ಗೌರವ ಕೊಡಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಆರ್.ಪ್ರಸನ್ನ ಕುಮಾರ್, ವಿಜಯ ಕುಮಾರ್, ಕಲಗೋಡು ರತ್ನಾಕರ್,ಜಿ.ಡಿ ಮಂಜುನಾಥ್, ಎಸ್.ಪಿ.ದಿನೇಶ್ ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X