Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಡ್ಯ ಕೃಷಿ ವಿವಿಯ ಹೆಸರಿನಲ್ಲಿ ರಾಜಕೀಯ...

ಮಂಡ್ಯ ಕೃಷಿ ವಿವಿಯ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿ ಬುದ್ಧಿ ನನಗಿಲ್ಲ: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ27 March 2025 2:08 PM IST
share
ಮಂಡ್ಯ ಕೃಷಿ ವಿವಿಯ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿ ಬುದ್ಧಿ ನನಗಿಲ್ಲ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕೃಷಿ ವಿವಿ ಸ್ಥಾಪನೆ ಬಗ್ಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ನಾನೆಂದೂ ಬೆರೆಸಿಲ್ಲ, ಇದು ನನ್ನ ವ್ಯಕ್ತಿತ್ವಕ್ಕೆ ಸಲ್ಲದ ನಡವಳಿಕೆ. ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದಿದ್ದಾರೆ.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ಮಂಡ್ಯ ಜಿಲ್ಲೆ ಹಿತಕ್ಕೆ ಸಂಬಂಧಿಸಿ ಅಲ್ಲಿನ ಜನಪ್ರತಿನಿಧಿಯಾಗಿ ನನ್ನದೂ ಹೊಣೆಗಾರಿಕೆ ಇದೆ. ಈ ಬಗ್ಗೆ ನನ್ನಲ್ಲಿ ಗೊಂದಲ ಇಲ್ಲ, ಇದು ಸ್ಪಷ್ಟ. ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ ಮತ್ತು ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಕಿವಿಮಾತು ಹೇಳಿದ್ದಾರೆ.

ನನ್ನನ್ನು ಸಂಸದನನ್ನಾಗಿ ಆಯ್ಕೆ ಮಾಡಿರುವ ಮಂಡ್ಯ ಜನತೆಗೆ ನಾನೆಂದಿಗೂ ಆಭಾರಿ. ಅದಕ್ಕೆ ತಕ್ಕಂತೆ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಬೇಕಿರುವ ಕಾರ್ಯಕ್ರಮ, ಯೋಜನೆಗಳ ಬಗ್ಗೆ ಅವಿರತವಾಗಿ ಕೆಲಸ ಮಾಡುತ್ತಿದ್ದೇನೆ. ಕೇಂದ್ರ ಸಚಿವನಾಗಿ ಇಡೀ ರಾಜ್ಯದ ಮತ್ತು ಸಂಸದನಾಗಿ ಮಂಡ್ಯದ ಆಶೋತ್ತರಗಳ ಈಡೇರಿಕೆಗೆ ನಾನು ಬದ್ಧ, ಅದರಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ತಿಳಿಗೇಡಿಗಳು, ಅದಕ್ಕೆ ತುಪ್ಪ ಸುರಿಯುವ ಸೋಗಲಾಡಿಗಳು ಸತ್ಯ ಅರಿತುಕೊಳ್ಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X