Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಐಎಎಸ್, ಕೆಎಎಸ್ ಅಧಿಕಾರಿಗಳ...

ಐಎಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ-ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Sept 2026 9:37 PM IST
share
ಐಎಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ-ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಸರಕಾರವು 6 ಮಂದಿ ಕೆಎಎಸ್, ಮೂವರು ಐಎಎಸ್ ಅಧಿಕಾರಿಗಳಿಗೆ ವರ್ಗಾವಣೆ ಹಾಗೂ 8 ಮಂದಿ ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಸೋಮವಾರ ಆದೇಶ ಹೊರಡಿಸಿದೆ.

ವರ್ಗಾವಣೆ: ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ರಾಕೇಶ್ ಕುಮಾರ್ ಕೆ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ದಕ್ಷಿಣ ಪಾಲಿಕೆಯ ಆಯುಕ್ತರನ್ನಾಗಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ದಕ್ಷಿಣ ಪಾಲಿಕೆಯ ಆಯುಕ್ತರಾಗಿದ್ದ ರಮೇಶ್ ಕೆ.ಎನ್. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಆರೋಗ್ಯ ಮತ್ತು ಶಿಕ್ಷಣ)ರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಆರೋಗ್ಯ ಮತ್ತು ಶಿಕ್ಷಣ) ವೆಂಕಟಾಚಲಪತಿ ಆರ್. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಎಫ್‍ಇಸಿಸಿ, ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಂಯೋಜನೆ)ರಾಗಿ ಶಿಲ್ಪಾ ನಾಗ್, ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಪುರುರಾಜ್ ಸಿಂಗ್ ಸೋಲಂಕಿ, ಕಲಬುರಗಿ ಜಿಲ್ಲೆಯ ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರಿತಿಕಾ ವರ್ಮ ಅವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ.

ವಿಜಯಪುರ ಜಿಲ್ಲೆಯ ವಿಜಯಪುರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಝುಲ್ಫಿಶಾನ್ ಹಖ್, ಬೀದರ್ ಜಿಲ್ಲೆಯ ಬೀದರ್ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಅಭಿನವ್ ಜೈನ್, ಹಾವೇರಿ ಜಿಲ್ಲೆಯ ಸವಣೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಖೋಡೆ ಸಮೀರ್ ಪ್ರಕಾಶ್ ಅವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರಮ್ಯಾ ಆರ್. ಹಾಗೂ ರಾಯಚೂರು ಜಿಲ್ಲೆಯ ಲಿಂಗಸುಗೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ನಾಗೇಂದ್ರ ಬಾಬು ಕುಮಾರ್ ಅವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಕೆಎಎಸ್: ರಾಯಚೂರು ಜಿಲ್ಲೆಯ ಲಿಂಗಸುಗೂರು ಉಪ ವಿಭಾಗದ ಸಹಾಯಕ ಆಯುಕ್ತ ಬಸವಣ್ಣಪ್ಪ ಕಾಲಶೆಟ್ಟಿ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ, ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಎಸ್.ರವಿ ಅವರನ್ನು ಕೊಟ್ಟೂರು-ಹರಿಹರ ರೈಲ್ವೆ ಬ್ರಾಡ್‍ಗೇಜ್ ನಿರ್ಮಾಣ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತ ಶಾ ಆಲಮ್ ಹುಸೇನ್ ಅವರನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಧಾರವಾಡದ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ, ವಿಜಯಪುರ ಉಪ ವಿಭಾಗದ ಸಹಾಯಕ ಆಯುಕ್ತ ಗುರುನಾಥ ಶಿವಪುತ್ರಪ್ಪ ಧಡ್ಡೆ ಅವರನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಬೀದರ್ ಉಪ ವಿಭಾಗದ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್ ಅವರನ್ನು ಕಲಬುರಗಿ ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ)ರಾಗಿ ಹಾಗೂ ಹಾವೇರಿ ಜಿಲ್ಲೆಯ ಸವಣೂರು ಉಪ ವಿಭಾಗದ ಸಹಾಯಕ ಆಯುಕ್ತ ವಿಜಯಕುಮಾರ್ ಎಚ್.ಬಿ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯಕ ಆಯುಕ್ತ(ಚುನಾವಣೆ)ರನ್ನಾಗಿ ವರ್ಗಾವಣೆಗೊಳಿಸಲಾಗಿದೆ.

Tags

IASKASKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X